ಬ್ರೇಕಿಂಗ್ ನ್ಯೂಸ್
19-05-25 03:35 pm HK News Desk ಕ್ರೈಂ
ಬೆಳಗಾವಿ, ಮೇ 19 : ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಅತ್ತೆ, ಮಾವ ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದ ಘಟನೆ ಅಥಣಿ ತಾಲೂಕಿನ ಬಳ್ಳಿಗೇರಿ - ಮಲಾಬಾದ್ ರಸ್ತೆಯಲ್ಲಿ ನಡೆದಿದೆ.
ರೇಣುಕಾ ಸಂಜಯ ಹೊನಕಾಂಡೆ (32) ಕೊಲೆಯಾದವರು. ಮಾವ ಕಾಮಣ್ಣ ಹೊನಕಾಂಡೆ ಹಾಗೂ ಅತ್ತೆ ಜಯಶ್ರೀ ವಿರುದ್ಧ ಅಥಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ


ಅತ್ತೆ ಮತ್ತು ಮಾವ ಸೇರಿ ಸಂಚು ರೂಪಿಸಿ ರೇಣುಕಾಳನ್ನ ಬೈಕ್‌ನಲ್ಲಿ ಕರೆದೊಯ್ದು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಸಂದೇಹ ಬರದಂತೆ ಬೈಕ್ ಬಳಿ ಶವ ಮಲಗಿಸಿ ಬೈಕ್‌ನಿಂದ ಬಿದ್ದು ಮೃತಪಟ್ಟಿದ್ದಾರೆ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎಂದು ದೂರು ದಾಖಲಾಗಿದೆ.
ಮೇ 17 ರಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಮಲಬಾದಿ ಗ್ರಾಮದ ಹತ್ತಿರ ಆರೋಪಿತರಾದ ಕಾಮಣ್ಣ ಮತ್ತು ಜಯಶ್ರೀ ತಮ್ಮ ಮೋಟಾರ್ ಸೈಕಲ್ ಮೇಲೆ ಸೊಸೆ ರೇಣುಕಾಳನ್ನ ಕೂರಿಸಿಕೊಂಡು ಹೋಗಿ, ರಸ್ತೆ ಮೇಲೆ ಕೆಳಕ್ಕೆ ಕೆಡವಿದ್ದಾರೆ. ನಂತರ ಅವಳ ತಲೆಗೆ ಕಲ್ಲಿನಿಂದ ಜಜ್ಜಿ, ಕುತ್ತಿಗೆಗೆ ಸೀರೆಯಿಂದ ಬಿಗಿದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ರಾಕ್ಷಸರು.
ಇದಾದ ನಂತರ ಆರೋಪಿತ ಹಂತಕರು ದ್ವಿಚಕ್ರ ವಾಹನಕ್ಕೆ ಸೀರೆ ತಗುಲಿ ಬಿದ್ದು ಗಾಯಗೊಂಡು ಸೊಸೆ ಮೃತಪಟ್ಟಿದ್ದಾಳೆ ಎಂದು ಬಿಂಬಿಸೋಕೆ ಮುಂದಾಗಿದ್ದರು. ನಂತರ ಅವಳನ್ನು ಕೊಲೆ ಮಾಡಿದ ಸ್ಥಳದಿಂದ ಸುಮಾರು 120 ಅಡಿ ದೂರದವರೆಗೆ ಬೈಕ್‌ನಿಂದ ಎಳೆದುಕೊಂಡು ಹೋಗಿ, ಅವಳು ಬೈಕ್ ಮೇಲಿನಿಂದ ಬಿದ್ದು ಸತ್ತುಹೋಗಿರುತ್ತಾಳೆ ಎಂದು ಅಪಘಾತದ ದೃಶ್ಯವನ್ನು ಸೃಷ್ಟಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಈ ಮೂವರನ್ನ ತಮ್ಮ ಶೈಲಿಯಲ್ಲಿ ವಿಚಾರಿಸಬೇಕಾದರೆ ಸತ್ಯ ಸತ್ಯತೆಯನ್ನ ಬಾಯಿ ಬಿಟ್ಟಿದ್ದಾರೆ.
Shocking Belagavi Crime, Mother in law Kills Daughter in law for Not Having Children, Tries to Fake Accident.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm