ಬ್ರೇಕಿಂಗ್ ನ್ಯೂಸ್
19-08-25 09:27 pm Bangalore Correspondent ಕ್ರೈಂ
ಬೆಂಗಳೂರು, ಆ 19 : ವೈದ್ಯೆಯ ಮನೆಯಲ್ಲಿ ಚಿನ್ನಾಭರಣ ಹಾಗೂ ದುಬಾರಿ ವಸ್ತುಗಳನ್ನ ಕಳ್ಳತನ ಮಾಡಿದ್ದ ಮನೆ ಕೆಲಸದಾಕೆ ಸೇರಿದಂತೆ ಇಬ್ಬರನ್ನ ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಕಾಕಿನಾಡ ಮೂಲದ ದುರ್ಗಾ ಅನ್ನಾರೆಡ್ಡಿ ಬಂಧಿತ ಆರೋಪಿ. ಆಕೆಯಿಂದ ಡೈಮಂಡ್ ಮತ್ತು ಚಿನ್ನದ ಆಭರಣಗಳು, ಬೆಳ್ಳಿಯ ವಸ್ತು, ಮೊಬೈಲ್ ಫೋನ್ ಹಾಗೂ ಬೆಲೆ ಬಾಳುವ ವಾಚ್‌ಗಳು ಸೇರಿದಂತೆ 22 ಲಕ್ಷ ರೂ. ಮೌಲ್ಯದ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಯನಗರ 1ನೇ ಬ್ಲಾಕ್‌ನಲ್ಲಿ ವಾಸವಿದ್ದ ಖಾಸಗಿ ಆಸ್ಪತ್ರೆಯ ವೈದ್ಯೆಯೊಬ್ಬರು ಕಳೆದ ಒಂದೂವರೆ ವರ್ಷದ ಹಿಂದೆ ಆಂಧ್ರಪ್ರದೇಶ ಮೂಲದ ಏಜೆನ್ಸಿಯೊಂದರ ಮೂಲಕ ದುರ್ಗಾ ಅನ್ನಾರೆಡ್ಡಿಯನ್ನು ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಇತ್ತೀಚಿಗೆ ಅನಾರೋಗ್ಯಕ್ಕೀಡಾಗಿದ್ದ ಮನೆ ಮಾಲೀಕರಿಗೆ ಆಗಾಗ ವಿಶ್ರಾಂತಿಯ ಅಗತ್ಯ ಇರುತ್ತಿತ್ತು. ಜುಲೈ 28ರಂದು ಅದೇ ರೀತಿ ವಿಶ್ರಾಂತಿ ಪಡೆದು ಸಂಜೆ ಎದ್ದು ನೋಡಿದಾಗ ಮನೆ ಕೆಲಸದಾಕೆ ದುರ್ಗಾ ಕಾಣಿಸಿರಲಿಲ್ಲ. ಕರೆ ಮಾಡಿದಾಗ ಆಕೆಯ ಫೋನ್ ಸ್ವಿಚ್ಡ್ ಆಫ್ ಆಗಿತ್ತು. ಅನುಮಾನಗೊಂಡು ಮನೆಯಲ್ಲಿರುವ ಕಬೋರ್ಡ್ ನೋಡಿದಾಗ ಡೈಮಂಡ್, ಚಿನ್ನಾಭರಣ, ಬೆಳ್ಳಿಯ ವಸ್ತುಗಳು, ಮೊಬೈಲ್ ಫೋನ್‌ಗಳು, ಬೆಲೆಬಾಳುವ ವಾಚ್‌ಗಳು ಕಾಣೆಯಾಗಿದ್ದವು. ತಕ್ಷಣ ಅವರು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ತನಿಖೆ ಕೈಗೊಂಡ ಸಿದ್ದಾಪುರ ಠಾಣೆ ಪೊಲೀಸರು ತೆಲಂಗಾಣದ ನ್ಯೂ ರಂಗಪುರ್ ಗ್ರಾಮದಲ್ಲಿದ್ದ ತನ್ನ ಸಹೋದರಿಯ ಮನೆಯಲ್ಲಿದ್ದ ದುರ್ಗಾಳನ್ನ ಬಂಧಿಸಿದ್ದರು. ವಿಚಾರಣೆಗೊಳಪಡಿಸಿದಾಗ ಕದ್ದ ಕೆಲ ವಸ್ತುಗಳನ್ನ ಆಕೆ ತನ್ನ ಸಹೋದರಿಯ ಗಂಡನ ಮೂಲಕ ಮಾರಾಟ ಮಾಡಿಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಳು. ಬಳಿಕ ಆರೋಪಿಯ ತಂಗಿಯ ಗಂಡನನ್ನ ಸಹ ಬಂಧಿಸಲಾಗಿದೆ. ಆರೋಪಿಗಳಿಬ್ಬರ ಬಂಧನದಿಂದ ಒಟ್ಟು 5.40 ಗ್ರಾಂ ಡೈಮಂಡ್ ರಿಂಗ್, 10.45 ಗ್ರಾಂ ಡೈಮಂಡ್ ಓಲೆ, 11.50 ಗ್ರಾಂ ಚಿನ್ನಾಭರಣ, 1 ಕೆ.ಜಿ 62 ಗ್ರಾಂ ಬೆಳ್ಳಿಯ ವಸ್ತುಗಳು, 4 ಮೊಬೈಲ್ ಫೋನ್‌ಗಳು, 5 ಬೆಲೆಬಾಳುವ ವಾಚ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A housemaid who robbed her employer — a doctor residing in Bengaluru — has been arrested by Siddapura Police along with an accomplice. The police have recovered valuables worth ₹22 lakh, including gold and diamond jewellery, silver items, mobile phones, and luxury watches.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm