ಬ್ರೇಕಿಂಗ್ ನ್ಯೂಸ್
01-09-25 03:07 pm Udupi Correspondent ಕ್ರೈಂ
ಉಡುಪಿ, ಸೆ.1 : ಎಸ್ ಬಿಐ ಮಲ್ಪೆ ಶಾಖೆಯಲ್ಲಿ ಮ್ಯಾನೇಜರ್ ಮತ್ತು ಬ್ಯಾಂಕ್ ಸಿಬಂದಿಯೇ ನಕಲಿ ದಾಖಲೆ ಸೃಷ್ಟಿಸಿ 73 ಲಕ್ಷ ರೂಪಾಯಿ ಅಕ್ರಮವಾಗಿ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಹೌಸಿಂಗ್ ಫೈನಾನ್ಸ್ ಕಂಪನಿಯಿಂದ ಇ-ಮೇಲ್ ಸಂದೇಶ ಬಂದಿದೆ ಎಂದು ಬ್ಯಾಂಕಿನ ಮಲ್ಪೆ ಶಾಖೆಯಿಂದ ಅದರಲ್ಲಿ ಸೂಚಿಸಿದ ನಾಲ್ವರ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗಿತ್ತು. ಸಮುದಾ ಸುವರ್ಣ ನಂತೂರು, ಶರ್ಮಿಳಾ ಎಸ್.ಮುಳೂರು, ಸುಶಾಂತ್ ತಿಂಗಳಾಯ ಕೋಡಿ, ಎಂ.ರಮಾನಾಥ ಬೊಂದೆಲ್ ಮಂಗಳೂರು, ಸದಾನಂದ ಜಿ.ರಾವ್ ಕುಂಜಾಲು ಎಂಬವರ ಹೆಸರಿನ ಐವರು ಖಾತೆದಾರರಿಗೆ ಒಟ್ಟು 73 ಲಕ್ಷ ರೂ. ವರ್ಗಾವಣೆ ಮಾಡಲಾಗಿತ್ತು.
ಈ ಬಗ್ಗೆ ಆ.25ರಂದು ಮಲ್ಪೆ ಶಾಖೆಯ ಪ್ರಸ್ತುತ ಮ್ಯಾನೇಜರ್ ರಾಜೇಶ್ ಗಣಪತಿ ಅವರಿಗೆ ಎಸ್ಬಿಐ ಮುಂಬೈ ಶಾಖೆಯಿಂದ ವಿವರಣೆ ಕೇಳಲಾಗಿತ್ತು. ಮಲ್ಪೆ ಎಸ್ಬಿಐ ಶಾಖೆಯಿಂದ ಮಾಡಲಾಗಿದ್ದ ಹಣ ವರ್ಗಾವಣೆಗೆ ಸಂಬಂಧಿಸಿ ದಾಖಲೆಗಳನ್ನು ಆ.26ರಂದು ಮುಂಬೈ ಮುಖ್ಯ ಕಚೇರಿಗೆ ಮ್ಯಾನೇಜರ್ ಸಲ್ಲಿಸಿದ್ದರು.
ಆದರೆ ಈ ಬಗ್ಗೆ ಫೈನಾನ್ಸ್ ಕಂಪನಿಯಲ್ಲಿ ವ್ಯವಹರಿಸಿದಾಗ, ನಾವು ಯಾವುದೇ ಇ-ಮೇಲ್ ಸಂದೇಶ ಕಳುಹಿಸಿಲ್ಲ ಎಂದು ಉತ್ತರ ಬಂದಿತ್ತು. ಕಂಪನಿಯಿಂದ ಹಣ ವರ್ಗಾವಣೆಗೆ ಸಂಬಂಧಿಸಿ ಮಲ್ಪೆ ಎಸ್ಬಿಐ ಶಾಖೆಗೆ ಯಾವುದೇ ಮನವಿ ಕಳುಹಿಸಿಲ್ಲ ಎಂದು ತಿಳಿಸಿದ ಹಿನ್ನೆಲೆಯಲ್ಲಿ ಎಸ್ ಬಿಐ ಶಾಖೆಯ ಮ್ಯಾನೇಜರ್ ತನಿಖೆ ನಡೆಸಿದಾಗ ಅವ್ಯವಹಾರ ಪತ್ತೆಯಾಗಿದೆ.
ಮಲ್ಪೆ ಶಾಖೆಯ ಈ ಹಿಂದೆ ಮ್ಯಾನೇಜರ್ ಆಗಿದ್ದ ಮೀರಾ ಪಲ್ಲವಿ ಟಿ.ಎಚ್. ಎಂಬವರು ಹಾಗೂ ಇತರರೊಂದಿಗೆ ಸೇರಿ ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿರುವುದು ಪತ್ತೆಯಾಗಿದೆ. ಆ.11ರಿಂದ 22ರ ಅವಧಿಯಲ್ಲಿ ಒಟ್ಟು 73 ಲಕ್ಷ ರೂ. ಹಣ ವರ್ಗಾಯಿಸಿ ಸ್ವಂತಕ್ಕೆ ಬಳಸಿಕೊಂಡಿರುವುದು ಪತ್ತೆಯಾಗಿದೆ. ಆಮೂಲಕ ಬ್ಯಾಂಕಿಗೆ ನಂಬಿಕೆ ದ್ರೋಹ ಮತ್ತು ವಂಚನೆ ಎಸಗಿದ ಆರೋಪದಲ್ಲಿ ಹಿಂದಿನ ಮ್ಯಾನೇಜರ್ ಪಲ್ಲವಿ ಮತ್ತು ಖಾತೆದಾರರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A major financial fraud has come to light at the State Bank of India (SBI) Malpe branch, where the bank’s own staff, including the former branch manager, are accused of forging documents and fraudulently transferring ₹73 lakh to multiple personal accounts under the pretext of a housing finance transaction.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm