ಬ್ರೇಕಿಂಗ್ ನ್ಯೂಸ್
10-06-25 12:44 pm Bangalore Correspondent ಕ್ರೈಂ
ಬೆಂಗಳೂರು, ಜೂ 10 : ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಮೂಲಕ ವಂಚಿಸಿದ್ದ ಇಬ್ಬರು ಆರೋಪಿಗಳನ್ನ ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾರಾಯಣ್ ಸಿಂಗ್ ಚೌಧರಿ ಹಾಗೂ ಈಶ್ವರ್ ಸಿಂಗ್ ಬಂಧಿತ ಆರೋಪಿಗಳು. ಮಂಜುನಾಥ್ ನೀಡಿದ ದೂರಿನನ್ವಯ ತನಿಖೆ ಕೈಗೊಂಡಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಇಂಜಿನಿಯರ್ ಆಗಿದ್ದ ಮಂಜುನಾಥ್ 31 ವರ್ಷಗಳ ಕಾಲ ನೈಜೀರಿಯಾದಲ್ಲಿ ಕೆಲಸ ನಿರ್ವಹಿಸಿ, ನಿವೃತ್ತಿಯ ಬಳಿಕ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಬ್ಯಾಂಕ್‌ನ ಪ್ರತಿನಿಧಿಗಳ ಸೋಗಿನಲ್ಲಿ ಮಾರ್ಚ್ ತಿಂಗಳಿನಲ್ಲಿ ಮಂಜುನಾಥ್ ಅವರಿಗೆ ಕರೆ ಮಾಡಿದ್ದ ಆರೋಪಿಗಳು, "ಕ್ರೆಡಿಟ್ ಕಾರ್ಡ್ ಲಿಮಿಟ್ ಓವರ್ ಡ್ಯೂ ಆಗಿದೆ" ಎಂದು ವಿವರಗಳನ್ನು ಪಡೆದುಕೊಂಡಿದ್ದರು. ಬಳಿಕ ನಿಮ್ಮ ಖಾತೆಯ ಮೂಲಕ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ, ಆದ್ದರಿಂದ ಇಡಿ, ಸಿಬಿಐನಲ್ಲಿ ಪ್ರಕರಣ ದಾಖಲಾಗಿದೆ ಎಂದಿದ್ದರು. ನಂತರ ನಕಲಿ ವಾರೆಂಟ್‌ನ ಫೋಟೋ ಕಳಿಸಿ "ನಿಮ್ಮನ್ನ ಬಂಧಿಸುತ್ತಿದ್ದು, ತಿಹಾರ್ ಜೈಲಿನಲ್ಲಿರಿಸಲಿದ್ದೇವೆ" ಎಂದು ಬೆದರಿಸಿದ್ದರು. ಹೀಗೆ.. ಮೂರು ತಿಂಗಳ ಕಾಲ ಬೆದರಿಸುತ್ತ ವಿವಿಧ ಹಂತಗಳಲ್ಲಿ 4.79 ಕೋಟಿ ರೂಪಾಯಿ ಸುಲಿಗೆಗೈದಿದ್ದ ಆರೋಪಿಗಳು, ಆಸ್ತಿ ಪತ್ರಗಳ ಕಾಪಿಗಳನ್ನು ಸಹ ಪಡೆದುಕೊಂಡಿದ್ದರು. ವಂಚಕರ ಕಿರುಕುಳ ಅತಿಯಾದಾಗ ಅದನ್ನು ತಾಳಲಾರದ ದಂಪತಿ ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವೃದ್ಧ ದಂಪತಿಯ ಖಾತೆಯಿಂದ ಹಣ ವರ್ಗಾವಣೆ ಮಾಡಿಕೊಂಡಿದ್ದ ನಾರಾಯಣ್ ಸಿಂಗ್ ಚೌಧರಿ ಹಾಗೂ ಈಶ್ವರ್ ಸಿಂಗ್ ಅವರನ್ನು ಬಂಧಿಸಿದ್ದಾರೆ. ವಂಚಿಸಿದ ಹಣವನ್ನ ಆರೋಪಿಗಳು ಶ್ರೀಲಂಕಾದಲ್ಲಿ ಕ್ಯಾಸಿನೋ ಆಡಲು ಬಳಸಿರುವುದು ಸಹ ಗೊತ್ತಾಗಿದೆ. ಸದ್ಯ ಆರೋಪಿತರ ವಿಚಾರಣೆ ನಡೆಸಲಾಗುತ್ತಿದ್ದು, ವಂಚಿಸಿದ ಹಣವನ್ನು ಜಪ್ತಿ ಮಾಡಲಾಗುತ್ತಿದೆ ಎಂದು ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ತಿಳಿಸಿದ್ದಾರೆ.
In a shocking case of cyber fraud, an elderly couple in Bengaluru was duped of ₹4.79 crore by fraudsters posing as bank and law enforcement officials. The accused, Narayan Singh Choudhary and Ishwar Singh, have been arrested by the Central Crime Branch (CEN) Police of Bengaluru’s Southeast Division.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm