ಬ್ರೇಕಿಂಗ್ ನ್ಯೂಸ್
09-07-25 10:56 pm Mangalore Correspondent ಕ್ರೈಂ
ಮಂಗಳೂರು, ಜುಲೈ 9 : ಗಾಂಜಾ ಮತ್ತು ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಮೂಲದ ಮೂವರನ್ನು ಬಂಧಿಸಿದ್ದಾರೆ.
ಮಧ್ಯಪ್ರದೇಶ ರಾಜ್ಯದ ಬರ್ವಾನಿ ಜಿಲ್ಲೆಯ ಮಾಯಾರಾಮ್ (32), ಮಹಾರಾಷ್ಟ್ರ ರಾಜ್ಯದ ಜಲಗಾಂವ್ ಜಿಲ್ಲೆಯ ನಿವಾಸಿ ಪ್ರೇಮಸಿಂಗ್ ರಾಮ ಪವಾರ (48), ಅದೇ ಜಿಲ್ಲೆಯ ನಿವಾಸಿ ಅನಿಲ್ ಪ್ರಕಾಶ್ ಕೋಲಿ (35) ಬಂಧಿತರು. ಇವರ ವಿರುದ್ಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 31/2025 ಕಲಂ. 8(c),20(b)(ii)(B) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
ಸದ್ರಿ ಪ್ರಕರಣದಲ್ಲಿ ಮಾದಕ ವಸ್ತು ಸೇವನೆ ಮಾಡುವವರಿಂದ ತನಿಖೆ ಆರಂಭಿಸಿ ಹಂತ ಹಂತವಾಗಿ ಮಾದಕ ವಸ್ತಗಳನ್ನು ಮಂಗಳೂರು ನಗರಕ್ಕೆ ಪೂರೈಕೆ ಮಾಡುವ ಆರು ಜನರನ್ನು ಪತ್ತೆ ಮಾಡಿ ಈಗಾಗಲೇ ದಸ್ತಗಿರಿ ಕ್ರಮ ಕೈಗೊಂಡಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ.
ಪ್ರಕರಣ ತನಿಖೆಯ ವೇಳೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕ ವಸ್ತು ಸರಬರಾಜು ಆಗುತ್ತಿರುವ ಮಾಹಿತಿ ತಿಳಿದುಬಂದಿದ್ದು, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಕ್ಕೆ ವಿಶೇಷ ತಂಡವನ್ನು ಕಳುಹಿಸಿ ಮತ್ತೆ ಮೂರು ಜನ ಆರೋಪಿಗಳನ್ನು ಪತ್ತೆ ಮಾಡಿ ದಸ್ತಗಿರಿ ಮಾಡಲಾಗಿದೆ. ಆರೋಪಿತರು ಕೃತ್ಯಕ್ಕೆ ಬಳಸಿದ 03 ಮೊಬೈಲ್ ಫೋನ್ ಹಾಗೂ ನಗದು ಹಣ ರೂ.1,78,920/- ರೂಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ತನಿಖೆ ಮುಂದುವರೆದಿದ್ದು ಇನ್ನುಳಿದ ಆರೋಪಿತರನ್ನು ಶೀಘ್ರದಲ್ಲಿ ಪತ್ತೆ ಹಚ್ಚಲಾಗುವುದು. ಪ್ರಕರಣದ ಆರೋಪಿತರ ಪತ್ತೆ ಕಾರ್ಯದಲ್ಲಿ ಸೆನ್ ಕ್ರೈಂ ಪೊಲೀಸ್ ಠಾಣಾ ಮತ್ತು ಮಂಗಳೂರು ನಗರದ ವಿಶೇಷ ತಂಡದ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿರುತ್ತಾರೆ.
In a major breakthrough in the ongoing crackdown on narcotics, the Mangaluru City Police have arrested three more individuals linked to a drug supply network operating between Maharashtra, Madhya Pradesh, and Mangaluru.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm