ಬ್ರೇಕಿಂಗ್ ನ್ಯೂಸ್
06-09-25 01:58 pm Udupi Correspondent ಕ್ರೈಂ
ಉಡುಪಿ, ಸೆ.6: ಷೇರು ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶದ ಆಮಿಷ ತೋರಿಸಿ ಮಹಿಳೆಯೊಬ್ಬರಿಂದ 75 ಲಕ್ಷ ರೂ. ಹೂಡಿಕೆ ಮಾಡಿಸಿ ವಂಚಿಸಿರುವ ಪ್ರಕರಣವನ್ನು ಭೇದಿಸಿರುವ ಉಡುಪಿ ಪೊಲೀಸರು, ವಂಚನೆಗೆ ಬ್ಯಾಂಕ್ ಖಾತೆ ಬಳಸಿದ ಆರೋಪದಲ್ಲಿ ಮಂಗಳೂರು ಆಸುಪಾಸಿನ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸುರತ್ಕಲ್ ಕೋಡಿಕೆರೆ ಪ್ರೇಮ್ ನಗರ ನಿವಾಸಿ ಮೊಹಮದ್ ಕೈಸ್ (20), ಹೆಜಮಾಡಿ ಕನ್ನಂಗಾರು ನಿವಾಸಿ ಅಹಮದ್ ಅನ್ವಿಜ್ (20), ಬಂಟ್ವಾಳ ತಾಲೂಕು 'ಬಿ' ಮೂಡ ಗ್ರಾಮದ ಜೋಡುಮಾರ್ಗ ನಿವಾಸಿಗಳಾದ ಸಮ್ಯಾನ್ (30) ಮತ್ತು ತಾಸೀರ್ (31) ಬಂಧಿತ ಆರೋಪಿಗಳು.
2025ರ ಫೆಬ್ರವರಿಯಲ್ಲಿ ಕಾಪು ತಾಲೂಕು ಶಂಕರಪುರ ನಿವಾಸಿ ಜೊಸ್ಸಿ ರವೀಂದ್ರ ಡಿಕ್ರೂಸ್ (54) ಎಂಬವರಿಗೆ ಫೇಸ್ಬುಕ್ ಮೂಲಕ ಪರಿಚಯವಾಗಿದ್ದ ಅಗರವಾಲ್ ಹೆಸರಿನ ಮಹಿಳೆಯೊಬ್ಬಳು ತನ್ನ ವಾಟ್ಸಪ್ ನಂಬರ್‌ನಿಂದ ಮೆಸೇಜ್ ಮಾಡಿ ಎಫ್ಎಕ್ಸ್ ಸಿಎಂ ಗೋಲ್ಡ್ ಟ್ರೇಡಿಂಗ್ ನಲ್ಲಿ ಹಣ ಹೊಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರುತ್ತದೆ ಎಂದು ನಂಬಿಸಿದ್ದಳು. ಅದರಂತೆ, ಜೊಸ್ಸಿಯವರು ತನ್ನ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು 75 ಲಕ್ಷ ರೂಪಾಯಿ ಹಣವನ್ನು ಟ್ರೇಡಿಂಗ್ ಹೆಸರಲ್ಲಿ ವರ್ಗಾವಣೆ ಮಾಡಿದ್ದರು.
ಆದರೆ ಹೂಡಿಕೆ ಮಾಡಿಸಿಕೊಂಡ ಮಹಿಳೆ ಬಳಿಕ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಜೊಸ್ಸಿ ಡಿಕ್ರೂಸ್ ಅವರು ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ್ದ ಪೊಲೀಸರು ಬ್ಯಾಂಕ್ ಖಾತೆಗಳನ್ನು ಆಧರಿಸಿ ತನಿಖೆ ಕೈಗೊಂಡು ಸುರತ್ಕಲ್, ಹೆಜಮಾಡಿ ಪರಿಸರದ ನಾಲ್ವರನ್ನು ಬಂಧಿಸಿದ್ದಾರೆ. ನಾಲ್ವರ ಖಾತೆಗಳಿಗೆ ಹಣ ರವಾನೆಯಾಗಿರುವುದು ತನಿಖೆಯಲ್ಲಿ ಪತ್ತೆಯಾಗಿದ್ದು ಇವರು ತಮ್ಮ ಖಾತೆಗಳಿಗೆ ಬಂದ ಹಣವನ್ನು ನಗದೀಕರಿಸಿ ಸೈಬರ್ ವಂಚಕರಿಗೆ ನಗದು ರೂಪದಲ್ಲಿ ನೀಡಿದ್ದಾಗಿ ತಿಳಿಸಿದ್ದಾರೆ. ಸದ್ಯಕ್ಕೆ ನಾಲ್ವರನ್ನು ಬಂಧಿಸಿದ್ದು ಇವರಿಗೂ ವಂಚಕರಿಗೂ ಹೇಗೆ ಸಂಬಂಧ, ಇವರು ಕಮಿಷನ್ ಪಡೆದು ಹಣ ನೀಡಿದ್ದು ಹೌದೇ ಅಥವಾ ಇವರೇ ಸೈಬರ್ ವಂಚನೆ ಮಾಡುತ್ತಿದ್ದಾರೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಎಎಸ್ಪಿ ಸುಧಾಕರ ನಾಯ್ಕ್, ಡಿವೈಎಸ್ಪಿ ಡಾ.ಹರ್ಷ ಪ್ರಿಯಂವದ ಮಾರ್ಗದರ್ಶನದಲ್ಲಿ ಸೆನ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್, ಎಎಸ್‌ಐ ಉಮೇಶ್ ಜೋಗಿ, ಸಿಬ್ಬಂದಿ ಪ್ರವೀಣ್ ಕುಮಾರ್, ಪ್ರವೀಣ ಶೆಟ್ಟಿಗಾರ್, ವೆಂಕಟೇಶ್, ರಾಘವೇಂದ್ರ, ರಾಜೇಶ್, ದೀಕ್ಷಿತ್ ಅವರನ್ನೊಳಗೊಂಡ ವಿಶೇಷ ತಂಡ ಕಾರ್ಯಾಚರಣೆ ನಡೆಸಿದೆ. ನಾಲ್ವರು ಆರೋಪಿಗಳಿಂದ ಮೊಬೈಲ್ ಪೋನ್ ಹಾಗೂ 4 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Udupi Police have busted a cyber fraud case in which a woman investor was duped of ₹75 lakh under the guise of stock trading. Four men from the Mangaluru region have been arrested for providing their bank accounts to facilitate the scam.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm