ಬ್ರೇಕಿಂಗ್ ನ್ಯೂಸ್
12-09-25 11:07 pm Mangalore Correspondent ಕ್ರೈಂ
ಮಂಗಳೂರು, ಸೆ.12 : ಅಪ್ರಾಪ್ತ ಬಾಲಕಿ ಮನೆಯಲ್ಲಿ ಒಬ್ಬಂಟಿ ಇದ್ದಾಗ ಮನೆಗೆ ನುಗ್ಗಿ ಆಕೆಗೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆಗೈದ ಪ್ರಕರಣ ದಕ್ಷಿಣ ಕನ್ನಡ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ಟಿಎಫ್ಸಿ-೨ (ಪೋಕ್ಸೊ) ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳಗಾವಿ ಸವದತ್ತಿ ತಾಲೂಕು ಹಂಚಿನಾಳ ಗ್ರಾಮ ನಿವಾಸಿ ಫಕೀರಪ್ಪ ಹಣಮಪ್ಪ ಮಾದರ (೫೮) ಶಿಕ್ಷೆಗೊಳಗಾದ ಅಪರಾಧಿ.
ಅಪ್ರಾಪ್ತ ಬಾಲಕಿ ಬೆಳಗಾವಿ ಮೂಲದವಳಾಗಿದ್ದು, ಕೋಣಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು. ಬಾಲಕಿಯ ತಾಯಿ ಮಗಳನ್ನು ತನ್ನ ಸೋದರ ಸಂಬಂಧಿ ಮನೆಯಲ್ಲಿ ಬಿಟ್ಟು ಕೊಣಾಜೆ ವಸತಿ ಶಾಲೆಗೆ ಬಿಟ್ಟು ಬರುವಂತೆ ಹೇಳಿ ಊರಿಗೆ ತೆರಳಿದ್ದರು. 2024ರ ಆ.6ರಂದು ಬೆಳಗ್ಗೆ ಪಿರ್ಯಾದಿದಾರರು (ಬಾಲಕಿಯ ಮಾವ) ಗಾರೆ ಕೆಲಸಕ್ಕೆ ಹೊರಟು ಹೋಗಿದ್ದರೆ ಅವರ ಹೆಂಡತಿ ಊರಿಗೆ ಹೋಗಿದ್ದರು. ಬಾಲಕಿ ಒಬ್ಬಳೇ ಮನೆಯಲ್ಲಿದ್ದು, ಈ ಸಂದರ್ಭ ಪಕ್ಕದ ಬಾಡಿಗೆ ಮನೆಯಲ್ಲಿ ವಾಸವಿದ್ದ ಆರೋಪಿ ಫಕೀರಪ್ಪ ಬಾಲಕಿ ಇದ್ದ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯವೆಸಗಿದ್ದ. ಬಾಲಕಿ ವಿರೋಧಿಸಿದಾಗ ಹಲ್ಲೆಗೈದು ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ, ಸ್ಥಳದಿಂದ ಪರಾರಿಯಾಗುತ್ತಾನೆ.
ಅಪ್ರಾಪ್ತ ಬಾಲಕಿಯ ಕೊಲೆಗೆ ಸಂಬಂಧಿಸಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಲಯ ನ್ಯಾಯಾಧೀಶ ಕೆ.ಎಸ್.ಮಾನು ಅವರು ಆರೋಪಿ ಮೇಲಿನ ಅಪರಾಧ ಸಾಬೀತುಪಡಿಸಿ ತೀರ್ಪು ನೀಡಿದ್ದಾರೆ. ಅಪರಾಧಿಗೆ ಬಿಎನ್ಎಸ್ ೧೦೩(೧) ಕೊಲೆ ಪ್ರಕರಣಕ್ಕೆ ಮರಣದಂಡನೆ ಶಿಕ್ಷೆ, ಪೊಕ್ಸೋ ೪(೨)ರಡಿ ಪೋಕ್ಸೋ ಪ್ರಕರಣಕ್ಕೆ ಜೀವಾವಧಿ ಶಿಕ್ಷೆ ಮತ್ತು ೫೦ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ೪ ತಿಂಗಳು ಸಾದಾ ಶಿಕ್ಷೆ, ಬಿಎನ್ಎಸ್ ೩೩೨(ಎ) ಅಕ್ರಮ ಪ್ರವೇಶ ಅಪರಾಧದಡಿ ಜೀವಾವಧಿ ಶಿಕ್ಷೆ ಮತ್ತು ೫ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ೪ ತಿಂಗಳು ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
5 ಲಕ್ಷ ರೂ. ಪರಿಹಾರ ನೀಡಲು ಅದೇಶ
ಬಾಲಕಿಯ ತಂದೆ-ತಾಯಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶ ನೀಡಿದೆ. ಪಣಂಬೂರು ಠಾಣಾ ಇನ್ಸ್ಪೆಕ್ಟರ್ ಮೊಹಮ್ಮದ್ ಸಲೀಂ ಅಬ್ಬಾಸ್ ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸಿದ್ದರು. ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ಬೋಳೂರು ಸರಕಾರದ ಪರವಾಗಿ ವಾದಿಸಿದ್ದರು.
ಅಪ್ರಾಪ್ತ ಬಾಲಕಿ ಕೊಲೆಗೆ ಮುನ್ನಾ ದಿನ ನೆರೆಮನೆಯ ಮಹಿಳೆಯೊಬ್ಬರ ಫೋನ್ ಮೂಲಕ ತನ್ನ ತಾಯಿಗೆ ಕರೆ ಮಾಡಿ ಜ್ವರವಿರುವ ಬಗ್ಗೆ ಹೇಳಿದ್ದಳು. ಮರುದಿನ ತಾಯಿ ಕರೆ ಮಾಡಿ, ಮಗಳಿಗೆ ಫೋನ್ ಕೊಡುವಂತೆ ಹೇಳಿದ್ದರು. ಮಹಿಳೆ ಬಾಲಕಿ ಇರುವ ಮನೆಗೆ ಬಂದಾಗ ಆರೋಪಿ ಫಕೀರಪ್ಪ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ್ದು ಕಂಡಿತ್ತು. ಇದನ್ನು ನೋಡಿ ಮಹಿಳೆಯರು ಆತಂಕಿತರಾಗಿದ್ದು, ಆರೋಪಿ ಈ ವಿಷಯ ಯಾರಿಗೂ ಹೇಳದಂತೆ ಮಹಿಳೆಯರಿಗೆ ಬೆದರಿಸಿ ಅಲ್ಲಿಂದ ತೆರಳಿದ್ದ. ಕೋರ್ಟ್ ವಿಚಾರಣೆ ವೇಳೆ ಇಬ್ಬರು ಮಹಿಳೆಯರು ಘಟನೆಯ ಪ್ರತ್ಯಕ್ಷ ಸಾಕ್ಷಿ ಹೇಳಿದ್ದು ಪ್ರಮುಖವಾಗಿತ್ತು. ಉಳಿದಂತೆ ಆರೋಪಿ ಬಟ್ಟೆಯಲ್ಲಿದ್ದ ರಕ್ತ ಹಾಗೂ ಬಾಲಕಿ ರಕ್ತದ ಸ್ಯಾಂಪಲ್ ಹೋಲಿಕೆಯಾಗಿದೆ. ಬಾಲಕಿಯ ಮುಖದಲ್ಲಿದ್ದ ಗಾಯದ ಗುರುತು ಮತ್ತು ಆರೋಪಿಯ ಹಲ್ಲಿನ ಚಹರೆ ಹೋಲಿಕೆಯಾಗಿದೆ.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm