ಬ್ರೇಕಿಂಗ್ ನ್ಯೂಸ್
15-05-25 12:14 pm HK Staff ಕ್ರೈಂ
ಬೆಂಗಳೂರು, ಮೇ 14: ಕೆಲಸಕ್ಕಾಗಿ ನೀವೇನಾದರೂ ಇಂಟರ್ವ್ಯೂಗೆ ಹೋದರೆ ಹುಷಾರಾಗಿರಿ. ಕಾರಣ, ಸಂದರ್ಶನ ಮಾಡುವ ಸೋಗಿನಲ್ಲಿ, ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದ ಆರೋಪಿ ಹೆಚ್ಆರ್ ಸಿಸಿಬಿ ಪೊಲೀಸರ ಅತಿಥಿಯಾಗಿದ್ಧಾನೆ.
ಮೆಕ್ರೋಸಾಪ್ಟ್, ಬಾಷ್ ಸೇರಿ ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 8 ಮಂದಿ ಉದ್ಯೊಗಾಂಕ್ಷಿಗಳಿಂದ 14.23 ಲಕ್ಷ ಹಣ ಪಡೆದಿದ್ದ ಖಾಸಗಿ ಕಂಪನಿಯ ನೌಕರನನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಂಚನೆಗೊಳಗಾದ ಯುವತಿಯು ನೀಡಿದ ದೂರು ಆಧರಿಸಿ ಪತ್ನೂಲ್ ಕಲಂದರ್ ಖಾನ್ (43) ಎಂಬವನನ್ನು ಬಂಧಿಸಿ, ಆತನಿಂದ 1.50 ಲಕ್ಷ ರೂ. ಹಣ ವಶಕ್ಕೆ ಪಡೆಯಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಮುಖ ಆರೋಪಿ ಕಲಂದರ್ ಜೆ.ಪಿ.ನಗರದ ಸಾರಕ್ಕಿ ನಿವಾಸಿಯಾಗಿದ್ದು, ಖಾಸಗಿ ಕಂಪನಿಯಲ್ಲಿ ಹೆಚ್ಆರ್ ಆಗಿ ಕೆಲಸ ಮಾಡುತ್ತಿದ್ದ. ಇದೇ ವೇಳೆ ವಂಚನೆಗೊಳಗಾದ ಯುವತಿಯು ಆರೋಪಿ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಕೆಲಸ ಖಾಲಿಯಿರುವುದಾಗಿ ಆನ್ಲೈನ್ನಲ್ಲಿ ತಿಳಿದುಕೊಂಡು ಸಂದರ್ಶನಕ್ಕೆ ಹೋಗಿದ್ದಳು.
ಸಂದರ್ಶನ ನಡೆಸಿದ ಆರೋಪಿಯು ವಿದ್ಯಾರ್ಹತೆ ಹೆಚ್ಚಿದ್ದು, ಪ್ರತಿಷ್ಠಿತ ಕಂಪನಿಯಲ್ಲಿ ನನ್ನ ಸ್ನೇಹಿತರಿದ್ದಾರೆ. ಅಲ್ಲಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಆಕೆಯ ಮೊಬೈಲ್ ನಂಬರ್ ಪಡೆದುಕೊಂಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೆಕ್ರೋಸಾಫ್ಟ್ ಕಂಪನಿಯಲ್ಲಿ ಕೆಲಸ ಖಾಲಿಯಿದ್ದು, ಹುದ್ದೆ ಕೊಡಿಸಬೇಕಾದರೆ 2.70 ಲಕ್ಷ ರೂ. ಖರ್ಚಾಗುತ್ತದೆ ಎಂದು ಸುಳ್ಳು ಹೇಳಿ ಯುವತಿಯಿಂದ ಹಣ ವರ್ಗಾಯಿಸಿಕೊಂಡಿದ್ದ. ಇದೇ ರೀತಿ ಇನ್ನಿತರ ಏಳು ಮಂದಿಗೂ ಕೆಲಸ ಕೊಡಿಸುವುದಾಗಿ ಹೇಳಿ ಒಟ್ಟು 14.23 ಲಕ್ಷ ರೂಪಾಯಿ ಯುಪಿಎ ಮೂಲಕ ಹಣ ವರ್ಗಾಯಿಸಿ ಮೋಸ ಮಾಡಿದ್ದ. ಸದ್ಯ ಓರ್ವನನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಸಹಕರಿಸಿದ್ದ ಇನ್ನಿಬ್ಬರು ತಲೆಮರೆಸಿಕೊಂಡಿದ್ಧಾರೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ.
A man posing as a job consultant has been arrested for duping eight individuals by promising lucrative positions at top multinational companies, including Microsoft and Bosch. The accused, identified as Patnool Khalander Khan, a resident of JP Nagar, allegedly collected a total of ₹14 lakh from the victims under the pretense of securing them high-paying jobs.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm