ಬ್ರೇಕಿಂಗ್ ನ್ಯೂಸ್
13-08-25 04:14 pm HK News Desk ಕ್ರೈಂ
ಬೆಳಗಾವಿ, ಆ.13 : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹೆಸರಲ್ಲಿ ನಕಲಿ ಸಹಿ ಮಾಡಿರುವ ದಾಖಲೆ ಸೃಷ್ಟಿಸಿ ಉದ್ಯೋಗ ನೀಡುವುದಾಗಿ ಹೇಳಿ ಹಲವರಿಂದ ಕೋಟ್ಯಾಂತರ ರುಪಾಯಿ ಪಡೆದು ವಂಚಿಸಿರುವ ಬಗ್ಗೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖುದ್ದು ಸಚಿವೆ ಲಕ್ಷ್ಮೀ ಹೆಬ್ಬಾಳರ್ ಅವರೇ ತಮ್ಮ ಸಹ ನಕಲಿ ಮಾಡಿ ಸೃಷ್ಟಿಸಿರುವ ಸುಳ್ಳು ದಾಖಲೆಗಳ ಸಮೇತ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತನಿಖೆ ಕೈಗೊಳ್ಳುವಂತೆ ದೂರು ನೀಡಿ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೇ ಲಕ್ಷಾಂತರ ರು. ಹಣ ಕಳೆದುಕೊಂಡು ವಂಚನೆಗೆ ಒಳಗಾದವರು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಮಂಜುನಾಥ ಮಲ್ಲಸರ್ಜ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬೈಲಹೊಂಗಲ ತಾಲೂಕಿನ ನೇಗಿನಾಳ ಗ್ರಾಮದ ವಿಠಲ ಪಡದಪ್ಪನವರ ಎಂಬಾತ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಬೆಳಗಾವಿಯ ದಾಸ್ತಿಕೊಪ್ಪ ಗ್ರಾಮದ ಮಂಜುನಾಥ ಮಲ್ಲಸರ್ಜ ಎಂಬಾತ ನೌಕರಿ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ್ದಾರೆ ಎಂದು ದೂರಿದ್ದಾರೆ. ಕಾವ್ಯಾ ಯಳ್ಳೂರು ಎಂಬವರು ಕೂಡ ವಂಚನೆ ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ಮಂಜುನಾಥ ಮಲ್ಲಸರ್ಜ ಎಂವಾತ 15ಕ್ಕೂ ಅಧಿಕ ಜನರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ಹುದ್ದೆ ಭರ್ತಿ ಮಾಡುವುದಾಗಿ ಹೇಳಿ ಸುಮಾರು 32 ಲಕ್ಷ ರು. ವಂಚನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ತನಿಖೆಗೆ ಸಚಿವೆ ಹೆಬ್ಬಾಳ್ಳರ್ ಆಗ್ರಹ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ತಮ್ಮ ಹಾಗೂ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಸಹಿ ಮಾಡಿ ಹಣ ವಸೂಲಿ ಮಾಡಿರುವ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ದಾಖಲೆ ಸಹಿತ ದೂರು ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆಯಾದ ನನ್ನ ಹಾಗೂ ಇಲಾಖೆಯ ಅಧಿಕಾರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡು ಕೆಲ ವ್ಯಕ್ತಿಗಳು ಹಣ ವಸೂಲು ಮಾಡಿದ್ದು ಬೆಳಕಿಗೆ ಬಂದಿದೆ. ಈ ಕುರಿತು ಸಾಕ್ಷ್ಯಾಧಾರಗಳನ್ನು ನೀಡಿದ್ದೇನೆ. ನಕಲಿ ಸಹಿ ಮಾಡಿ ನೇಮಕಾತಿ ಆದೇಶ ವಿತರಿಸಿದ್ದು ಪ್ರಕರಣದ ಕುರಿತು ತನಿಖೆ ಕೈಗೊಳ್ಳುವಂತೆ ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೆದ್ ಅವರಿಗೆ ಮನವಿ ಮಾಡಿದ್ದಾರೆ.
A major fraud case has been registered at Kittur Police Station, where miscreants allegedly forged documents using the name and fake signature of Women and Child Development Minister Laxmi Hebbalkar and Governor Thawar Chand Gehlot, promising government jobs and collecting crores of rupees from several individuals.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm