ಬ್ರೇಕಿಂಗ್ ನ್ಯೂಸ್
01-08-25 04:27 pm HK News Desk ಕ್ರೈಂ
ಬೆಂಗಳೂರು, ಆಗಸ್ಟ್ 1 : 13 ವರ್ಷದ ಬಾಲಕನನ್ನು ಟ್ಯೂಷನ್ ಗೆ ಹೋಗಿ ಬರುವ ವೇಳೆ ಕಿಡ್ನಾಪ್ ಮಾಡಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೃತ ಬಾಲಕನನ್ನ ನಿಶ್ಚಿತ್ ಎಂದು ಗುರುತಿಸಲಾಗಿದೆ.
ಕಗ್ಗಲೀಪುರದ ಅರಕೆರೆಯ ಶಾಂತಿನಿಕೇತನ ಬಡಾವಣೆಯಿಂದ ಕಿಡ್ನಾಪ್ ಮಾಡಲಾಗಿದ್ದು, ಸ್ಥಳದಲ್ಲಿ ಆತನ ಸೈಕಲ್ ಪತ್ತೆಯಾಗಿತ್ತು. ಗೋಪಾಲಕೃಷ್ಣ ಎಂಬ ಪರಿಚಯದ ವ್ಯಕ್ತಿಯೇ ಬೈಕ್‌ನಲ್ಲಿ ಕರೆದುಕೊಂಡು ಹೀಗಿ, 5 ಲಕ್ಷಕ್ಕೆ ಪೋಷಕರಿಂದ ಡಿಮ್ಯಾಂಡ್ ಮಾಡಿದ್ದ. ದುಷ್ಕರ್ಮಿಗಳು ಬಾಲಕನ ಕತ್ತು ಸೀಳಿ ಕೊಲೆ ಮಾಡಿ, ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದಾರೆ.
ದುರ್ಷರ್ಮಿಗಳಿಂದ ಹಣಕ್ಕೆ ಬೇಡಿಕೆ ಬಂದ ತಕ್ಷಣ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದರು. ಬೆಂಗಳೂರಲ್ಲಿ ಖಾಸಗಿ ಕಾಲೇಜ್ ಉಪನ್ಯಾಸಕನ ಪುತ್ರ ನಿಶ್ಚಿತ್ ಪೋಷಕರು 5 ಲಕ್ಷ ರೂ ತಯಾರು ಮಾಡಿ ಇಟ್ಟಿದ್ರೂ ಕೂಡಾ ಬಾಲಕನನ್ನು ರಕ್ಷಿಸಲು ಸಾಧ್ಯವಾಗಿಲ್ಲ ಎಂದ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.
ಉಂಡ ಮನೆಗೆ ದ್ರೋಹ ಬಗೆದ್ನಾ ಗುರುಮೂರ್ತಿ ?
ಅಚ್ಯುತ್ ಮನೆಯಲ್ಲಿ ಹೆಚ್ಚುವರಿ ಡ್ರೈವರ್ ಆಗಿದ್ದ ಗುರುಮೂರ್ತಿಯೇ ಬಾಲಕನ ಕಿಡ್ನಾಪ್ ಗೆ ಪ್ಲ್ಯಾನ್ ಮಾಡಿದ್ದ ಎನ್ನಲಾಗಿದೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಗುರುಮೂರ್ತಿ ಪರಿಚಯದ ವ್ಯಕ್ತಿಯಿಂದಲೇ ಕಿಡ್ನಾಪ್ ನಡೆದಿದೆ. ಹೊರವಲಯದ ಅರಣ್ಯ ಪ್ರದೇಶದ ಬಳಿಗೆ ಕರೆದೊಯ್ದು ಕೊಲೆ ಮಾಡಿ, ನಂತರ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ನಂತರ ಪೆಟ್ರೋಲ್ ಸುರಿದು ಸುಟ್ಟುಹಾಕುವ ಕೆಲಸ ಮಾಡಿದ್ದಾರೆ.
ಇಬ್ಬರು ಆರೋಪಿಗಳು ಕಗ್ಗಲಿಪುರ ಅರಣ್ಯದಲ್ಲಿ ಅಡಗಿ ಕುಳಿತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಗುರುವಾರ ತಡರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಕಾರ್ಯಾಚರಣೆ ವೇಳೆ ಪೊಲೀಸರ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಪ್ರಯತ್ನಿಸಿದ್ದು, ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಳ್ಳಲು ಯಶಸ್ವಿಯಾದರು.
ಮೃತ ಬಾಲಕ ನಿಶ್ಚಿತ್ ತಂದೆಗೆ ಪರಿಚಯವಿದ್ದ ಆರೋಪಿಗಳೇ ಕೃತ್ಯ ಎಸಗಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.
A 13-year-old schoolboy was allegedly brutally murdered hours after being kidnapped while he was returning home from tuition classes in Hulimavu, on Thursday.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm