ಬ್ರೇಕಿಂಗ್ ನ್ಯೂಸ್
06-08-25 11:04 am Udupi Correspondent ಕ್ರೈಂ
ಉಡುಪಿ, ಆ.6 : ಮನೆಗಳ್ಳತನ ಸೇರಿದಂತೆ ಹಲವೆಡೆ ಕಳವುಗೈದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಕಳ್ಳರಿಗೆ ಸಹಾಯ ಮಾಡುತ್ತಿದ್ದ ಆರೋಪದಲ್ಲಿ ಆರೋಪಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ತಾಲೂಕಿನ ಉಪ್ಪಳ್ಳಿ ನಿವಾಸಿ ಕೆ.ಇ.ಮೊಹಮ್ಮದ್ ಬಂಧಿತ ಆರೋಪಿ. ಈತನಿಂದ ಒಟ್ಟು 182 ಗ್ರಾಂ ಚಿನ್ನದ ಗಟ್ಟಿಗಳನ್ನು ಸ್ವಾಧೀನಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಜೂ.27 ರಂದು ರಾತ್ರಿ ವೇಳೆ ಶಿರ್ವ ಗ್ರಾಮದ ಮಟ್ಟಾರು ರಸ್ತೆಯ ಬಳಿಯ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಕುಖ್ಯಾತ ಕಳ್ಳತನ ಆರೋಪಿ ಇತ್ತೆ ಬರ್ಪೆ ಅಬೂಬಕರ್ ಎಂಬಾತನನ್ನು ಬಂಧಿಸಲಾಗಿತ್ತು, ಬಂಧಿತ ಆರೋಪಿಯನ್ನು ಕಸ್ಟಡಿಗೆ ತೆಗೆದು ವಿಚಾರಣೆ ನಡೆಸಿದಾಗ ಕಳವು ಮಾಡಿರುವ ಚಿನ್ನ ಮತ್ತು ಈ ಹಿಂದೆಯೂ ಕೆಲವು ಪ್ರಕರಣಗಳಲ್ಲಿ ಕಳವುಗೈದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಉಪ್ಪಳ್ಳಿಯ ಕೆ.ಇ.ಮೊಹಮ್ಮದ್‌ಗೆ ನೀಡಿರುವುದಾಗಿ ಬಗ್ಗೆ ಮಾಹಿತಿ ನೀಡಿದ್ದ. ಇದರಂತೆ ಕೆ.ಇ.ಮೊಹಮ್ಮದ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಶಿರ್ವ, ಪಡುಬಿದ್ರಿ ಹಾಗೂ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿರುವ ಚಿನ್ನದ ಗಟ್ಟಿಗಳನ್ನು ಮೊಹಮ್ಮದ್ ತನ್ನ ಬಳಿ ಇರಿಸಿಕೊಂಡು ಅವನ್ನು ಕರಗಿಸಿ ಮಾರಾಟಕ್ಕೆ ವ್ಯವಸ್ಥೆ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.
ಉಡುಪಿ ಪೊಲೀಸ್ ಜಿಲ್ಲಾ ಅಧೀಕ್ಷಕ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್.ನಾಯ್ಕ, ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ.ಹರ್ಷ ಪ್ರಿಯಂವದ ನೇತೃತ್ವದಲ್ಲಿ ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಎಸ್.ಮಾನೆ ನೇತೃತ್ವದ ತಂಡ ಪತ್ತೆ ಕಾರ್ಯಾಚರಣೆ ನಡೆಸಿದೆ. ಈ ಹಿಂದೆ ದಸ್ತಗಿರಿ ಮಾಡಿದ ಆರೋಪಿ ಇತ್ತೆ ಬರ್ಪೆ ಅಬೂಬಕರ್ ಮತ್ತು ಸದ್ರಿ ಆರೋಪಿ ಕೆ.ಇ.ಮೊಹಮ್ಮದ್ ಅವರಿಂದ ಒಟ್ಟು 22.32 ಲಕ್ಷ ರೂ. ಮೌಲ್ಯದ 248.760 ಗ್ರಾಂ ತೂಕದ ಚಿನ್ನಾಭರಣ ಮತ್ತು ಚಿನ್ನದ ಗಟ್ಟಿಗಳನ್ನು ವಶಪಡಿಸಲಾಗಿದೆ.
Udupi police have arrested a man for aiding burglars in selling stolen gold by melting it and turning it into solid gold bars. The arrested individual has been identified as K.E. Mohammed, a resident of Uppalli in Udupi taluk.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm