ಬ್ರೇಕಿಂಗ್ ನ್ಯೂಸ್
12-09-25 10:48 pm Mangalore Correspondent ಕ್ರೈಂ
ಉಳ್ಳಾಲ, ಸೆ.12 : ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಪಜೀರು ಮತ್ತು ತೊಕ್ಕೊಟ್ಟುವಿನಲ್ಲಿ ಚಿನ್ನ ಕದ್ದಿದ್ದ ಕಳ್ಳಿಯೋರ್ವಳನ್ನು ಉಳ್ಳಾಲ ಪೊಲೀಸರು ಮಹತ್ತರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಆಕೆಯಿಂದ 1.80 ಲಕ್ಷ ರೂಪಾಯಿ ಮೌಲ್ಯದ 18 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಉಳ್ಳಾಲ ಅಕ್ಕರೆಕೆರೆ ನಿವಾಸಿ ಮಿನ್ನತ್ ಎಂಬಾಕೆಯೆ ಬಂಧಿತ ಕಳ್ಳಿ. ಬೆಳ್ಮ ಗ್ರಾಮದ ನಿವಾಸಿ ರಹಮತ್ ಎಂಬ ಮಹಿಳೆ ಕಳೆದ ಜೂನ್ 2ರಂದು ತನ್ನ ಮಕ್ಕಳೊಂದಿಗೆ ತೊಕ್ಕೊಟ್ಟಿನ ಸಾಗರ್ ಕಲೆಕ್ಷನ್ ಬಟ್ಟೆ ಮಳಿಗೆಗೆ ಬಟ್ಟೆ ಖರೀದಿಸಲು ಬಂದಿದ್ದ ವೇಳೆ ಮಳೆ ಬಂದ ಕಾರಣ ಸ್ಥಳೀಯ ಬೇಕರಿಯ ಮುಂದೆ ಆಶ್ರಯ ಪಡೆದಿದ್ದರು. ಈ ವೇಳೆ ರಹಮತ್ ಅವರ ಮಗಳ ಕುತ್ತಿಗೆಯಲ್ಲಿದ್ದ 10 ಗ್ರಾಂ ಚಿನ್ನದ ಸರವನ್ನು ಯಾರೋ ಬುರ್ಖಾ ಧರಿಸಿದ್ದ ಹೆಂಗಸು ಕಿತ್ತುಕೊಂಡು ಹೋಗಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ರಹಮತ್ ದೂರು ದಾಖಲಿಸಿದ್ದರು.
ಉಳ್ಳಾಲ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ವಿರೂಪಾಕ್ಷ ಸ್ವಾಮಿ ನೇತೃತ್ವದ ತಂಡವು ಖಚಿತ ಮಾಹಿತಿಯನ್ವಯ ಇಂದು ಉಳ್ಳಾಲ ಅಕ್ಕರೆಕೆರೆ ನಿವಾಸಿ ಮಿನ್ನತ್ ಎಂಬಾಕೆಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಆರೋಪಿಯು ರಹಮತ್ ಅವರ ಮಗಳ ಕುತ್ತಿಗೆಯ ಹತ್ತು ಗ್ರಾಂ ಚಿನ್ನದ ಸರ ಕದ್ದಿದ್ದಲ್ಲದೆ, ಕಳೆದ ಜುಲೈ 9 ರಂದು ಪಜೀರು ಗ್ರಾಮದ ಖಾಸಗಿ ಸಭಾಂಗಣದಲ್ಲಿ ನಡೆದಿದ್ದ ಮದುವೆ ಸಮಾರಂಭದಲ್ಲೂ ಕೈಚಳಕ ತೋರಿ ಬ್ಯಾಗ್ ನಿಂದ 8 ಗ್ರಾಂ.ನ ಚಿನ್ನದ ಸರ ಕದ್ದಿರೋದಾಗಿ ವಿಚಾರಣೆ ವೇಳೆ ಹೇಳಿಕೊಂಡಿದ್ದಾಳೆ. ಪಜೀರುವಿನಲ್ಲಿ ಸರ ಕಳ್ಳತನವಾದ ಕುರಿತಂತೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಮಿನ್ನತ್ ಕಳವು ಮಾಡಿದ್ದ 10 ಗ್ರಾಂ ಮತ್ತು 8 ಗ್ರಾಂ ತೂಕದ ಒಟ್ಟು 1,80,000 ಮೌಲ್ಯದ ಎರಡು ಚಿನ್ನದ ಸರವನ್ನು ಉಳ್ಳಾಲ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆಕೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Ullal police have arrested a woman involved in two separate gold chain thefts reported in Thokottu and Pajiru during June and July. The accused, identified as Minnath, a resident of Akkarakeri in Ullal, has been taken into custody, and police have recovered 18 grams of gold worth ₹1.8 lakh from her possession.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm