ಬ್ರೇಕಿಂಗ್ ನ್ಯೂಸ್
16-05-25 09:20 pm HK News Desk ಕ್ರೈಂ
ಬೆಳಗಾವಿ, ಮೇ 16 : ತಾಲೂಕಿನ ಸಂತಿ ಬಸ್ತವಾಡ ಗ್ರಾಮದ ಮಸೀದಿಯಲ್ಲಿ ಇಟ್ಟಿದ್ದ ಕುರಾನ್ ಹೊತ್ತೊಯ್ದು ಸುಟ್ಟು ಹಾಕಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು.
ಮೇ 11ರಂದು ಸಂತಿ ಬಸ್ತವಾಡ ಗ್ರಾಮದ ಮಸೀದಿಯಲ್ಲಿ ಯಾರೋ ದುಷ್ಕರ್ಮಿಗಳು ಕುರಾನ್ ಹೊತ್ತೊಯ್ದು, 100 ಮೀಟರ್ ಅಂತರದಲ್ಲಿ ಬೆಂಕಿ ಹಚ್ಚಿ ಸುಟ್ಟು ಪರಾರಿಯಾಗಿದ್ದರು. ಬಳಿಕ ಘಟನಾ ಸ್ಥಳಕ್ಕೆ ತೆರಳಿ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಸಭೆ ನಡೆಸಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದರು. ಅಲ್ಲದೇ ಮೂರು ದಿನಗಳೊಳಗೆ ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಮೂರು ದಿನಗಳು ಕಳೆದರೂ ಆರೋಪಿಗಳ ಸುಳಿವು ಪತ್ತೆಯಾಗದ ಹಿನ್ನೆಲೆ ಇಂದು ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಮುಸ್ಲಿಂ ಸಮುದಾಯದ ಜನ ಬೃಹತ್ ಪ್ರತಿಭಟನೆ ನಡೆಸಿದರು.







ಪ್ರತಿಭಟನಾಕಾರರು ತ್ರಿವರ್ಣ ಧ್ವಜ ಹಿಡಿದು, ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ‘ಕುರಾನ್ ರಕ್ಷಣೆ ನಮ್ಮೆಲ್ಲರ ಕರ್ತವ್ಯ’ ಎಂಬ ಭಿತ್ತಿಪತ್ರ ಪ್ರದರ್ಶಿಸಿದರು. ಪವಿತ್ರ ಕುರಾನ್ ಸುಟ್ಟಿರುವ ಆರೋಪಿಗೆ ಗಲ್ಲಿಗೇರಿಸುವಂತೆ ಪಟ್ಟು ಒತ್ತಾಯಿಸಿದರು.
ಚನ್ನಮ್ಮ ವೃತ್ತದಲ್ಲಿ ಸತತ ಒಂದೂವರೆ ಗಂಟೆಗಳ ಕಾಲ ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿದರು. ರಾಜ್ಯದಲ್ಲಿ ಎಲ್ಲಿಯೂ ಈ ರೀತಿ ಘಟನೆ ನಡೆದಿಲ್ಲ. ಇದರ ಹಿಂದೆ ಕಾಣದ ಕೈಗಳ ಕೈವಾಡವಿದೆ. ಅವರು ಯಾರು..? ಮತ್ತು ಅವರಿಗೆ ಯಾರು ಕುಮ್ಮಕ್ಕು ಕೊಟ್ಟಿದ್ದಾರೆ..? ಎಂಬುದನ್ನು ಪೊಲೀಸರು ಪತ್ತೆ ಹಚ್ಚಬೇಕು. ಕಿಡಿಗೇಡಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು. ತಪ್ಪಿತಸ್ಥ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕೆಲ ಕಿಡಗೇಡಿಗಳು ಪೊಲೀಸರ ಮೇಲೆ ಚಪ್ಪಲಿ ತೂರಿದರು. ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ತೂರಿದ ಚಪ್ಪಲಿ ಸಿಪಿಐ ಮೇಲೆ ಬಿತ್ತು. ಪೊಲೀಸರು ಪ್ರತಿಭಟನಾ ನಿರತರನ್ನು ವಾಪಾಸ್ ಕಳುಹಿಸಿದರು.
ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಆರೋಪಿಗಳನ್ನು ತಕ್ಷಣವೇ ಪತ್ತೆ ಹಚ್ಚಿ ಬಂಧಿಸಿ, ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್, ಗ್ರಂಥವನ್ನು ಸುಟ್ಟಿರುವುದು ಅತ್ಯಂತ ಕೆಟ್ಟ ಮತ್ತು ದೊಡ್ಡ ಘಟನೆ. ಇದನ್ನು ಯಾರೂ ಸಹಿಸುವುದಿಲ್ಲ. ಇತರ ಸಮುದಾಯದ ಬಾಂಧವರು ಕೂಡ ಘಟನೆ ಖಂಡಿಸಿದ್ದಾರೆ. ಇಂದು ಶಾಂತಿಯುತ ಪ್ರತಿಭಟನೆ ಮಾಡಿದ್ದು, 7 ದಿನಗಳಲ್ಲಿ ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸ್ ಕಮಿಷನರ್ ಹೇಳಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಮಂಜುನಾಥ್ ಅವರನ್ನ ಅಮಾನತು ಮಾಡಲಾಗಿದೆ. ಒಂದು ವಾರದೊಳಗೆ ಆರೋಪಿಗಳ ಬಂಧನ ಆಗದಿದ್ದರೆ ಸಮಾಜ ಬಾಂಧವರು ಹೇಳಿದಂತೆ ಮುಂದಿನ ಹೆಜ್ಜೆ ಇಡಲಾಗುವುದು ಎಂದರು.
ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಿದ್ದರಿಂದ ಮುಂಜಾಗ್ರತ ಕ್ರಮವಾಗಿ ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ನಾಲ್ಕು ಕೆಎಸ್‌ಆರ್‌ಪಿ ತುಕಡಿಗಳು ಹಾಗೂ ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿತ್ತು. ಖುದ್ದು ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಕೂಡ ಸ್ಥಳದಲ್ಲಿ ಹಾಜರಿದ್ದು, ಭದ್ರತೆ ಪರಿಶೀಲಿಸಿದರು.
Members of the Muslim community gathered in large numbers at Chennamma Circle here on Friday, May 16, to protest condemning the alleged burning of a copy of the Quran in Santi Bastwad village in the district.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm