ಬ್ರೇಕಿಂಗ್ ನ್ಯೂಸ್
25-06-25 11:11 pm Mangalore Correspondent ಕ್ರೈಂ
ಪುತ್ತೂರು, ಜೂನ್ 25 : ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿ ವಿವಾಹವಾಗಲು ನಿರಾಕರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಯುವಕನ ವಿರುದ್ಧ ಪುತ್ತೂರಿನಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಮುಖಂಡ, ವಾಸ್ತು ಶಿಲ್ಪಿ ಪಿಜಿ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ರಾವ್ (21) ಆರೋಪಿಯಾಗಿದ್ದು ಪ್ರಕರಣ ದಾಖಲಾಗುತ್ತಲೇ ಪರಾರಿಯಾಗಿದ್ದಾನೆ. ಈತನ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಕೇಸು ದಾಖಲಾಗಿದೆ.
ವಂಚನೆಗೆ ಒಳಗಾದ ಯುವತಿಯೂ ಪುತ್ತೂರಿನ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಆರೋಪಿಯು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆಕೆಯನ್ನು ಮನೆಗೆ ಕರೆಸಿಕೊಂಡು ಬಲಾತ್ಕಾರ ಮಾಡಿದ್ದ. ಇದೇ ರೀತಿ ಎರಡು ಬಾರಿ ಕೃತ್ಯ ಎಸಗಿದ್ದು ಯುವತಿ ಗರ್ಭವತಿಯಾಗಿದ್ದಳು. ಆನಂತರ, ಯುವತಿ ತನ್ನ ಮನೆಯವರಿಗೆ ಹೇಳಿ ಹುಡುಗನ ಮನೆಯವರ ಜೊತೆ ಮದುವೆ ಮಾತುಕತೆ ನಡೆಸಿದ್ದರು. ಮದುವೆಗೆ ಒಪ್ಪಿಗೆ ನೀಡಿದ್ದರೂ ಈಗ ಮದುವೆಯಾಗದೆ ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮೊದಲ ಬಾರಿಗೆ 2024ರ ಅಕ್ಟೋಬರ್ 11ರಂದು ತನ್ನ ಮನೆಗೆ ಕರೆಸಿಕೊಂಡು ಬಲವಂತದಿಂದ ಅತ್ಯಾಚಾರ ಮಾಡಿದ್ದ. ಆನಂತರವೂ ಅದೇ ರೀತಿ ಮನೆಗೆ ಕರೆಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದ. ಮದುವೆಯಾಗುವ ಬಗ್ಗೆ ಮನೆಯವರೂ ಭರವಸೆ ನೀಡಿದ್ದರು. ಈಗ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದು ಕೃಷ್ಣ ರಾವ್ ಮದುವೆಯಾಗಲು ನಿರಾಕರಿಸಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾಳೆ.
A case has been registered against a 21-year-old man from Puttur for allegedly sexually assaulting his female classmate under the false promise of marriage. The accused has been identified as Krishna Rao, son of prominent BJP leader and vastu expert P.G. Jagannivasa Rao.
20-07-25 07:55 pm
Bangalore Correspondent
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
20-07-25 03:06 pm
Mangaluru Correspondent
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
20-07-25 12:16 pm
HK News Desk
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm