ಬ್ರೇಕಿಂಗ್ ನ್ಯೂಸ್
03-09-25 05:40 pm Bangalore Correspondent ಕ್ರೈಂ
ಬೆಂಗಳೂರು, ಸೆ 03 : ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಪ್ರಜೆಯನ್ನ ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಚಿಕೋಜಿ ಹೇಡಾಹಾ ಬಂಧಿತ ಆರೋಪಿ.
ಬಂಧಿತನಿಂದ 2 ಕೆ.ಜಿ 36 ಗ್ರಾಂ ಎಂಡಿಎಂಎ, ₹3 ಸಾವಿರ ನಗದು, ತೂಕದ ಯಂತ್ರ, ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಇದರ ಮೌಲ್ಯ ₹2.30 ಕೋಟಿ ಎಂದು ಅಂದಾಜಿಸಲಾಗಿದೆ.

ಬಾಗಲೂರಿನ ಸಂತೆ ವೃತ್ತದ ಬಳಿ ಆರೋಪಿ ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದ ಬಗ್ಗೆ ಖಚಿತ ಮಾಹಿತಿ ಬಂದಿತ್ತು. ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಬ್ಯುಸಿನೆಸ್ ವೀಸಾ ಪಡೆದು 2011ರಲ್ಲಿ ಆರೋಪಿ ಭಾರತಕ್ಕೆ ಬಂದಿದ್ದ. ವೀಸಾ ಅವಧಿ ಮುಕ್ತಾಯವಾಗಿದ್ದರೂ ಬೆಂಗಳೂರಿನಲ್ಲೇ ನೆಲಸಿದ್ದ. ಅಪರಿಚಿತ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಎಂಡಿಎಂಎ ಖರೀದಿಸುತ್ತಿದ್ದ ಆರೋಪಿ, ನಗರದ ಹೊರವಲಯದ ಕಾಲೇಜು ಹಾಗೂ ಪೇಯಿಂಗ್ ಗೆಸ್ಟ್ ಬಳಿ ಮಾರಾಟ ಮಾಡುತ್ತಿದ್ದ. ಈ ಹಿಂದೆಯೂ ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದಾಗ ಚಿಕೋಜಿ ಹೇಡಾಹಾನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆತ ಕಾರಾಗೃಹದಿಂದ ಹೊರಬಂದ ಬಳಿಕ ಅದೇ ಕೃತ್ಯ ಮುಂದುವರಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Bagalur Police have arrested a Nigerian national who had entered India on a business visa but was allegedly involved in the illegal sale of narcotic substances in the city. The accused, identified as Chigozie Hedaha, was caught with a large quantity of drugs. During the operation, police seized 2.036 kg of MDMA, ₹3,000 in cash, a weighing machine, and a two-wheeler. The total value of the seized drugs is estimated at ₹2.3 crore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm