ಬ್ರೇಕಿಂಗ್ ನ್ಯೂಸ್
08-08-25 12:21 pm Mangalore Correspondent ಕ್ರೈಂ
ಮಂಗಳೂರು, ಆ.8 : ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಧ್ಯಪ್ರದೇಶ ಮೂಲದ ಆರೋಪಿಯನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ರಾಮ್ ಪುರ ನಿವಾಸಿ ಶಾಹನಾಜ್ ಬಂಧಿತ ಅರೋಪಿ.
2014ರಲ್ಲಿ ಕುಳಾಯಿ ಬಳಿ ಕೋರಬ್ಬು ಕಲ ಎಂಬಲ್ಲಿ ನಡೆದಿದ್ದ ಸುಮತಿ ಪ್ರಭು ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆರೋಪಿಗಳು ಸುಮತಿ ಪ್ರಭು ಅವರ ಕತ್ತು ಸೀಳಿ 24 ಪವನ್ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದರು. ಈ ಬಗ್ಗೆ ಅವರ ಪುತ್ರ ಗುರುದಾಸ್ ಪ್ರಭು ಸುರತ್ಕಲ್ ಠಾಣೆಗೆ ದೂರು ನೀಡಿದ್ದು ಅಂದಿನ ಪಿಐ ಎಂ.ಎ. ನಟರಾಜ್ ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಗಳು ಸುರತ್ಕಲ್ ಬಳಿಯ ಕೈಗಾರಿಕೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿದ್ದು ಸುಮತಿ ಪ್ರಭು ಅವರ ಮನೆಯಲ್ಲಿ ಬಾಡಿಗೆ ವಾಸವಿದ್ದರು. ಹಾಗಾಗಿ ಈ ಪ್ರಕರಣ ಅಂದಿನ ದಿನಗಳಲ್ಲಿ ಸಂಚಲನ ಮೂಡಿಸಿತ್ತು. ಕೃತ್ಯದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು.
ಪ್ರಕರಣ ಭೇದಿಸಿದ್ದ ಪೊಲೀಸರು ರಾಜಸ್ಥಾನದ ನಿವಾಸಿಗಳಾದ ಶಿವರಾಮ್ ಹಾಗೂ ಬಹದ್ದೂರ್ ಸಿಂಗ್, ಉತ್ತರ ಪ್ರದೇಶದ ಶಹನಾಜ್ ಎಂಬವರನ್ನು ಬಂಧಿಸಿದ್ದರು. ಇಬ್ಬರು ಆರೋಪಿಗಳು ಬಳಿಕ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ್ದರು. ರಾಜಸ್ಥಾನದ ಬಯಾನ ನಿವಾಸಿ ಶಿವರಾಮ್ ನನ್ನು ಮಾರ್ಚ್ 6ರಂದು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಶಹನಾಜ್‌ನನ್ನು ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬುಧವಾರ ಬಂಧಿಸಿದ್ದು ಮಂಗಳೂರಿಗೆ ಕರೆತರಲಾಗಿದೆ.
The Surathkal police have arrested an accused who had been absconding for over four years in connection with the 2014 murder and gold theft case of Sumathi Prabhu in Kulai.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm