ಬ್ರೇಕಿಂಗ್ ನ್ಯೂಸ್
01-08-25 02:31 pm HK News Desk ಕ್ರೈಂ
ತುಮಕೂರು, ಆಗಸ್ಟ್ 1 : ಹತ್ತು ಸಾವಿರ ಕೊಡ್ತೀನಿ, ನನ್ನೊಂದಿಗೆ ಬಾ ಎಂದು ವಿದ್ಯಾರ್ಥಿನಿಯನ್ನು ಮಂಚಕ್ಕೆ ಕರೆದಿದ್ದ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್‍ನನ್ನು ತುಮಕೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಯೋಗೇಶ್ ಎಂದು ಗುರುತಿಸಲಾಗಿದೆ. ತುಮಕೂರಿನ ಜಯನಗರದಲ್ಲಿರುವ ಖಾಸಗಿ ಕಾಲೇಜು ಒಂದರಲ್ಲಿ ಕೆಲಸ ಮಾಡುತ್ತಿದ್ದ. ಇದಕ್ಕೂ ಮುನ್ನ 2019ರಲ್ಲಿ ತುಮಕೂರು ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಇಂಗ್ಲಿಷ್ ಪ್ರಾಧ್ಯಾಪಕನಾಗಿದ್ದ. ಈ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬಳ ನಂಬರ್ ಪಡೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ.
ಸಂತ್ರಸ್ತೆ ಬಳಿಕ ಕಾಲೇಜು ಬಿಟ್ಟು ಹೋಗಿದ್ದರೂ, ಯೋಗೇಶ್ ಸಂದೇಶ ಕಳುಹಿಸುವುದನ್ನು ಬಿಟ್ಟಿರಲಿಲ್ಲ. ಇದರಿಂದ ಸಂತ್ರಸ್ತೆ ಬೇಸತ್ತು ಆತನ ನಂಬರ್ ಬ್ಲಾಕ್ ಮಾಡಿದ್ದಳು. ಒಂದು ವರ್ಷದಿಂದ ಸೈಲೆಂಟ್ ಆಗಿದ್ದ ಯೋಗೇಶ್, ಜು.22 ರಂದು ರಸ್ತೆಯಲ್ಲಿ ಯುವತಿಯನ್ನು ಕಂಡು, ಮತ್ತೊಂದು ನಂಬರ್‌ನಿಂದ ಸಂದೇಶ ಕಳುಹಿಸಿ ಕಿರುಕುಳ ನೀಡಲು ಆರಂಭಿಸಿದ್ದ. ಅಲ್ಲದೇ ಈ ಬಾರಿ ನನಗೆ ನೀನು ಬೇಕು, 10 ಸಾವಿರ ಹಣ ಕೊಡ್ತೀನಿ ಎಂದು ಪೀಡಿಸಿದ್ದ.
ವಿಚಾರವನ್ನು ಸಂತ್ರಸ್ತ ಯುವತಿ ತನ್ನ ತಂದೆಗೆ ತಿಳಿಸಿದ್ದಳು. ಈ ಬಗ್ಗೆ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಇದೀಗ ಲೈಂಗಿಕ ಕಿರುಕುಳ ಹಾಗೂ ಅಟ್ರಾಸಿಟಿ ಕೇಸ್ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A private college principal in Tumakuru has been arrested by the Women’s Police Station for allegedly sexually harassing a student and offering her ₹10,000 to accompany him to a room.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm