ಬ್ರೇಕಿಂಗ್ ನ್ಯೂಸ್
08-08-25 12:30 pm Bangalore Correspondent ಕ್ರೈಂ
ಬೆಂಗಳೂರು, ಆ.8 : ನಟೋರಿಯಸ್ ರೌಡಿ ವಿಲ್ಸನ್ ಗಾರ್ಡನ್ ನಾಗನ ಪರವಾಗಿ ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್ ಮಾಡುತ್ತಿದ್ದ ಮೂವರು ಪದವಿ ವಿದ್ಯಾರ್ಥಿಗಳು ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೌಡಿಶೀಟರ್ ನಾಗನ ಅಭಿಮಾನಿಗಳು ಎಂದು ಹೇಳಿಕೊಂಡು ವಿಧ ವಿಧವಾದ ಹೆಸರುಗಳಲ್ಲಿ ಖಾತೆಗಳನ್ನು ತೆರೆದಿದ್ದ ಮೂವರು ವಿದ್ಯಾರ್ಥಿಗಳ ವಿರುದ್ಧ ಸಿದ್ದಾಪುರ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.
ನಗರ ಪೊಲೀಸರು ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿದ್ದು ಕುಖ್ಯಾತ ರೌಡಿಶೀಟರ್ ನಾಗನ ಹೆಸರಿನ ಇನ್‌ಸ್ಟಾಗ್ರಾಂನಲ್ಲಿ ಹಲವು ಖಾತೆಗಳನ್ನು ತೆರೆದಿದ್ದುದು ಪತ್ತೆಯಾಗಿತ್ತು. ನಾಗ ಬಾಸ್, 'ನಾಗಣ್ಣ ದಿ ಕಿಂಗ್ ಆಫ್ ಅಂಡರ್ ವರ್ಲ್ಡ್ ಸ್ಟರ್', ನಾಗಣ್ಣ ಎಂಬುದು ಸೇರಿದಂತೆ ಏಳು ಖಾತೆಗಳು ಸಕ್ರಿಯವಾಗಿದ್ದವು. ಅವುಗಳಲ್ಲಿ ರೌಡಿಸಂ ಪ್ರಚೋದಿಸುವಂತೆ ರೌಡಿ ನಾಗನ ಚಿತ್ರಗಳನ್ನು ಹಂಚಿಕೊಳ್ಳಲಾಗಿತ್ತು. ಈ ನಿಟ್ಟಿನಲ್ಲಿ ಸಿದ್ದಾಪುರ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು.
ಇನ್ ಸ್ಟಾಗ್ರಾಂ ಖಾತೆಗಳ ಐಪಿ ವಿಳಾಸವನ್ನು ಪತ್ತೆಹಚ್ಚಿ ಮೂವರನ್ನು ಬಂಧಿಸಿದ್ದು ವಿಚಾರಣೆ ವೇಳೆ ಮೂವರು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಂಬುದು ಬೆಳಕಿಗೆ ಬಂದಿದೆ. ರೌಡಿಶೀಟರ್ ನಾಗನ ಜತೆ ವಿದ್ಯಾರ್ಥಿಗಳಿಗೆ ಯಾವುದೇ ಸಂಬಂಧವಿಲ್ಲ. ಪರಿಚಯವೂ ಇಲ್ಲ. ಹೆಚ್ಚು ಲೈಕ್ಸ್ ಹಾಗೂ ಫಾಲೋವರ್ಸ್ ಸಿಗ್ತಾರೆ ಎಂದು ಅಕೌಂಟ್ ತೆರೆದಿದ್ದಾಗಿ ಪೊಲೀಸ್ ವಿಚಾರಣೆ ವೇಳೆ ತಿಳಿಸಿದ್ದಾರೆ. ಜತೆಗೆ, ತಪ್ಪೊಪ್ಪಿಗೆ ಪತ್ರವನ್ನೂ ಬರೆದುಕೊಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರು ವಿದ್ಯಾರ್ಥಿಗಳ ಹೇಳಿಕೆ ದಾಖಲಿಸಿ ಠಾಣಾ ಜಾಮೀನು ನೀಡಿ ಬಿಟ್ಟು ಕಳಿಸಲಾಗಿದೆ. ಮತ್ತೊಮ್ಮೆ ಅಪರಾಧ ಪ್ರಕರಣಗಳು ಹಾಗೂ ಅಪರಾಧಿಗಳ ಸಂಪರ್ಕದಲ್ಲಿ ಇರಬಾರದು ಎಂದು ಎಚ್ಚರಿಕೆ ಕೊಟ್ಟು ಕಳುಹಿಸಲಾಗಿದೆ. ಕೊಲೆ ಸೇರಿದಂತೆ ಹತ್ತಾರು ಪ್ರಕರಣಗಳಲ್ಲಿ ಆರೋಪಿಯಾಗಿರುವ ನಾಗರಾಜ ಅಲಿಯಾಸ್ ವಿಲ್ಸನ್ ಗಾರ್ಡನ್ ನಾಗ ಕುಖ್ಯಾತ ರೌಡಿಶೀಟರ್ ಆಗಿದ್ದು 2023ರಲ್ಲಿ ನಡೆದಿದ್ದ ಸಿದ್ದಾಪುರ ಮಹೇಶ್ ಹತ್ಯೆ ಪ್ರಕರಣದಲ್ಲಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಕಳೆದ ವರ್ಷ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ನಟ ದರ್ಶನ್ ಜತೆಗೆ ಕುಳಿತು ಟೀ ಪಾರ್ಟಿ ನಡೆಸಿದ್ದ ಫೋಟೋ ಬಿಡುಗಡೆಯಾಗಿತ್ತು.
The police have taken action against the students who had created fake Instagram accounts in the name of Wilson Garden Naga and made reels about him in them. The incident took place under Siddapura police station limits. During interrogation, it came to light that Wilson Garden was making the reels just for the sake of likes, claiming to be a fan of Naga.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm