ಬ್ರೇಕಿಂಗ್ ನ್ಯೂಸ್
29-06-25 04:26 pm HK News Desk ಕ್ರೈಂ
ದಾವಣಗೆರೆ, ಜೂ 29 : ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಖದೀಮರು ಮುಂದಾಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಬಳಿಕ ಪರಾರಿಯಾದ ಘಟನೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಕಳೆದ ಮಧ್ಯರಾತ್ರಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಳ್ಳರು ಮಧ್ಯರಾತ್ರಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದಾರೆ. ಮೊದಲು ಕಬ್ಬಿಣದ ಸರಳು ಬಳಸಿ ಎಟಿಎಂ ಒಡೆಯಲು ಯತ್ನಿಸಿದ್ದಾರೆ. ಅದು ಸಾಧ್ಯವಾಗದೇ ಇದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ದಟ್ಟ ಹೊಗೆ ಆವರಿಸುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಬ್ಯಾಂಕ್ ಸಿಬ್ಬಂದಿ ಪೊಲೀಸರ ಸಮೇತ ಎಟಿಎಂ ಬಳಿಗೆ ಧಾವಿಸಿದ್ದಾರೆ. ಬಿಳಿಚೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಫ್ಐಆರ್ ದಾಖಲಾಗಿದೆ.
ಇನ್ನು ಇದೇ ದಾವಣಗೆರೆಯಲ್ಲಿ ಆರು ತಿಂಗಳ ಹಿಂದಷ್ಟೇ ಎಸ್ ಬಿಐ ಬ್ಯಾಂಕ್ ಗೆ ಕನ್ನ ಹಾಕಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ 17 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.
ಬ್ಯಾಂಕ್ ದರೋಡೆಯಲ್ಲಿ ಇದೇ ಮೊದಲ ಬಾರಿಗೆ ಸೊತ್ತು ಸಹಿತ ಅರೋಪಿಗಳ ಬಂಧನವಾಗಿತ್ತು. ಈ ಹಿಂದೆ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಕರ್ನಾಟಕ ಬ್ಯಾಂಕ್ ನಲ್ಲಿ ಎರಡು ಬಾರಿ ದರೋಡೆ ನಡೆದಿತ್ತು. ಇದುವರೆಗೂ ದರೋಡೆಕೋರರ ಸುಳಿವು ಕೂಡ ಸಿಕ್ಕಿಲ್ಲ. ಆದರೆ ನ್ಯಾಮತಿ ಪಟ್ಟಣದ ಎಸ್ ಬಿಐ ಬ್ಯಾಂಕ್ ದರೋಡೆ ನಡೆದ ಆರು ತಿಂಗಳಲ್ಲಿ ಅರೋಪಿಗಳ ಪತ್ತೆ ಮಾಡಿ ಸೊತ್ತು ಸಮೇತ ಬಂದಿಸಿದರು.
A group of unidentified miscreants attempted to rob an ATM by setting it on fire in Bilichodu village, Jagalur taluk, late last night. The incident was captured on CCTV footage installed at the ATM center.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm