ಬ್ರೇಕಿಂಗ್ ನ್ಯೂಸ್
24-12-20 11:00 am Headline Karnataka News Network ಕ್ರೈಂ
ಕಾಸರಗೋಡು, ಡಿ.24 : ಡಿವೈಎಫ್ಐ ಕಾರ್ಯಕರ್ತನನ್ನು ದುಷ್ಕರ್ಮಿಗಳ ತಂಡವೊಂದು ಇರಿದು ಕೊಲೆಗೈದ ಘಟನೆ ಬುಧವಾರ ರಾತ್ರಿ ಕಾಞಂಗಾಡ್ ನಲ್ಲಿ ನಡೆದಿದೆ.
ಮೃತರನ್ನು ಅಬ್ದುಲ್ ರಹ್ಮಾನ್ (29) ಎಂದು ಗುರುತಿಸಲಾಗಿದೆ. ಕಲ್ಲೂರಾವಿ ನಿವಾಸಿಯಾಗಿದ್ದ ರಹ್ಮಾನ್ ಬೈಕ್ ನಲ್ಲಿ ಸ್ನೇಹಿತನ ಜೊತೆ ಮನೆಗೆ ತೆರಳುತ್ತಿದ್ದಾಗ ಕಲ್ಲೂರಾವಿ-ಹಳೆ ಕಡಪ್ಪುರ ರಸ್ತೆಯಲ್ಲಿ ತಂಡ ಈ ಕೃತ್ಯ ನಡೆಸಿದೆ.
ಬೈಕನ್ನು ತಡೆದ ತಂಡವು ರಹ್ಮಾನ್ ಅವರಿಗೆ ಇರಿದು ಪರಾರಿಯಾಗಿದೆ. ಗಂಭೀರ ಗಾಯಗೊಂಡಿದ್ದ ಅಬ್ದುಲ್ ರಹ್ಮಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನ ಆಗಲಿಲ್ಲ. ರಹ್ಮಾನ್ ಜೊತೆಗಿದ್ದ ಶುಹೈಬ್ ಎಂಬವರು ಗಾಯಗೊಂಡಿದ್ದಾರೆ ಎಂದು ದೂರಲಾಗಿದೆ.

ಕೃತ್ಯದ ಸಂದರ್ಭ ಇನ್ನೋರ್ವ ಆರೋಪಿಗೂ ಗಾಯವಾಗಿದ್ದು, ಇರ್ಷಾದ್ ( 26) ಎಂಬಾತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯದ ಹಿಂದೆ ಮುಸ್ಲಿಂ ಲೀಗ್ ಕಾರ್ಯಕರ್ತರ ಕೈವಾಡ ಇದೆ ಎಂದು ಡಿವೈಎಫ್ಐ ಆರೋಪಿಸಿದೆ.
ಕೃತ್ಯ ಖಂಡಿಸಿ ಕಾಞಂಗಾಡ್ ನಗರಸಭಾ ವ್ಯಾಪ್ತಿಯಲ್ಲಿ ಗುರುವಾರ ಹರತಾಳಕ್ಕೆ ಡಿವೈಎಫ್ಐ ಕರೆ ನೀಡಿದೆ. ರಾಜಕೀಯ ದ್ವೇಷ ಕೃತ್ಯ ನಡೆದಿದೆ ಎನ್ನಲಾಗಿದೆ.
ಇತ್ತೀಚೆಗೆ ನಡೆದ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ವಿಜಯೋತ್ಸವ ಸಂದರ್ಭ ಡಿವೈಎಫ್ಐ ಮತ್ತು ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಇದಕ್ಕೆ ಪ್ರತಿಕಾರ ಎಂಬಂತೆ ಈ ಕೃತ್ಯ ನಡೆದಿರಬಹುದು ಎಂದು ಸಂಶಯಿಸಲಾಗಿದೆ. ಕೃತ್ಯದಲ್ಲಿ ಆರು ಮಂದಿ ಶಾಮೀಲಾಗಿದ್ದರು ಎಂಬ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭಿಸಿದೆ.
An activist of DYFI was stabbed to death at Kanhangad in the district on the night of Wednesday December 23. The deceased is identified as Abdul Rahman (29).
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm