ಬ್ರೇಕಿಂಗ್ ನ್ಯೂಸ್
16-08-25 10:20 am Mangalore Correspondent ಕ್ರೈಂ
ಮಂಗಳೂರು, ಆ.16 : ಕೇರಳದಲ್ಲಿ ಚಿನ್ನದ ಮಳಿಗೆ ಹೊಂದಿರುವ ಚಿನ್ನದ ವ್ಯಾಪಾರಿಯೊಬ್ಬರನ್ನು ತಂಡವೊಂದು ಮಂಗಳೂರಿನಲ್ಲಿ ಅಪಹರಿಸಿ ಅವರಿಂದ ಸುಮಾರು 350 ಗ್ರಾಂ ಚಿನ್ನವನ್ನು ದರೋಡೆಗೈದ ಘಟನೆ ನಡೆದಿದ್ದು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳ ಮೂಲದ ಚಿನ್ನದ ವ್ಯಾಪಾರಿ ಶ್ರೀಹರಿ ದರೋಡೆಗೊಳಗಾದವರು.
ಶ್ರೀಹರಿ ಅವರು ಆ.13ರ ಬುಧವಾರ ಬೆಳಗ್ಗೆ 7 ಗಂಟೆ ಸುಮಾರಿಗೆ 350 ಗ್ರಾಂ ಚಿನ್ನದ ಗಟ್ಟಿಯನ್ನು ಹಿಡಿದು ರೈಲಿನ ಮೂಲಕ ಕೇರಳದಿಂದ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದರು. ರೈಲು ನಿಲ್ದಾಣದಿಂದ ಹೊರಬಂದು ಕೈರಲಿ ಹೋಟೆಲ್ ಬಳಿ ಆಟೋವೊಂದಕ್ಕೆ ಕಾಯುತ್ತಿದ್ದಾಗ ಇನೋವಾ ಕಾರಿನಲ್ಲಿ ಆಗಮಿಸಿದ ತಂಡ ಶ್ರೀಹರಿ ಅವರ ಬಳಿ ನಾವು ಕಸ್ಟಮ್ಸ್ ಅಧಿಕಾರಿಗಳು, ನಿಮ್ಮನ್ನು ಪರಿಶೀಲನೆ ಮಾಡಲು ಬಂದಿದ್ದೇವೆ. ಕಾರಿನಲ್ಲಿ ಕುಳಿತುಕೊಳ್ಳಿ ಎಂದು ಗದರಿಸಿದ್ದಾರೆ.
ಇದಕ್ಕೆ ಚಿನ್ನದ ವ್ಯಾಪಾರಿ ಒಪ್ಪದಿದ್ದಾಗ ಬಲವಂತವಾಗಿ ಕಾರಿನಲ್ಲಿ ಕುಳ್ಳಿರಿಸಿ ಕರೆದೊಯ್ದಿದ್ದಾರೆ. ಉಡುಪಿ ಮೂಲಕ ಕುಮಟಾ ಶಿರಸಿಗೆ ಕರೆದುಕೊಂಡು ಹೋಗಿದ್ದು ಸುಮಾರು 35 ಲಕ್ಷ ರೂ. ಮೌಲ್ಯದ 350 ಗ್ರಾಂ ಚಿನ್ನದ ಗಟ್ಟಿ ದರೋಡೆ ಮಾಡಿದ್ದಾರೆ. ಬಳಿಕ ಚಿನ್ನದ ವ್ಯಾಪಾರಿಯನ್ನು ಶಿರಸಿಯ ಅಂತ್ರವಳ್ಳಿ ಎಂಬ ಊರಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಘಟನೆಯಿಂದ ಆಘಾತಕ್ಕೊಳಗಾದ ಚಿನ್ನದ ವ್ಯಾಪಾರಿ ಬಳಿಕ ಮಂಗಳೂರಿಗೆ ಬಂದು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಚಿನ್ನದ ವ್ಯಾಪಾರಿ ದರೋಡೆಗೆ ಸಂಬಂಧಿಸಿ ತನಿಖೆ ಕೈಗೆತ್ತಿಕೊಂಡ ಪಾಂಡೇಶ್ವರ ಪೊಲೀಸರಿಗೆ ಆರೋಪಿಗಳ ಬಗ್ಗೆ ಬಲವಾದ ಸಾಕ್ಷ್ಯ ಲಭಿಸಿದ್ದು, ತಂಡವನ್ನು ಬಲೆಗೆ ಕೆಡಹುವ ಸಾಧ್ಯತೆಯಿದೆ. ಶ್ರೀಹರಿ ಅವರ ಚಲನಚಲನದ ಬಗ್ಗೆ ಗೊತ್ತಿರುವ ವ್ಯಕ್ತಿಗಳೇ ಈ ದರೋಡೆ ನಡೆಸಿರುವ ಸಾಧ್ಯತೆಯಿದ್ದು ಪೊಲೀಸರು ಸಿಸಿಟಿವಿ ಇನ್ನಿತರ ಮಾಹಿತಿ ಆಧರಿಸಿ ತನಿಖೆ ಕೈಗೊಂಡಿದ್ದಾರೆ.
ಬಿಎಚ್ ನೋಂದಣಿ ಕಾರು ಬಳಕೆ !
ದರೋಡೆಕೋರರು ಕೃತ್ಯದ ಸಂದರ್ಭದಲ್ಲಿ ಬಿಎಚ್ ನೋಂದಣಿ ಸಂಖ್ಯೆಯ ಕಾರು ಬಳಸಿರುವುದು ಅನುಮಾನಕ್ಕೆ ಕಾರಣವಾಗಿದೆ. ಬಿಎಚ್ ನೋಂದಣಿ ಭಾರತ ಸರಕಾರವು ಹೊಸತಾಗಿ ಆರಂಭಿಸಿದ್ದ ವ್ಯವಸ್ಥೆಯಾಗಿದ್ದು, ವಾಹನ ಮಾಲೀಕರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ತೆರಳಿದಾಗ ವಾಹನ ಮರು ನೋಂದಣಿಯ ತೊಂದರೆ ತಪ್ಪಿಸಲು ಅನುಷ್ಠಾನ ಮಾಡಲಾಗಿದೆ. ಅಲ್ಲದೆ ರಾಷ್ಟ್ರ ಮಟ್ಟದಲ್ಲಿ ಕಾರಿನ ವಾರೀಸುದಾರರು, ಮೂಲವನ್ನು ಸುಲಭವಾಗಿ ಪತ್ತೆಹಚ್ಚಬಹುದು. ಕೇಂದ್ರ, ರಾಜ್ಯ ಸರಕಾರಿ ನೌಕರರು, ನಾನಾ ರಾಜ್ಯದಲ್ಲಿ ಉದ್ಯಮ ಕಚೇರಿಗಳನ್ನು ಹೊಂದಿರುವವರು ಬಿಎಚ್ ನಂಬರ್ ವಾಹನ ಪಡೆಯಲು ಅವಕಾಶವಿರುತ್ತದೆ. ಹೀಗಿರುವಾಗ ದರೋಡೆ ಬಳಸಿದ ಕಾರು ಯಾರದ್ದು? ನಂಬರ್ ನಕಲಿಯೇ ಎಂಬ ಅನುಮಾನ ಬಂದಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A trader, who owns a gold shop in Kerala, was abducted from Mangaluru in a car by a gang and robbed of around 350 grams of gold on Wednesday. Srihari, a gold merchant and a native of Kerala, was the victim of the robbery. They were let off by the robbers after committing the robbery. Srihari has lodged a complaint with the police and the police are investigating.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm