ಬ್ರೇಕಿಂಗ್ ನ್ಯೂಸ್
14-08-25 05:31 pm Bangalore Correspondent ಕ್ರೈಂ
ಬೆಂಗಳೂರು, ಆ 14 : ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ನನ್ನ ಪೊಲೀಸರು ಬಂಧಿಸಿದ್ದಾರೆ.
ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್ ನನ್ನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್ ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ ಸುದ್ದಿ ಬಂದಿತ್ತು. ಆದರೆ ಪೊಲೀಸರು ದರ್ಶನ್ ನ್ಯಾಯಾಲಯಕ್ಕೆ ಶರಣಾಗುವ ಮೊದಲೇ ಅಪಾರ್ಟ್‌ಮೆಂಟ್‌ಗೆ ತೆರಳಿ ಅರೆಸ್ಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿ. ಮೊದಲ ಆರೋಪಿ ಪವಿತ್ರಾ ಗೌಡಳನ್ನ ಈ ಮೊದಲೇ ಪೊಲೀಸರು ಅರೆಸ್ಟ್ ಮಾಡಿದ್ದರು.
ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿದೆ. ಬಳಿಕ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುತ್ತೆ. ಬಳಿಕ ಅವರನ್ನು ಜೈಲಿಗೆ ಕಳುಹಿಸಲಾಗುತ್ತೆ. ಆದರೆ, ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸುತ್ತಾರೋ? ಇಲ್ಲವೋ ಬಳ್ಳಾರಿ ಜೈಲಿಗೆ ಕರೆದುಕೊಂಡು ಹೋಗುತ್ತಾರೋ? ಅನ್ನೋದು ಗೊತ್ತಾಗಬೇಕಿದೆ.
ಸಾಮಾನ್ಯವಾಗಿ ಜಾಮೀನು ರದ್ದು ಆದರೆ, ಆರೋಪಿಗಳಿಗೆ ನ್ಯಾಯಾಲಯ ಒಂದು ವಾರ, 10 ದಿನ ಹೀಗೆ ಪೊಲೀಸರಿಗೆ ಶರಣಾಗುವುದಕ್ಕೆ ಅವಕಾಶ ನೀಡುತ್ತೆ. ಆದರೆ, ದರ್ಶನ್ ಕೇಸ್‌ನಲ್ಲಿ ಹಾಗೆ ಆಗಲಿಲ್ಲ. ಸುಪ್ರೀಂ ಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿಯನ್ನು ತತಕ್ಷಣವೇ ಬಂಧಿಸಬೇಕು ಎಂದು ಆದೇಶ ನೀಡಿತ್ತು. ದರ್ಶನ್ ಕೇಸ್‌ನಲ್ಲಿ ಸುಪ್ರೀಂ ಕೋರ್ಟ್ ಯಾಕಿಷ್ಟು ಕಟುವಾದ ನಿರ್ಧಾರ ತೆಗೆದುಕೊಳ್ತು? ಅನ್ನೋದನ್ನು ವಕೀಲರು ರಿವೀಲ್ ಮಾಡಿದ್ದಾರೆ.
ಇನ್ನು ದರ್ಶನ್ ಬಂಧನದ ವೇಳೆ ಅಭಿಮಾನಿಗಳು ನಿವಾಸದ ಮುಂದೆ ಜಮಾಯಿಸಿದ್ದರು. ನೂಕು, ನುಗ್ಗಲು ತಪ್ಪಿಸುವ ಉದ್ದೇಶದಿಂದ ಕಾಮಾಕ್ಷಿ ಠಾಣೆ ಪೊಲೀಸರು ಕ್ರಮ ತೆಗೆದುಕೊಂಡು, ದರ್ಶನ್ ಅಭಿಮಾನಿಗಳನ್ನು ಅಲ್ಲಿಂದ ಚದುರಿಸಿದ್ದಾರೆ.
Just hours after the Supreme Court cancelled his bail, Kannada actor Darshan was arrested by police in connection with the Renukaswamy murder case.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm