ಬ್ರೇಕಿಂಗ್ ನ್ಯೂಸ್
10-06-25 10:57 pm Udupi Correspondent ಕ್ರೈಂ
ಕುಂದಾಪುರ, ಜೂನ್ 10 : ಚಿಲ್ಲರೆ ವಿಚಾರಕ್ಕೆ ಮೆಡಿಕಲ್ ಶಾಪ್ ಸಿಬ್ಬಂದಿ ಯುವತಿಗೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.
ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್ ಶಾಪ್ ಸಿಬ್ಬಂದಿ ಲಕ್ಷ್ಮೀ ಎಂಬ ಯುವತಿಗೆ ಯಾಸ್ಮಿನ್ ಎಂಬ ಮಹಿಳೆ ಚಿಲ್ಲರೆ ವಿಚಾರಕ್ಕೆ ಹಲ್ಲೆ ನಡೆಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಹಲ್ಲೆ ನಡೆಸಿದ ಯಾಸ್ಮಿನ್ ಎಂಬ ಮಹಿಳೆಯನ್ನು ಅರೆಸ್ಟ್ ಮಾಡಲಾಗಿದೆ.
ಮಾವಿನಕಟ್ಟೆಯ ಮೆಡಿಕಲ್‌ಗೆ ಬಂದಿದ್ದ ಯಾಸ್ಮಿನ್, ಔಷಧ ಖರೀದಿಸಿ 500 ರೂ. ಕೊಟ್ಟಿದ್ದಳು. ಇದಕ್ಕೆ ಚಿಲ್ಲರೆ ಇಲ್ಲ, ಚಿಲ್ಲರೆ ಕೊಡಿ ಎಂದ ಯುವತಿ ಕೇಳಿದ್ದಾಳೆ. ಆದರೆ ಯಾಸ್ಮಿನ್ ಈ ವಿಚಾರದಲ್ಲಿ ಮಾತಿಗೆ ಮಾತು ಬೆಳೆಸಿ ಯುವತಿ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ನಡೆಸಿದ್ದಾಳೆ ಎಂದು ದೂರಲಾಗಿದೆ. ಹಲ್ಲೆಗೀಡಾದ ಲಕ್ಷ್ಮೀ ಕುಂದಾಪುರದ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆ ಸಂಬಂಧಿಸಿ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಅ.ಕೃ 34/2025,ಕಲಂ 352,115(2) BNS, 3(1)(r), 3(2)(va) SC/ST Act ರಂತೆ ಪ್ರಕರಣ ದಾಖಲಾಗಿದೆ. ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಎಸ್ಪಿ ಹರಿರಾಮ್ ಶಂಕರ್, ಸಂತ್ರಸ್ತ ಮಹಿಳೆಯನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.
A woman has been arrested in Kundapura after a video showing her assaulting a young female staff member at a medical shop over a change-related argument went viral on social media. The incident took place at a pharmacy in Mavinakatte, located in Gulvadi village.
24-06-25 05:23 pm
Bangalore Correspondent
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm