ಬ್ರೇಕಿಂಗ್ ನ್ಯೂಸ್
17-09-25 06:04 pm Mangalore Correspondent ಕ್ರೈಂ
ಮಂಗಳೂರು, ಸೆ.17 : ನಗರದ ಅಡ್ಯಾರ್ ನಲ್ಲಿ ಹಟ್ಟಿಯಿಂದ ಸಾಕು ಜರ್ಸಿ ದನವನ್ನು ರಾತ್ರಿ ವೇಳೆ ಕದ್ದೊಯ್ದ ಘಟನೆಗೆ ಸಂಬಂಧಿಸಿ ಕಂಕನಾಡಿ ನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸೆ.13ರಂದು ನಸುಕಿನಲ್ಲಿ ಅಡ್ಯಾರ್ ಬಳಿಯ ತಜಿಪೋಡಿ ಎಂಬಲ್ಲಿ ಉಮೇಶ್ ಆಳ್ವ ಎಂಬವರ ಮನೆಯ ಅಂಗಳದಿಂದ ಒಂದು ಕ್ರಾಸ್ ಜರ್ಸಿ ಹಸುವನ್ನು ಕಳ್ಳತನ ಮಾಡಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ರಿ ಪ್ರಕರಣದಲ್ಲಿ ಕಳುವಾದ ಹಸುವನ್ನು ಕಂಕನಾಡಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಜೀವಂತವಾಗಿ ಪತ್ತೆ ಮಾಡಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಅಡ್ಯಾರ್ ಗಾಣದಬೆಟ್ಟು ನಿವಾಸಿ ಶಾಬಾಜ್ ಅಹಮ್ಮದ್, ವಳಚ್ಚಿಲ್ ನಿವಾಸಿ ಮೊಹಮ್ಮದ್ ಸುಹಾನ್, ವಳಚ್ಚಿಲ್ ಖಾದರ್ ಮೊಹಮ್ಮದ್ @ ಕೋಳಿ ಮೋನಕ್ಕ ಬಂಧಿತರು. ಶಾಬಾಜ್ ಮತ್ತು ಸುಹಾನ್ ದನ ಕಳ್ಳತನ ಮಾಡಿ, ವಳಚ್ಚಿಲ್ ಖಾದರ್ ಗೆ ಮಾರಾಟ ಮಾಡಿದ್ದರು. ಅದನ್ನು ಮಾಂಸ ಮಾಡಲು ಖರೀದಿಸಿದ್ದು, ದನವನ್ನು ರಕ್ಷಿಸಿ ಆರೋಪಿಗಳನ್ನು ಬಂಧಿಸಲಾಗಿರುತ್ತದೆ.
ಶಾಬಾಜ್ ಅಹ್ಮದ್ ವಿರುದ್ದ ಈಗಾಗಲೇ ಮಂಗಳೂರು ಗ್ರಾಮಾಂತರ ಮತ್ತು ಕಂಕನಾಡಿ ಠಾಣೆಯಲ್ಲಿ ಒಂದು ಕೊಲೆ, ಎರಡು ಕೊಲೆ ಪ್ರಯತ್ನ ಮತ್ತು ಒಂದು ದೊಂಬಿ ಪ್ರಕರಣಗಳು ಮತ್ತು ಮೊಹಮ್ಮದ್ ಸುಹಾನ್, ಅರ್ಕುಳ ಎಂಬಾತನ ವಿರುದ್ದ ಉಳ್ಳಾಲ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಪ್ರಕರಣ ಹಾಗೂ ವಳಚ್ಚಿಲ್ ಖಾದರ್ ಮೊಹಮ್ಮದ್ ಎಂಬಾತನ ವಿರುದ್ದ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಗೋ ಹತ್ಯೆ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳು ದನ ಕಳವುಗೈದು ವಳಚ್ಚಿಲ್ ಅಬ್ದುಲ್ ಖಾದರ್ ಮನೆಗೆ ಹೊಂದಿಕೊಂಡ ಶೆಡ್ ನಲ್ಲಿ ಹತ್ಯೆ ಮಾಡಿ ಮಾಂಸ ಮಾಡಲು ಸಿದ್ಧತೆ ಮಾಡಿಕೊಂಡ ಹಿನ್ನೆಲೆಯಲ್ಲಿ ಸದ್ರಿ ಜಾಗವನ್ನು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧ್ಯಾದೇಶ -2020 ರಲ್ಲಿ ಪ್ರದತ್ತವಾದ ಅಧಿಕಾರದಂತೆ ಜಪ್ತಿ ಮಾಡಿ, ಸರಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ.
In a case of attempted illegal cattle slaughter, police in Mangaluru have arrested three individuals in connection with the theft of a Jersey cow from a cattle shed in Adyar. The accused allegedly planned to kill the animal and sell its meat.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm