ಬ್ರೇಕಿಂಗ್ ನ್ಯೂಸ್
13-09-25 11:36 am Mangalore Correspondent ಕ್ರೈಂ
ಮಂಗಳೂರು, ಸೆ.13 : ನಕಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ತಯಾರಿಸಿ ಅಸಲಿ ದಾಖಲೆಗಳೆಂದು ಆರೋಪಿಗಳಿಗೆ ಜಾಮೀನು ನೀಡಲು ಬಳಸುತ್ತಿದ್ದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮತ್ತಷ್ಟು ಆರೋಪಿಗಳನ್ನು ಬಂಧಿಸಿದ್ದಾರೆ.
ಬಪ್ಪನಾಡು ನಿವಾಸಿ ಅಬ್ದುಲ್ ರೆಹಮಾನ್ (46), ತೊಕ್ಕೊಟ್ಟು ಅಂಬಿಕಾ ರಸ್ತೆ ನಿವಾಸಿ ನಿಶಾಂತ್ ಕುಮಾರ್ (28) ಎಂಬಿಬ್ಬರು ಈಗಾಗಲೇ ಬಂಧಿತರಾಗಿದ್ದು ಬಂಟ್ವಾಳ ತಾಲೂಕು ಪುದು ನಿವಾಸಿ ನಿತಿನ್ ಕುಮಾರ್ (31), ಇಂದಿರಾನಗರ ಹಾಲಾಡಿ ಸಜಿಪ ಮುನ್ನೂರು ನಿವಾಸಿ ಹಸನ್ ರಿಯಾಜ್ ಯಾನೆ ರಿಯಾಜ್ (46), ಕಾವೂರು ಪಳನೀರ್ ನಿವಾಸಿ ಮಹಮ್ಮದ್ ಹನೀಫ್ (39) ಎಂಬವರನ್ನ ಈ ಜಾಲದಲ್ಲಿ ಬಂಧಿಸಲಾಗಿದೆ.
ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಈ ಬಗ್ಗೆ ಮಾಹಿತಿ ನೀಡಿ, ವಂಚನೆ ಜಾಲದಲ್ಲಿ ಇನ್ನೂ ಹಲವಾರು ಆರೋಪಿಗಳು ಭಾಗಿಯಾಗಿರುವ ಬಗ್ಗೆ ಮಾಹಿತಿ ಇದ್ದು ತನಿಖೆ ಮುಂದುವರೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಉತ್ತರ ಪೊಲೀಸ್ ದಾಖಲಾದ ಎರಡು ಪ್ರಕರಣಗಳ ಬಗ್ಗೆ ತನಿಖೆ ಕೈಗೊಂಡಾಗ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಆರೋಪಿ ನಿತಿನ್ ಕುಮಾರ್ ಎಂಬಾತ ಗಣೇಶ್ ಕೆ.ಸಾಲ್ಯಾನ್ ಎಂಬ ನಕಲಿ ಹೆಸರಿನಲ್ಲಿ ಜಾಮೀನು ಕೊಡಿಸಿ ನ್ಯಾಯಾಲಯಕ್ಕೆ ವಂಚಿಸಿರುವುದು ಕಂಡುಬಂದಿತ್ತು.
ಅದೇ ರೀತಿ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಮತ್ತೊಂದು ಪ್ರಕರಣದಲ್ಲಿ ಹಸನ್ ರಿಯಾಜ್ ಎಂಬಾತ ಎ.ಎಂ. ಹಮೀದ್ ಎಂಬ ನಕಲಿ ಹೆಸರಿನಲ್ಲಿ ವ್ಯಕ್ತಿಯೊಬ್ಬನಿಗೆ ಜಾಮೀನು ಕೊಡಿಸಿ ನ್ಯಾಯಾಲಯಕ್ಕೆ ವಂಚಿಸಿರುವುದು ಪತ್ತೆಯಾಗಿದೆ. ಈ ಪೈಕಿ ಮಹಮ್ಮದ್ ಹನೀಫ್ ಎಂಬಾತ ನ್ಯಾಯಾಲಯಕ್ಕೆ ನಕಲಿ ದಾಖಲಾತಿಗಳನ್ನು ನೀಡಿ ಆರೋಪಿಗಳಿಗೆ ಜಾಮೀನು ಕೊಡಿಸಲು ಸಹಕರಿಸುತ್ತಿದ್ದ ಎಂದು ಕಮಿಷನರ್ ತಿಳಿಸಿದ್ದಾರೆ. ನಕಲಿ ದಾಖಲೆ ಮತ್ತು ನಕಲಿ ವ್ಯಕ್ತಿಗಳನ್ನು ಕೋರ್ಟಿಗೆ ಸಲ್ಲಿಸಿ ಆರೋಪಿಗಳಿಗೆ ಜಾಮೀನು ನೀಡುತ್ತಿದ್ದುದಲ್ಲದೆ, ಇದಕ್ಕಾಗಿ ವಕೀಲರ ಮೂಲಕ ದುಬಾರಿ ಶುಲ್ಕವನ್ನೂ ಪಡೆಯುತ್ತಿದ್ದರು ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.
ಉಡುಪಿ ಜಿಲ್ಲೆಯಲ್ಲೂ ಇಂತಹ ಸುಮಾರು 10 ಪ್ರಕರಣಗಳು ನಡೆದಿರುವುದು ದೃಢಪಟ್ಟಿದೆ. ಯಾರದ್ದೋ ಟಿಸಿಯನ್ನು ದುರ್ಬಳಕೆ ಮಾಡಿರುವುದು, ನಕಲಿ ಆರ್ಟಿಸಿಗಳನ್ನು ನೀಡಿ ಆರೋಪಿಗಳಿಗೆ ಜಾಮೀನು ಕೊಡಿಸುವುದು ಪತ್ತೆಯಾಗಿದೆ. ಆದ್ದರಿಂದ ಸಾರ್ವಜನಿಕರು ತಮ್ಮ ಆರ್ಟಿಸಿಗಳನ್ನು ಚೆಕ್ ಮಾಡುವುದು ಒಳಿತು ಎಂದವರು ಸಲಹೆ ನೀಡಿದ್ದಾರೆ.
Police in Mangaluru have arrested three more individuals in connection with a racket that used fake Aadhaar cards and RTC (Record of Rights) documents to secure bail for accused persons. The accused allegedly prepared forged documents and even produced fake guarantors before courts in exchange for money.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm