ಬ್ರೇಕಿಂಗ್ ನ್ಯೂಸ್
26-12-20 12:17 pm Mangalore Correspondent ಕ್ರೈಂ
ವಿಟ್ಲ, ಡಿ.26: ನಾಲ್ಕು ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದ್ದ ದರೋಡೆ ಕೃತ್ಯದ ಮಾದರಿಯಲ್ಲೇ ವಿಟ್ಲದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಒಂಟಿ ಮಹಿಳೆ ಮನೆಯಲ್ಲಿದ್ದಾಗ ನುಗ್ಗಿದ ವ್ಯಕ್ತಿಯೊಬ್ಬ ಮಹಿಳೆಯನ್ನು ಕಟ್ಟಿಹಾಕಿ, ಹಲ್ಲೆ ನಡೆಸಿ ಆಕೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾನೆ.
ವಿಟ್ಲದ ಕಾನತ್ತಡ್ಕ ಜುಮಾ ಮಸೀದಿ ಮುಂಭಾಗದಲ್ಲಿರುವ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ. ಆಟೋ ಚಾಲಕನಾಗಿರುವ ರಫೀಕ್, ಶುಕ್ರವಾರ ಮಧ್ಯಾಹ್ನ ಹತ್ತು ವರ್ಷದ ಮಗನೊಂದಿಗೆ ಮಸೀದಿಗೆ ತೆರಳಿದ್ದರು. ಈ ವೇಳೆ, ಪತ್ನಿ ಜೈನಾಬ ಒಬ್ಬರೇ ಇದ್ದು ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಕಟ್ಟಿ ಹಾಕಿದ್ದಾನೆ. ಬಳಿಕ ಆಕೆಯ ದೇಹದಲ್ಲಿದ್ದ ಉಂಗುರ, ಕಿವಿಯೋಲೆ, ಚೈನ್ ಅನ್ನು ಕಿತ್ತುಕೊಂಡಿದ್ದಾನೆ. ಮನೆಯ ಕಪಾಟು ಜಾಲಾಡಿದ್ದು, ಅದರಲ್ಲಿ ಯಾವುದೇ ವಸ್ತುಗಳು ಸಿಕ್ಕಿಲ್ಲ.
ಪತಿ ಮಸೀದಿಯಿಂದ ಬಂದಾಗ ಮುಂಬಾಗಿಲು ಮುಚ್ಚಿಕೊಂಡಿತ್ತು. ಹಿಂಬಾಗಿಲು ತೆರೆದಿದ್ದು ಅಲ್ಲಿಂದ ಒಳ ಹೋದಾಗ ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರ ಸುತ್ತಮುತ್ತಲಲ್ಲಿ ಹಲವು ಮನೆಗಳಿದ್ದು ದರೋಡೆ ಕೃತ್ಯ ಯಾರ ಗಮನಕ್ಕೂ ಬರಲಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
A gang of robbers broke into a house in Kanathadka, Vittal here on Friday December 25 and robbed gold ornaments after tying up and assaulting a woman occupant.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm