ಬ್ರೇಕಿಂಗ್ ನ್ಯೂಸ್
30-07-25 08:48 pm Mangalore Correspondent ಕ್ರೈಂ
ಮಂಗಳೂರು, ಜುಲೈ 30 : ಮಂಗಳೂರು ಮಹಾನಗರ ಪಾಲಿಕೆಯ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಟಿಸಿ ಉದ್ಯಮಿಗಳಿಗೆ ಭಾರೀ ವಂಚನೆ ನಡೆಸಿದ್ದ ಪ್ರಕರಣದಲ್ಲಿ ಕಂಕನಾಡಿ ನಗರ ಠಾಣೆ ಪೊಲೀಸರು ಆರೋಪಿ ಪಂಪ್ವೆಲ್ ನಿವಾಸಿ ಪೃಥ್ವಿರಾಜ್ ಶೆಟ್ಟಿ ಅಲಿಯಾಸ್ ಮುನ್ನ ಎಂಬಾತನನ್ನು ಬಂಧಿಸಿದ್ದಾರೆ.
ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ “ಶ್ರೀ ರಾಜ ದುರ್ಗಾ ಫರ್ನಿಚರ್ ವರ್ಕ್ಸ್” ಎಂಬ ಉದ್ದಿಮೆ ಹೊಂದಿರುವ ಬಾಲಕೃಷ್ಣ ಸುವರ್ಣ ಎಂಬವರು ನ್ಯಾಯಾಲಯದ ಪ್ರಕರಣದಲ್ಲಿ ವ್ಯವಹರಿಸಲು ದಾಖಲಾತಿಗಳನ್ನು ಪಡೆದುಕೊಳ್ಳುವ ಸಲುವಾಗಿ ಮಂಗಳೂರು ಮಹಾನಗರ ಪಾಲಿಕೆಗೆ ಭೇಟಿ ನೀಡಿದ್ದು, ಆ ಸಂದರ್ಭ ಅವರ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಅನೂರ್ಜಿತಗೊಂಡಿರುವುದು ತಿಳಿದುಬಂದಿರುತ್ತದೆ. ಆದರೆ ಬಾಲಕೃಷ್ಣ ಸುವರ್ಣ ಅವರಲ್ಲಿ ಉದ್ದಿಮೆ ಪರವಾನಗಿ ಹಾಗೂ ಆಸ್ತಿ ತೆರಿಗೆ ಇದ್ದು, ಪರಿಶೀಲಿಸಿದಾಗ ಅದು ನಕಲಿ ರಶೀದಿ ಎನ್ನುವುದು ಪತ್ತೆಯಾಗಿತ್ತು. ಪರಿಶೀಲನೆ ವೇಳೆ ಬಾಲಕೃಷ್ಣ ಸುವರ್ಣ ಅವರಿಂದ ಪೃಥ್ವಿರಾಜ್ ಶೆಟ್ಟ ಎಂಬಾತನು ವಾರ್ಷಿಕ ತೆರಿಗೆ ಮೊತ್ತ 27,990 ರೂ. ಹಣವನ್ನು ಪಡೆದು ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ರಶೀದಿಗಳನ್ನು ನಕಲಿಯಾಗಿ ಸೃಷ್ಟಿಸಿ ನೀಡಿರುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಬಾಲಕೃಷ್ಣ ಸುವರ್ಣ ನಕಲಿ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ರಶೀದಿಯನ್ನು ನಕಲಿ ಸೃಷ್ಟಿಸಿ ವಂಚಿಸಿರುವ ಕುರಿತು ಪೃಥ್ವಿರಾಜ್ ಶೆಟ್ಟಿ ಎಂಬಾತನ ವಿರುದ್ದ ದೂರು ನೀಡಿದ್ದರು.
ಇದಲ್ಲದೇ ಪಂಪ್ವೆಲ್ ನಲ್ಲಿರುವ ಲಕ್ಷ್ಮಿ ಹಾರ್ಡ್ ವೇರ್ ವರ್ಕ್ ಶಾಪ್ ಮಾಲೀಕರಾದ ದೇವಾಂಗ ಕೆ. ಪಟೇಲ್ ಎಂಬವರು ಕೂಡ ಪೃಥ್ವಿರಾಜ್ ಶೆಟ್ಟಿ ನಕಲಿ ಉದ್ದಿಮೆ ಪರವಾನಿಗೆ ಹಾಗೂ ನಕಲಿ ಆಸ್ತಿ ತೆರಿಗೆ ಸೃಷ್ಟಿಸಿ ವಂಚಿಸಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಕಂಕನಾಡಿ ಪೊಲೀಸರು ಪಂಪ್ವೆಲ್ ಉಜ್ಜೋಡಿ ನಿವಾಸಿ ಪೃಥ್ವಿರಾಜ್ ಶೆಟ್ಟಿ(25) ಯನ್ನು ಬಂಧಿಸಿದ್ದಾರೆ.
ಪ್ರಕರಣ ದಾಖಲಾದ ಸಮಯ ಆರೋಪಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ. ಕೇರಳದ ಹಲವು ಕಡೆಗಳಲ್ಲಿ ಅವಿತುಕೊಂಡು ನಂತರ ಕಿನ್ನಿಗೋಳಿಗೆ ಬರುತ್ತಿರುವ ಮಾಹಿತಿಯಂತೆ ಜುಲೈ 25ರಂದು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆತನನ್ನು ವಿಚಾರಣೆಗೆ ಒಳಪಡಿಸಿದಾಗ, ಆರೋಪಿಯ ತಂದೆ ದೇವಾಂಗ್ ಪಟೇಲ್ ಅವರಿಗೆ ಸೇರಿದ ಅಂಗಡಿಯಲ್ಲಿ ಈ ಹಿಂದೆ ಕಮರ್ಷಿಯಲ್ ಅಕೌಂಟೆಂಟ್ ಆಗಿ ಕೆಲಸ ಮಾಡಿಕೊಂಡಿದ್ದರು. ನಂತರ ತನ್ನ ತಂದೆಗೆ ಅನಾರೋಗ್ಯವಾದ ಕಾರಣ ಪುತ್ರ ಪೃಥ್ವಿರಾಜ್ ಅವರ ಪರವಾಗಿ ಕೆಲಸವನ್ನು ಮುಂದುವರಿಸಿದ್ದ. ದೇವಾಂಗ ಕೆ ಪಟೇಲ್ ಹಾಗೂ ಅವರ ಪರಿಚಯದ ಬಾಲಕೃಷ್ಣ ಅವರಿಗೆ ಸಂಬಂಧಿಸಿದ ಉದ್ದಿಮೆಯ 2025-26 ನೇ ಸಾಲಿನ ಪರವಾನಿಗೆ ನವೀಕರಣ ಹಾಗೂ ಕಟ್ಟಡಗಳ ಆಸ್ತಿ ತೆರಿಗೆ ಪಾವತಿ ಮಾಡುತ್ತೇನೆಂದು ಹಣ ಪಡೆದಿದ್ದ. ಆನಂತರ, ತನ್ನ ಮೊಬೈಲ್ ನಲ್ಲಿ ಮಂಗಳೂರು ಮಹಾನಗರ ಪಾಲಿಕೆಯ MCC Trade Licence ಹಾಗೂ MCC Property Tax ವೆಬ್ ಸೈಟ್ ಗೆ ಲಾಗಿನ್ ಆಗಿ, ಉದ್ದಿಮೆ ಮಾಲಿಕರ ಮೊಬೈಲ್ OTP ಪಡೆದು ಹಿಂದಿನ ಈ ವರ್ಷದ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ರಶೀದಿಯನ್ನು ಡೌನ್ ಲೋಡ್ ಮಾಡಿ, 3rd Party ಅಪ್ಲಿಕೇಶನ್ ಮುಖಾಂತರ ದಿನಾಂಕ ಹಾಗೂ ಇನ್ನಿತರ ಮಾಹಿತಿಗಳನ್ನು ಎಡಿಟ್ ಮಾಡಿ ಅದನ್ನು ಪ್ರಿಂಟ್ ಮಾಡಿಸಿ, ದೇವಾಂಗ್ ಕೆ ಪಟೇಲ್ ಹಾಗೂ ಬಾಲಕೃಷ್ಣ ಸುವರ್ಣ ಅವರಿಗೆ ನೀಡಿದ್ದ.
ಆರೋಪಿ ದೇವಾಂಗ್ ಪಟೇಲ್ ಹಾಗೂ ಬಾಲಕೃಷ್ಣ ಸುವರ್ಣ ಅವರಿಗೆ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ವಂಚಿಸಿದ್ದು, ನಕಲಿ ದಾಖಲಾತಿಗಳನ್ನು ಸೃಷ್ಟಿಸಲು ಉಪಯೋಗಿಸಿದ ಸಲಕರಣೆಗಳನ್ನು ವಶಡಿಸಲಾಗಿದೆ. ಆರೋಪಿತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಪ್ರಸ್ತುತ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ಇತರ ಉದ್ದಿಮೆದಾರರಿಗೂ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ನೀಡಿರುತ್ತಾನೆಯೇ ಎಂಬ ಬಗ್ಗೆ ಕಂಕನಾಡಿ ಮತ್ತು ಬರ್ಕೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a major fraud case involving fake trade licenses and property tax receipts, the Mangaluru City Police have arrested a 25-year-old man, Prithviraj Shetty alias Munna, a resident of Pumpwell, for allegedly cheating multiple business owners by issuing forged municipal documents.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm