ಬ್ರೇಕಿಂಗ್ ನ್ಯೂಸ್
11-04-25 04:38 pm Bangalore Correspondent ಕ್ರೈಂ
ಬೆಂಗಳೂರು, ಎ.11 : ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ವಿಭಾಗವನ್ನು ಕರ್ನಾಟಕದಲ್ಲಿ ಸ್ಥಾಪನೆ ಮಾಡಲಾಗಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧ ಕೃತ್ಯಗಳ ವಿರುದ್ಧ ಕಾರ್ಯಾಚರಣೆ ನಡೆಸುವುದಕ್ಕಾಗಿ ತನಿಖಾ ತಂಡ ರೆಡಿ ಮಾಡಲಾಗಿದೆ.
ತನಿಖಾ ಘಟಕದ ಡಿಐಜಿಯಾಗಿ ಭೂಷಣ್ ಬೊರಸೆ ಅವರನ್ನು ನೇಮಕ ಮಾಡಲಾಗಿದೆ. ಐಜಿಪಿ, ಎಸ್ಪಿ ಸೇರಿದಂತೆ ಇತರ ಸಿಬ್ಬಂದಿಯನ್ನು ಹಂತ ಹಂತವಾಗಿ ನೇಮಕ ಮಾಡಲು ಸರ್ಕಾರ ಉದ್ದೇಶಿಸಿದೆ. ಡಿಜಿ ಶ್ರೇಣಿಯ ಐಪಿಎಸ್ ಅಧಿಕಾರಿಯನ್ನು ವಿಭಾಗದ ಮುಖ್ಯಸ್ಥರನ್ನಾಗಿ ಮಾಡಲಾಗಿದೆ. ಡಿಜಿ ಪ್ರಣವ್ ಮೊಹಾಂತಿ ಅವರಿಗೆ ಹೊಣೆಗಾರಿಕೆಯನ್ನು ನೀಡಲು ನಿರ್ಧರಿಸಲಾಗಿದೆ.
ಸೈಬರ್ ಕಮಾಂಡ್ ಸೆಂಟರ್ ಕೆಲಸವೇನು?
ಸೈಬರ್ ಭದ್ರತೆ, ಸೈಬರ್ ಅಪರಾಧ, ರಾನ್ಸಮ್‌ವೇರ್ ಫೈಲ್, ಹಿಂಬಾಲಿಸುವುದು, ಮಹಿಳೆಯರು ಮತ್ತು ಮಕ್ಕಳ ಮೇಲಿನ ಆನ್‌ಲೈನ್ ಅಪರಾಧಗಳು, ಸೆಕ್ಸ್‌ಟಾರ್ಷನ್, ಡಿಜಿಟಲ್ ಅರೆಸ್ಟ್ ಸೇರಿದಂತೆ ಸೈಬರ್ ವಂಚನೆಗಳು, ಡೀಪ್‌ಫೇಕ್‌ಗಳು, ಐಡೆಂಟಿಟಿ ತೆಫ್ಟ್, ಹ್ಯಾಕಿಂಗ್, ಡೇಟಾ ಉಲ್ಲಂಘನೆ, ತಪ್ಪು ಮಾಹಿತಿ ಇತ್ಯಾದಿಗಳ ವಿರುದ್ಧ ಸೈಬರ್ ಕಮಾಂಡ್ ಸೆಂಟರ್ ಕಾರ್ಯಾಚರಣೆ ನಡೆಸಲಿದೆ. ಈ ಮೊದಲು ಸೈಬರ್ ಕ್ರೈಂ ಮತ್ತು ನಾರ್ಕೋಟಿಕ್ಸ್ ವಿಭಾಗವು ಪೊಲೀಸ್ ಇಲಾಖೆಯಲ್ಲೇ ಸೈಬರ್ ಅಪರಾಧ ಪ್ರಕರಣಗಳ ವಿಭಾಗದಿಂದ ತನಿಖೆ ನಡೆಸಲಾಗುತ್ತಿತ್ತು.
2001 ರಲ್ಲಿ ಭಾರತದ ಮೊದಲ ಸೈಬರ್ ಅಪರಾಧ ಪೊಲೀಸ್ ಠಾಣೆಯನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗಿತ್ತು. ಸೈಬರ್ ಅಪರಾಧ ಪತ್ತೆಗೆ ಪ್ರತ್ಯೇಕ ಠಾಣೆ ತೆರೆದ ಮೊದಲ ರಾಜ್ಯವೆಂಬ ಹೆಗ್ಗಳಿಕೆ ಸಿಕ್ಕಿತ್ತು. ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಈ ಠಾಣೆಯನ್ನು ತೆರೆದಿದ್ದರೂ ಅಪರಾಧ ಪ್ರಕರಣ ಹೆಚ್ಚುತ್ತಿದ್ದರಿಂದ 2017 ರ ಮಾರ್ಚ್ನಲ್ಲಿ ಬೆಂಗಳೂರಿನಲ್ಲಿ ಪ್ರತ್ಯೇಕ ಸೈಬರ್ ಅಪರಾಧ ಠಾಣೆ ಸ್ಥಾಪನೆಯಾಗಿತ್ತು.
ರಾಜ್ಯದಲ್ಲಿ ಸೈಬರ್ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿರುವ ಕಾರಣ ತನಿಖೆಗೆ ಪ್ರತ್ಯೇಕ ಘಟಕ ಸ್ಥಾಪನೆ ಮಾಡಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಪ್ರಸ್ತಾವನೆ ಸಲ್ಲಿಸಿದ್ದರು. ಇದಕ್ಕೆ ಸರ್ಕಾರ ಸಮ್ಮತಿ ಸೂಚಿಸಿದ್ದು, ಈಗ ಸೈಬರ್ ಕಮಾಂಡ್ ಸೆಂಟರ್ ಗೆ ಚಾಲನೆ ನೀಡಿದ್ದು ರಾಜ್ಯದಲ್ಲಿರುವ ಎಲ್ಲ 43 ಸೈಬರ್ ಠಾಣೆಗಳನ್ನ ಇದಕ್ಕೆ ಸೇರಿಸಲಾಗುತ್ತದೆ. ಈವರೆಗೆ ಸಿಇಎನ್ ಠಾಣೆಗಳೆಂದಿದ್ದ ಇವುಗಳಿಗೆ ಮುಂದೆ ಸೈಬರ್ ಠಾಣೆಗಳೆಂದೇ ಹೆಸರಿಸಲಾಗುತ್ತದೆ.
ಕಳೆದ ನಾಲ್ಕು ವರ್ಷಗಳಲ್ಲಿ ಕರ್ನಾಟಕದಲ್ಲಿ 52 ಸಾವಿರ ಸೈಬರ್ ಕ್ರೈಮ್ ಕೇಸುಗಳು ದಾಖಲಾಗಿವೆ. ಇದಲ್ಲದೆ, ಬೆಂಗಳೂರಿನಂತಹ ಮೆಟ್ರೋಪಾಲಿಟನ್ ನಗರಗಳಲ್ಲಿ ಒಟ್ಟು ಕೇಸುಗಳ ಪೈಕಿ 20 ಶೇ. ಸೈಬರ್ ಕ್ರೈಮ್ ಗಳೇ ದಾಖಲಾಗಿರುವ ಬಗ್ಗೆ ಅಂಕಿ ಅಂಶಗಳು ಹೇಳುತ್ತವೆ. ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಕರ್ನಾಟಕದಲ್ಲಿಯೇ ಸೈಬರ್ ಕೇಸುಗಳು ದಾಖಲಾಗಿವೆ. ಹೀಗಾಗಿ ಸೈಬರ್ ಕಮಾಂಡ್ ಸೆಂಟರ್ ಮೂಲಕ ಈ ಕೇಸುಗಳನ್ನು ತನಿಖೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಒಟ್ಟು 72 ಕೋಟಿ ಅನುದಾನ ನೀಡುವಂತೆ ಪೊಲೀಸ್ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಮೊದಲ ಹಂತದಲ್ಲಿ 5 ಕೋಟಿ ಅನುದಾನ ಬಿಡುಗಡೆಗೆ ಸರಕಾರ ಸಮ್ಮತಿಸಿದೆ ಎನ್ನಲಾಗಿದೆ.
Karnataka has once again taken the lead in setting up the first Cyber Command Centre in the country. It becomes the first state to set up a comprehensive cyber command that will look into cyber security, cybercrime, ransomware, stalking, online crimes against women and children, sextortion, cyber frauds, including digital arrest, deepfakes, identity thefts, hacking, data breaches, outreach, disinformation, etc.
12-04-25 11:09 pm
Bangalore Correspondent
Annapoorneshwari Nagar Police Inspector, A.V....
11-04-25 11:10 pm
Sameer MD, Vidoe Deleted, Dharmasthala: ಸೌಜನ್...
11-04-25 10:27 pm
Bangalore High court, Birthday, suspend: ಬೆಂಗ...
11-04-25 03:45 pm
Yatnal, Muslim, Prophet Muhammad Paigambar: ಪ...
11-04-25 03:28 pm
12-04-25 09:01 pm
HK News Desk
Indian Mujahideen, Yasin Bhatkal: ಹೈದರಾಬಾದ್ ಬ...
10-04-25 09:10 pm
ಪಂಬನ್ ಸೇತುವೆ ಬೆನ್ನಲ್ಲೇ ಲಂಕಾ- ಭಾರತ ರೈಲ್ವೇ ಯಾನ...
10-04-25 01:25 pm
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
Tahawwur Rana, India: ಮುಂಬೈ ದಾಳಿಯ ಮಾಸ್ಟರ್ ಮೈಂ...
09-04-25 04:07 pm
12-04-25 10:13 pm
Mangalore Correspondent
Mangalore Kambala, Dk Shivakumar: ಮುಂದಿನ ವರ್ಷ...
12-04-25 09:43 pm
Dinesh Gundurao, Mangalore: ಸರಕಾರಿ ಆಸ್ಪತ್ರೆಗಳ...
12-04-25 05:30 pm
Mangalore Subrahmanya train, Timings: ಎ.12ರಿಂ...
11-04-25 02:49 pm
Mangalore, Kolya, accident: ತೆಂಗಿನ ಮರದಿಂದ ಕೆಳ...
11-04-25 10:35 am
12-04-25 10:52 pm
Mangalore Correspondent
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm
Cyber Command Centre, Bangalore: ದೇಶದ ಮೊದಲ ಸೈ...
11-04-25 04:38 pm
Davanagere Murder, Suicide, Crime: ಪ್ರೀತಿಸಿ ಮ...
11-04-25 01:52 pm
Mangalore Auto Driver, Kunjathbail, Body, Cri...
11-04-25 11:42 am