ಬ್ರೇಕಿಂಗ್ ನ್ಯೂಸ್
21-06-25 08:58 pm Mangaluru Correspondent ಕ್ರೈಂ
ಮಂಗಳೂರು, ಜೂನ್ 21: ಧರ್ಮಸ್ಥಳದ ಸೌಜನ್ಯಾ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ಅಸಹಾಯಕರಿಗೆ ನೆರವು ನೀಡುವ ನೆಪದಲ್ಲಿ ಬೆಳ್ತಂಗಡಿ ಮೂಲದ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿರುವ ಆರೋಪದಲ್ಲಿ ಬೆಂಗಳೂರಿನ ಸಂಧ್ಯಾ ಅಲಿಯಾಸ್ ಪವಿತ್ರ ನಾಗರಾಜ್ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಬಳಿಯ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ರಾಜೇಶ್ ವೃತ್ತಿಯಲ್ಲಿ ಗಾಯಕರಾಗಿದ್ದು, ಅರವಿಂದ್ ವಿವೇಕ್ ಎಂಬ ಫೇಸ್ಬುಕ್ ಪೇಜ್ನಲ್ಲಿ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. ರಾಜೇಶ್ ಅವರಿಗೆ ಪವಿತ್ರಾ ನಾಗರಾಜ್ 2024ರಲ್ಲಿ ಫೇಸ್ಬುಕ್ ಮೂಲಕ ಪರಿಚಯವಾಗಿದ್ದಳು. ಸೌಜನ್ಯಾ ಹೆಲ್ಪ್ಲೈನ್ ಹೆಸರಿನಲ್ಲಿ ವಂಚನೆಗೊಳಗಾದವರಿಗೆ ನೆರವು ನೆರವಾಗುತ್ತಿದ್ದೇನೆ. ಅಮಾಯಕರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಬಗೆಹರಿಸಿದ್ದೇನೆ ಎಂದು ಪೋಸು ಕೊಟ್ಟು ರಾಜೇಶ್ ಅವರನ್ನು ನಂಬಿಸಿದ್ದಾಳೆ.
ರಾಜೇಶ್ ಅವರು ಬಂಟ್ವಾಳ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣದ ಬಗ್ಗೆ ಸಂಧ್ಯಾಗೆ ತಿಳಿಸಿದ್ದಾರೆ. ಅದನ್ನು ಹೈಕೋರ್ಟ್ ಹಾಕಿ ಎಫ್ಐಆರ್ ರದ್ದುಪಡಿಸುತ್ತೇನೆ. ಅದಕ್ಕೆ ಸ್ವಲ್ಪ ಖರ್ಚು ಇದೆ ಎಂದಿದ್ದಾಳೆ. ನಂತರ, ರಾಜೇಶ್ ಅವರಿಂದ 2025ರ ಫೆಬ್ರವರಿ- ಮೇ ತಿಂಗಳಲ್ಲಿ ಹಂತ ಹಂತವಾಗಿ 3.20 ಲಕ್ಷ ರೂ. ಹಣ ಪಡೆದಿದ್ದಾಳೆ. ಹಣ ನೀಡಿದ ನಂತರವೂ ಸಮಸ್ಯೆ ಬಗೆಹರಿಯದ ಕಾರಣ ರಾಜೇಶ್ ಅವರು ಸಂಧ್ಯಾಗೆ ಪ್ರಶ್ನಿಸಿದ್ದಾರೆ.
ಈ ವೇಳೆ, ಸಂಧ್ಯಾ ಇನ್ನೂ ಹೆಚ್ಚಿನ ಹಣ ನೀಡುವಂತೆ ಕೇಳಿದ್ದಾಳೆ. ಇದರಿಂದ ಸಂಶಯಗೊಂಡ ರಾಜೇಶ್ ಅವರು ಹೈಕೋರ್ಟಿಗೆ ಸಲ್ಲಿಸಿರುವ ದಾಖಲೆಗಳನ್ನು ಕೊಡುವಂತೆ ಕೇಳಿದ್ದಾರೆ. ಇದಕ್ಕೆ ಸಂಧ್ಯಾ ಉಲ್ಟಾ ಮಾತನಾಡಿದ್ದು ಅವಾಚ್ಯ ಶಬ್ದಗಳಿಂದ ಬೈದು ಕೈಕಾಲು ಮುರಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ರಾಜೇಶ್ ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಸಿದ್ದು ಬಿಎನ್ಎಸ್ ಕಾಯ್ದೆ 318(4) ಮತ್ತು 351(2) ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇದೇ ಪವಿತ್ರಾ ನಾಗರಾಜ್ ಈ ಹಿಂದೆ ಚಳವಳಿ, ಹೋರಾಟದ ನೆಪದಲ್ಲಿ ಹತ್ತಿರವಾಗಿ ಎಸ್ಡಿಪಿಐ ಮುಖಂಡ ಬಿಆರ್ ಭಾಸ್ಕರ ಪ್ರಸಾದ್ ಅವರನ್ನು ಹನಿಟ್ರ್ಯಾಪ್ ಮಾಡಿ, ಆ ಬಗ್ಗೆಯೂ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿ ಬಂಧಿತಳಾಗಿದ್ದಳು.
A woman who operated under the alias Pavithra Nagaraj has been booked by Poonjalkatte Police in Mangalore for allegedly defrauding a man from Belthangady by posing as a social worker helping people in distress
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
23-01-26 11:44 am
Mangalore Correspondent
ಗಂಡ - ಹೆಂಡತಿ ಜಗಳ ; ಪುತ್ತೂರು ಕೋರ್ಟಿನಲ್ಲಿ ಜಡ್ಜ್...
22-01-26 02:55 pm
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm