ಬ್ರೇಕಿಂಗ್ ನ್ಯೂಸ್
11-07-25 10:10 pm HK News Desk ಕ್ರೈಂ
ಕಲಬುರಗಿ, ಜುಲೈ 11: ಕಲಬುರಗಿಯಲ್ಲಿ ಹಾಡಹಗಲೇ ಚಿನ್ನಾಭರಣ ತಯಾರಿಕಾ ಅಂಗಡಿಯನ್ನು ದೋಚಲಾಗಿದೆ. ನಗರದ ಸರಾಫ್ ಬಜಾರ್‌ನಲ್ಲಿ ಚಿನ್ನದ ಆಭರಣ ತಯಾರಿಸುವ ಅಂಗಡಿಗೆ ನುಗ್ಗಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆ ಮಾಡಿರುವ ಘಟನೆ ನಡೆದಿದೆ.
ಮಾಲಿಕ್ ಎಂಬ ಹೆಸರಿನ ಚಿನ್ನದ ಆಭರಣ ತಯಾರಿಸುವ ಅಂಗಡಿಗೆ ನಾಲ್ವರು ಮುಸುಕುಧಾರಿ ದರೋಡೆಕೋರರು ಗನ್ ಹಾಗೂ ಚಾಕು ಸಹಿತ ನುಗ್ಗಿ, ಅಂಗಡಿ ಮಾಲಿಕರಿಗೆ ಬೆದರಿಕೆ ಹಾಕಿದ್ದಾರೆ. ನಂತರ ಹಗ್ಗದಿಂದ ಅವರ ಕೈಕಾಲು ಕಟ್ಟಿ, ಲಾಕರ್ ತೆರೆಸಿದ್ದಾರೆ. ಅಂದಾಜು 3 ಕೆಜಿಯಷ್ಟು ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದರೋಡೆಕೋರರ ಬಂಧನಕ್ಕೆ ಬಲೆ
ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಪ್ರತಿಕ್ರಿಯಿಸಿದ್ದು, 'ಪ್ರಕರಣಕ್ಕೆ ಸಂಬಂಧಿಸಿದಂತೆ ಬೆರಳಚ್ಚು ತಜ್ಞರು ಹಾಗೂ ಡಾಗ್ ಸ್ಕ್ವಾಡ್ ಕರೆಸಿ ಪರಿಶೀಲನೆ ನಡೆಸಲಾಗಿದೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಗಳ ಪತ್ತೆಗೆ ಪೊಲೀಸರ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ. ದುಷ್ಕರ್ಮಿಗಳ ಬಂಧನಕ್ಕಾಗಿ ಶೋಧ ಕಾರ್ಯ ಆರಂಭಿಸಿದ್ದು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ದರೋಡೆಕೋರರ ಕೈಗೆ ಸಿಲುಕಿದ ವ್ಯಕ್ತಿಯ ಸಹೋದರ ಮರ್ತುಲ್ಲಾ ಮಾಲಿಕ್, ನನ್ನ ಸಹೋದರ ಸುಮಾರು 12 ಗಂಟೆ ವೇಳೆಗೆ ಅಂಗಡಿ ಬಾಗಿಲು ತೆರೆದು ಕುರ್ಚಿಯಲ್ಲಿ ಕುಳಿತಿದ್ದರು. ಆಗ ನಾಲ್ಕು ಜನ ಮುಸುಕುಧಾರಿಗಳು ನಮ್ಮ ಅಂಗಡಿಗೆ ನುಗ್ಗಿದ್ದರು. ಅದರಲ್ಲಿ ಇಬ್ಬರು ಬಂದೂಕು ತೋರಿಸಿ ಬೆದರಿಸಿದ್ದರು, ಅಷ್ಟರಲ್ಲಿ ಮತ್ತೊಬ್ಬ ಚಾಕು ತೋರಿಸಿದ್ದ, ಆ ಬಳಿಕ ಹಗ್ಗದಿಂದ ಅವರ ಕೈಕಾಲು ಕಟ್ಟಿ, ಲಾಕರ್ ತೆರೆಸಿ, ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಘಟನೆ ಬಗ್ಗೆ ಮಾಹಿತಿ ನೀಡಿದರು.
In a shocking daylight heist, a group of masked robbers stormed into a gold ornament manufacturing unit in Saraf Bazaar, Kalaburagi, and looted gold and cash worth crores.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm