ಬ್ರೇಕಿಂಗ್ ನ್ಯೂಸ್
19-08-25 10:30 pm Mangalore Correspondent ಕ್ರೈಂ
ಮಂಗಳೂರು, ಆ.19 : ಕಸ್ಟಮ್ಸ್ ಅಧಿಕಾರಿಗಳ ಹೆಸರಿನಲ್ಲಿ ಚಿನ್ನದ ವ್ಯಾಪಾರಿಯನ್ನ ಅಪಹರಿಸಿ 350 ಗ್ರಾಂ ಚಿನ್ನದ ಗಟ್ಟಿಯನ್ನು ಡಕಾಯಿತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಸಿಸಿಬಿ ಪೊಲೀಸರು ಐವರು ಆರೋಪಿಗಳನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದಾರೆ.
ಪ್ರಕರಣದ ಕುರಿತು ಮಾಹಿತಿ ನೀಡಿದ ಡಿಸಿಪಿ ಮಿಥುನ್ ಎಚ್.ಎನ್, ಆಗಸ್ಟ್ 13ರಂದು ಬೆಳಗ್ಗೆ ಕೇರಳದ ಕಾಞಂಗಾಡಿನಲ್ಲಿ ಜುವೆಲ್ಲರಿ ಉದ್ಯಮ ಹೊಂದಿರುವ ಭಾನುದಾಸ ಹರಿ ಥೋರಟ್ ಅವರು ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದ ಹತ್ತಿರದ ಕೈರಲಿ ಹೋಟೆಲ್ ಬಳಿ ಆಟೋ ರಿಕ್ಷಾಕ್ಕಾಗಿ ಕಾಯುತ್ತಿದ್ದರು. ಆಗ ಇನ್ನೋವಾ ಕಾರಿನಲ್ಲಿ ಬಂದಿದ್ದ ಆರು ಮಂದಿ ಅಪರಿತರು, ತಮ್ಮನ್ನು ಕಸ್ಟಮ್ಸ್ ಅಧಿಕಾರಿಗಳೆಂದು ಪರಿಚಯಿಸಿದ್ದು ಗದರಿಸಿ ಬಲವಂತದಿಂದ ಕಾರಿನಲ್ಲಿ ಕೂರಿಸಿದ್ದರು. ಬಳಿಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಡುಪಿ ಮಾರ್ಗವಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾಕ್ಕೆ ಕರೆದೊಯ್ದು ಅಲ್ಲಿನ ಅಂತರವಳ್ಳಿ ಎಂಬಲ್ಲಿ ಥೋರಟ್ ಅವರನ್ನು ಇಳಿಸಿ ಅವರ ಕೈಯಲ್ಲಿದ್ದ ಸುಮಾರು 35 ಲಕ್ಷ ಮೌಲ್ಯದ 350 ಗ್ರಾಂ ತೂಕದ ಬಂಗಾರದ ಗಟ್ಟಿಗಳನ್ನು ದರೋಡೆ ಮಾಡಿದ್ದರು. ಈ ಬಗ್ಗೆ ಥೋರಟ್ ಅವರು ಕುಮಟಾ ಠಾಣೆಗೆ ದೂರು ನೀಡಿದ್ದರು.
ಕುಮಟಾ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ದಕ್ಷಿಣ ಠಾಣೆಯಲ್ಲಿ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 310(2), 137(2), 204 ಅಡಿ ಪ್ರಕರಣ ದಾಖಲಾಗಿತ್ತು.
ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದಲ್ಲಿ ಐದು ಮಂದಿ ಆರೋಪಿಗಳನ್ನು ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಪತ್ತೆ ಮಾಡಲಾಗಿದೆ. ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದೇವೆ. ದರೋಡೆ ಮಾಡಿದ್ದ ಚಿನ್ನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನು ಸ್ವಾಧೀನ ಪಡಿಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ. ದೂರುದಾರ ಥೋರಟ್ ಅವರು ಕಾಞಂಗಾಡಿನಲ್ಲಿ ಜುವೆಲ್ಲರಿ ಹೊಂದಿದ್ದು ವ್ಯವಹಾರ ನಿಮಿತ್ತ ಬಂಗಾರದ ಗಟ್ಟಿಯೊಂದಿಗೆ ಮಂಗಳೂರಿಗೆ ಬಂದಿದ್ದರು. ದರೋಡೆ ತಂಡದ ಪತ್ತೆಗಾಗಿ ಸಿಸಿಬಿ ಮತ್ತು ಕೇಂದ್ರ ವಿಭಾಗದ ತಂಡವನ್ನು ರಚಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.
In a dramatic breakthrough, the Mangaluru City Crime Branch (CCB) police have arrested five persons in Pune, Maharashtra, in connection with the abduction and robbery of a gold trader who was duped by a gang posing as Customs officials.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm