ಬ್ರೇಕಿಂಗ್ ನ್ಯೂಸ್
12-09-25 05:31 pm Udupi Correspondent ಕ್ರೈಂ
ಉಡುಪಿ, ಸೆ 12 : ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ಯುವಕನೊಬ್ಬ, ಯುವತಿಗೆ ಚೂರಿಯಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ.
ಚೂರಿ ಇರಿತಕ್ಕೆ ಒಳಗಾದ 24 ವರ್ಷದ ಯುವತಿಯನ್ನು ಸ್ಥಳೀಯರ ಸಹಕಾರದೊಂದಿಗೆ ತಕ್ಷಣ ಮಣಿಪಾಲ ಕಸ್ತೂರ್ ಬಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಆಕೆಯ ಸ್ಥಿತಿ ಗಂಭೀರವಾಗಿದ್ದರಿಂದ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿ ಯುವಕ, ಯುವತಿಯನ್ನು ಮದುವೆಯಾಗುವಂತೆ ಪೀಡಿಸಿದ್ದು, ಇದಕ್ಕೆ ಯುವತಿ ನಿರಾಕರಿಸಿದ್ದಾಳೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು, ಸಿಟ್ಟಿನಲ್ಲಿ ಯುವಕ ಸ್ಥಳದಲ್ಲೇ ಯುವತಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಮಗೆ ತಿಳಿದು ಬಂದಿದೆ. ಚೂರಿ ಇರಿತದಿಂದ ಯುವತಿಯು ಗಂಭೀರ ಗಾಯಗೊಂಡು ಸ್ಥಳದಲ್ಲಿ ಕುಸಿದು ಬಿದ್ದಿದ್ದು, ಜೀವನ್ಮರಣ ಹೋರಾಟದಲ್ಲಿದ್ದ ಆಕೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯನ್ನು ಪ್ರೀತಿಸುತ್ತಿದ್ದ ಯುವಕ, ತನ್ನನ್ನು ಮದುವೆಯಾಗುವಂತೆ ಕಳೆದ ಹಲವು ದಿನಗಳಿಂದ ಒತ್ತಾಯಿಸುತ್ತಿದ್ದ. ಯುವತಿ ಮತ್ತು ಆಕೆಯ ಮನೆಯವರು ಇದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಇಂದು ಬೆಳಗ್ಗೆ ಕೊಕ್ಕರ್ಣೆ ಬಳಿ ಬಸ್ ನಿಲ್ದಾಣಕ್ಕೆ ಯುವತಿ ನಡೆದುಕೊಂಡು ಹೋಗುತ್ತಿದ್ದಾಗ ಆಕೆಯಯನ್ನು ಬೆನ್ನಟ್ಟಿ ಬಂದ ಯುವಕ, ಯುವತಿಯ ಕುತ್ತಿಗೆಗೆ ಚಾಕು ಇರಿದು ಕೊಲೆ ಮಾಡಲು ಯತ್ನಿಸಿದ್ದಾನೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಇಂದೇ ಯುವತಿಯ ಹುಟ್ಟುಹಬ್ಬ:
ಈ ಬಗ್ಗೆ ಮಾಹಿತಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಹಿತಿ ನೀಡಿ, ಯುವತಿಗೆ ಇಂದೇ ಹುಟ್ಟುಹಬ್ಬವಾಗಿತ್ತು. ಬೆಳಗ್ಗೆ ಎಂಟೂವರೆ ಸುಮಾರಿಗೆ ಕೊಕ್ಕರ್ಣೆ ಬಳಿ ಬಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ಯುವಕ ಚೂರಿಯಿಂದ ಇರಿದಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದೇವೆ. ಯುವತಿ ಮತ್ತು ಮನೆಯವರು ಮದುವೆ ನಿರಾಕರಿಸಿದ ಬಳಿಕ ಯುವತಿ ಕಳೆದ ಎರಡು ವಾರಗಳಿಂದ ಆರೋಪಿಯ ಫೋನ್ ನಂಬರ್ ಬ್ಲಾಕ್ ಮಾಡಿದ್ದರು. ಇದರಿಂದ ಕೋಪಗೊಂಡಿದ್ದ ಯುವಕ, ಈ ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಸದ್ಯ ಯುವತಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂದಿನ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.
In a disturbing incident that unfolded in the Brahmavar taluk of Udupi district, a 24-year-old woman was critically injured after being stabbed by a man whose marriage proposal she had rejected. The attack occurred on Wednesday morning near a bus stop in Kokkarne — shockingly, on the woman’s birthday.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm