ಬ್ರೇಕಿಂಗ್ ನ್ಯೂಸ್
01-09-25 09:21 pm Udupi Correspondent ಕ್ರೈಂ
ಉಡುಪಿ, ಸೆ.1 : ಒಂದೂವರೆ ವರ್ಷದ ಮಗುವಿಗೆ ನೇಣು ಬಿಗಿದು ಬಳಿಕ ತಾಯಿಯೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಜಾಲು ಹೆರಂಜೆ ಕ್ರಾಸ್ ಬಳಿ ಸೋಮವಾರ ನಡೆದಿದೆ.
ಮೃತರನ್ನು ಸುಭಾಷ್ ಎಂಬವರ ಪತ್ನಿ ಸುಷ್ಮೀತಾ (23) ಹಾಗೂ ಒಂದೂವರೆ ವರ್ಷದ ಮಗು ಶ್ರೇಷ್ಠ ಎಂದು ಗುರುತಿಸಲಾಗಿದೆ. ಪತಿ ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ದುರಂತ ಸಾವು ತಂದುಕೊಂಡಿದ್ದಾರೆ. ತನ್ನ ಸಾವಿಗೆ ತಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
2009ರಲ್ಲಿ ನೆರೆಮನೆಯ ವಿನ್ಸೆಂಟ್ ಪಾಯಸ್ ಎಂಬವರ ಮೇಲೆ ಸುಭಾಷ್ ಮತ್ತು ಮನೆಯವರು ಹಲ್ಲೆ ನಡೆಸಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಆಬಳಿಕ ವಿಚಾರಣೆ ನಡೆದು 2012 ರಲ್ಲಿ ಜಿಲ್ಲಾ ನ್ಯಾಯಾಲಯ ಸುಭಾಷ್, ಆತನ ತಾಯಿ ಮತ್ತು ಸೋದರನಿಗೆ 12 ವರ್ಷಗಳ ಗರಿಷ್ಠ ಶಿಕ್ಷೆ ವಿಧಿಸಿತ್ತು. ಸುಭಾಷ್ ಕುಟುಂಬ ಜಿಲ್ಲಾ ಕೋರ್ಟ್ ನೀಡಿದ್ದ ಶಿಕ್ಷೆಯ ತೀರ್ಪನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿತ್ತು. ಸುದೀರ್ಘ 12 ವರ್ಷಗಳ ವಾದ- ಪ್ರತಿವಾದ ನಡೆದ ಬಳಿಕ ಕಳೆದ ಜುಲೈ ತಿಂಗಳಲ್ಲಿ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು. ಇದರಿಂದಾಗಿ ತಾಯಿ, ಮಕ್ಕಳು 12 ವರ್ಷಗಳ ಶಿಕ್ಷೆ ಅನುಭವಿಸಲು ಜೈಲಿಗೆ ಹೋಗುವುದು ಪಕ್ಕಾ ಆಗಿತ್ತು.

ಇದೇ ವಿಚಾರದಲ್ಲಿ ವಕೀಲರ ಜೊತೆಗೆ ಚರ್ಚಿಸಲು ಸುಭಾಷ್ ಬೆಂಗಳೂರು ತೆರಳಿದ್ದರು. ಅಲ್ಲದೆ, ಶಿಕ್ಷೆಯ ವಿಚಾರದಲ್ಲಿ ಕುಟುಂಬಸ್ಥರು ತೀವ್ರ ಚಿಂತೆಗೆ ಒಳಗಾಗಿದ್ದರು. 16 ವರ್ಷಗಳ ಹಿಂದಿನ ಕೇಸಿನ ಬಗ್ಗೆ ತಿಳಿಯದೆ ಸುಭಾಷ್ ಜೊತೆಗೆ ಸುಷ್ಮಿತಾ ಮದುವೆಯಾಗಿತ್ತಲ್ಲದೆ, ಮಗುವೂ ಆಗಿತ್ತು. ಈಗ ಪತಿಗೆ ಶಿಕ್ಷೆ ಘೋಷಣೆ ಆಗಿದ್ದನ್ನು ತಿಳಿದು ಸುಷ್ಮಿತಾ ತೀವ್ರ ನೊಂದುಕೊಂಡು ಸಾವಿಗೆ ಶರಣಾಗಿದ್ದಾರೆ ಎನ್ನುವ ಶಂಕೆ ಇದೆ. ಆದರೆ ಡೆತ್ ನೋಟ್ ನಲ್ಲಿ ಈ ಬಗ್ಗೆ ಉಲ್ಲೇಖ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಎಸ್ಪಿ ಹರಿರಾಮ್ ಶಂಕರ್ ಕೂಡ ತೆರಳಿ ಪರಿಶೀಲನೆ ಮಾಡಿದ್ದಾರೆ. ಕೊಲೆಯತ್ನ ಪ್ರಕರಣದಲ್ಲಿ 7ರಿಂದ 12 ವರ್ಷ ಅಥವಾ ಜೀವಾವಧಿ ಶಿಕ್ಷೆ ನೀಡುವುದಕ್ಕೂ ಅವಕಾಶ ಇದೆ. ಸುಭಾಷ್ ಪ್ರಕರಣದಲ್ಲಿ ನ್ಯಾಯಾಲಯ ಇಡೀ ಕುಟುಂಬಕ್ಕೆ ಗರಿಷ್ಠ ಶಿಕ್ಷೆಯನ್ನೇ ನೀಡಿತ್ತು.
In a deeply disturbing incident, a 23-year-old woman and her one-and-a-half-year-old child were found dead in an apparent case of suicide near Heranje Cross in Kunjalu, under the jurisdiction of the Brahmavar Police Station on Monday. The deceased have been identified as Sushmita (23), wife of Subhash, and their son Shreshta (1.5 years).
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm