ಬ್ರೇಕಿಂಗ್ ನ್ಯೂಸ್
05-09-25 10:26 pm Mangalore Correspondent ಕ್ರೈಂ
ಮಂಗಳೂರು, ಸೆ.5 : ಮುಕ್ಕ ರೋಹನ್ ಎಸ್ಟೇಟ್ ಲೇಔಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಪಶ್ಚಿಮ ಬಂಗಾಳ ಮೂಲದ ಯುವಕ ಕಾಣೆಯಾದ ಬಗ್ಗೆ ಜುಲೈ 2ರಂದು ದೂರು ದಾಖಲಾಗಿತ್ತು. ಆನಂತರ, ಅದೇ ಯುವಕನ ಶವ ಎಸ್ಟೇಟ್ ಆವರಣದ ಎಸ್ ಟಿಪಿ ಪ್ಲಾಂಟ್ ನಲ್ಲಿ ಆ.21ರಂದು ಪತ್ತೆಯಾಗಿತ್ತು. ಪ್ರಕರಣದ ಬೆನ್ನತ್ತಿದ ಸುರತ್ಕಲ್ ಪೊಲೀಸರು ಕೊಲೆ ಆರೋಪಿಯನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ.
ಸುರತ್ಕಲ್ ಗ್ರಾಮದ ಮುಕ್ಕ ರೋಹನ್ ಎಸ್ಟೇಟ್ ಎಂಬ ಹೆಸರಿನ ಲೇಔಟ್ ನಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ನಿವಾಸಿ ಮುಖೇಶ್ ಮಂಡಲ್ (27) ಜೂನ್ 24ರ ರಾತ್ರಿ 9 ಗಂಟೆ ಬಳಿಕ ಕಾಣೆಯಾದ ಬಗ್ಗೆ ಆತನ ಜೊತೆ ಕೆಲಸ ಮಾಡಿಕೊಂಡಿದ್ದ ಪಶ್ಚಿಮ ಬಂಗಾಳದ ವಾಸಿ ದೀಪಾಂಕರ್ ಎಂಬವರು ದೂರು ನೀಡಿದ್ದರು. ಇದರಂತೆ, ನಾಪತ್ತೆ ದೂರು ದಾಖಲಾಗಿತ್ತು. ಈ ಮಧ್ಯೆ ಆ. 21ರಂದು ಬೆಳಿಗ್ಗೆ 10 ಗಂಟೆಗೆ ಮುಖೇಶ್ ಮಂಡಲ್ ಮೃತದೇಹವು STP ಟ್ಯಾಂಕ್ ಒಳಗೆ ಕೊಳೆತು ಸ್ಥಿತಿಯಲ್ಲಿ ಪತ್ತೆಯಾಗಿದೆ.
ತನಿಖೆಯಲ್ಲಿ ಮುಖೇಶ್ ಮಂಡಲ್ ನನ್ನು ಅಲ್ಲಿಯೇ ಕೆಲಸ ಮಾಡುತ್ತಿದ್ದ ಲಕ್ಷ್ಮಣ್ ಮಂಡಲ್ ಎಂಬಾತ ಕೊಲೆ ಮಾಡಿ STP ಟ್ಯಾಂಕ್ ಗೆ ಹಾಕಿ, ಪ್ಲೈವುಡ್ ಶೀಟ್ ಹಾಕಿ ಮುಚ್ಚಿ ಕೊಲೆಯನ್ನು ಮರೆ ಮಾಚಿರುವ ಬಗ್ಗೆ ಚೇತನ್ ಎಂಬವರು ನೀಡಿದ ದೂರಿನಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಿ ಪತ್ತೆಗಾಗಿ ಪಿಎಸ್.ಐ ಶಶಿಧರ ಶೆಟ್ಟಿ ಹಾಗೂ ಎಎಸ್.ಐ ರಾಜೇಶ್ ಆಳ್ವ ಅವರಿದ್ದ ತಂಡವನ್ನು ರಚಿಸಿ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿಗೆ ಕಳುಹಿಸಲಾಗಿತ್ತು. ಪಿಎಸ್ಐ ಶಶಿಧರ ಶೆಟ್ಟಿ ಅವರ ತಂಡ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿದ್ದ ಆರೋಪಿ ಲಕ್ಷ್ಮಣ್ ಮಂಡಲ್ (30)ನನ್ನು ಬಂಧಿಸಿ ಕರೆತಂದಿದೆ.
ಜೂನ್ 24ರಂದು ರಾತ್ರಿ 9 ಗಂಟೆಗೆ ಮುಕ್ಕದ ರೋಹನ್ ಎಸ್ಟೇಟ್ ಲೇಔಟ್ ನಲ್ಲಿ ನಿರ್ಮಾಣ ಹಂತದ ಕಟ್ಟಡದೊಳಗೆ ಲಕ್ಷ್ಮಣ್ ಮಂಡಲ್ ಹಾಗೂ ಮುಖೇಶ್ ಮಂಡಲ್ ಮದ್ಯಪಾನವನ್ನು ಮಾಡುತ್ತಿದ್ದರು. ಈ ವೇಳೆ, ಮುಕೇಶ್ ಆರೋಪಿ ಲಕ್ಷ್ಮಣ್ ಪತ್ನಿಯ ಅಶ್ಲೀಲ ವೀಡಿಯೋಗಳನ್ನು ಸಂಗ್ರಹಿಸಿ ತನ್ನ ಮೊಬೈಲ್ ನಲ್ಲಿ ತೋರಿಸಿದ್ದ. ಇದರಿಂದ ಕೋಪಗೊಂಡ ಆರೋಪಿ ಪಕ್ಕದ ರೂಮಿನಲ್ಲಿದ್ದ ಕಬ್ಬಿಣದ ಸರಳನ್ನು ತಂದು ತಲೆಗೆ ಹೊಡೆದು ಕೊಲೆ ಮಾಡಿದ್ದು ಕೊಲೆಯನ್ನು ಮರೆ ಮಾಚಲು ಶವವನ್ನು ಅಲ್ಲಿಯೇ ಇದ್ದ STP ಟ್ಯಾಂಕ್ ನೊಳಗೆ ಹಾಕಿರುವುದಾಗಿ ತಪ್ಪೊಪ್ಪಿದ್ದಾನೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಯನ್ನು 5 ದಿನಗಳ ವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಆರೋಪಿ ಲಕ್ಷ್ಮಣ್ ಮಂಡಲ್ ವಿರುದ್ಧ ಪಶ್ಚಿಮ ಬಂಗಾಳ ರಾಜ್ಯದ ರತುವಾ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಪಿ ನೇತೃತ್ವದಲ್ಲಿ ಪಿಎಸ್ಐ ಗಳಾದ ರಘುನಾಯಕ, ರಾಘವೇಂದ್ರ ನಾಯ್ಕ್, ಜನಾರ್ಧನ ನಾಯ್ಕ್, ಶಶಿಧರ ಶೆಟ್ಟಿ, ಎಎಸ್.ಐ ಗಳಾದ ರಾಜೇಶ್ ಆಳ್ವ, ತಾರನಾಥ ಹಾಗೂ ಸಿಬ್ಬಂದಿಯವರಾದ ಅಣ್ಣಪ್ಪ, ಉಮೇಶ್ ಕುಮಾರ್, ರಾಜೇಂದ್ರ ಪ್ರಸಾದ್, ಕಾರ್ತೀಕ್, ಮೋಹನ್ ಮತ್ತು ನಾಗರಾಜ್ ಆರೋಪಿ ಪತ್ತೆಯ ಹಾಗೂ ತನಿಖೆಯಲ್ಲಿ ಭಾಗವಹಿಸಿರುತ್ತಾರೆ.
The mystery behind the murder of a 27-year-old worker from West Bengal has been solved, with police arresting the accused nearly two months after the crime. The accused, who allegedly killed his co-worker for filming obscene videos of his wife, was traced and arrested in Malda district, West Bengal, and brought back to Mangaluru. The deceased has been identified as Mukesh Mandal (27), a native of Malda district in West Bengal, who had been working at the Rohan Estate Layout in Mukka, Surathkal. He was reported missing on June 24 by a colleague, Deepankar, after failing to return to his quarters.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm