ಬ್ರೇಕಿಂಗ್ ನ್ಯೂಸ್
25-08-25 08:29 pm HK News Desk ಕ್ರೈಂ
ಮೈಸೂರು, ಆ.25: ದುಬೈನಲ್ಲಿ ಗಂಡ, ಇತ್ತ ಪತ್ನಿಯ ಲವ್ವಿ ಡವ್ವಿ. ಆದರೆ ಹಳೆ ಪ್ರೇಮಿ ತೆಕ್ಕೆಗೆ ಬಿದ್ದಾಕೆ ದುರಂತ ರೀತಿಯಲ್ಲಿ ಮಸಣ ಸೇರಿದ್ದಾಳೆ. ತಾಯಿ ಮನೆಗೆ ಬಂದಿದ್ದ ಮಹಿಳೆ ತನ್ನ ಮಗುವನ್ನು ಬಿಟ್ಟು ಅತ್ತೆ ಮನೆಗೆ ಹೋಗುತ್ತೇನೆಂದು ಹೇಳಿ ಪ್ರಿಯಕರನೊಂದಿಗೆ ಲಾಡ್ಜ್ ಹೋದವಳು, ಬಂಡೆ ಸಿಡಿಸುವ ಜಿಲೆಟ್ ಕಡ್ಡಿಯಿಂದ ಸಿಡಿದು ಭೀಕರವಾಗಿ ಹತ್ಯೆಯಾಗಿದ್ದಾಳೆ. ಹುಣಸೂರು ತಾಲೂಕಿನ ಗೆರಸನಹಳ್ಳಿ ನಿವಾಸಿ ರಕ್ಷಿತಾ (20) ಹತ್ಯೆಯಾದವಳು.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗೆರಸನಹಳ್ಳಿಯ ರಕ್ಷಿತಾಳನ್ನು ಕೇರಳದ ಸುಭಾಷ್ ಎಂಬಾತನಿಗೆ ಮೂರು ವರ್ಷಗಳ ಹಿಂದಷ್ಟೇ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗೆ 2 ವರ್ಷದ ಮಗು ಕೂಡ ಇದೆ. ಆದರೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಸಿದ್ದರಾಜು ಜೊತೆಗಿನ ವಿವಾಹಪೂರ್ವ ಪ್ರೇಮದ ಸಂಬಂಧ ಮದುವೆಯಾದ ಬಳಿಕವೂ ಮುಂದುವರೆದಿತ್ತು. ಕೇರಳದಿಂದ ತವರು ಮನೆಗೆ ಬರ್ತಿದ್ದ ರಕ್ಷಿತಾ ಪ್ರಿಯಕರನ ಜೊತೆ ಸುತ್ತಾಟ ನಡೆಸ್ತಿದ್ದಳು ಎನ್ನಲಾಗಿದೆ. ಕಳೆದ ಶುಕ್ರವಾರ ಕೇರಳದಿಂದ ಬಂದು ಮಗುವನ್ನು ತಾಯಿ ಮನೆಯಲ್ಲಿ ಬಿಟ್ಟು ಕೇರಳದಲ್ಲಿ ಅತ್ತೆಗೆ ಉಷಾರಿಲ್ಲ ಅಂತ ಸುಳ್ಳು ಹೇಳಿ ಮನೆಯಿಂದ ಹೋಗಿದ್ದಳು. ಬಳಿಕ ಪ್ರಿಯಕರ ಸಿದ್ದರಾಜು ಜೊತೆ ಸಾಲಿಗ್ರಾಮ ತಾಲೂಕಿನ ಬೇರ್ಯ ಗ್ರಾಮದ ಎಸ್ ಜಿ ಅರ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ರೂಂ ಪಡೆದಿದ್ದು ಅಲ್ಲಿಯೇ ದುರಂತ ಸಾವಿಗೀಡಾಗಿದ್ದಾಳೆ.

ಹತ್ತಿರದ ಸಂಬಂಧಿಯೂ ಆಗಿರುವ ಸಿದ್ದರಾಜು ಜೊತೆ ಲಾಡ್ಜ್ ನಲ್ಲಿ ಗಲಾಟೆಯಾಗಿದ್ದು ಮೊದಲೇ ಪ್ಲಾನ್ ಮಾಡಿದ್ದಂತೆ ಜಿಲೆಟಿನ್ ಕಡ್ಡಿಯನ್ನ ಆಕೆಯ ಬಾಯಿಗೆ ಇಟ್ಟು ಸ್ಫೋಟ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಸ್ಫೋಟದ ತೀವ್ರತೆಗೆ ರಕ್ಷಿತಾಳ ಮುಖ ಛಿದ್ರವಾಗಿದೆ. ಬಳಿಕ ಮೊಬೈಲ್ ಬ್ಲಾಸ್ಟ್ ಆಗಿದೆ ಎಂದು ಕಥೆ ಕಟ್ಟಿದ್ದ. ಲಾಡ್ಜ್ ಸಿಬ್ಬಂದಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು ಸಾಲಿಗ್ರಾಮ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ಮಾಡಿದ ಮೇಲೆ ಕೊಲೆ ರಹಸ್ಯ ಬೆಳಕಿಗೆ ಬಂದಿದೆ.
In a shocking case involving betrayal, a young woman whose husband is working in Dubai was brutally murdered in a Mysuru lodge using a gelatin explosive stick — typically used for blasting rocks. The gruesome killing was initially passed off as a mobile phone explosion, but police investigations have now uncovered a sinister plot linked to an extramarital affair.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm