ಬ್ರೇಕಿಂಗ್ ನ್ಯೂಸ್
17-09-25 09:44 pm HK News Desk ಕ್ರೈಂ
ವಿಜಯಪುರ, ಸೆ 17 : 1 ಕೋಟಿ ರೂ. ನಗದು, 20 ಕೆಜಿ ಚಿನ್ನಾಭರಣ ಸೇರಿ ಒಟ್ಟು 21 ಕೋಟಿ ದರೋಡೆಯಾಗಿದೆ ಎಂದು ವಿಜಯಪುರ ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬ್ಯಾಂಕ್ ದರೋಡೆಗೆ 5 ಜನರು ಬಂದಿದ್ದರು. 6 ಜನ ಬ್ಯಾಂಕ್ ಸಿಬ್ಬಂದಿ ಹಾಗೂ 4 ಜನ ಗ್ರಾಹಕರನ್ನು ದರೋಡೆಕೋರರು ಲಾಕ್ ಮಾಡಿದ್ದಾರೆ. ಕೋಣೆಯಲ್ಲಿ ಕೂಡಿ ಹಾಕಿ, ಪ್ಲಾಸ್ಟಿಕ್ ಬ್ಯಾಂಡ್‌ಗಳಿಂದ ಕೈ, ಕಾಲು ಕಟ್ಟಿ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಪಂಡರಾಪುರ ಕಡೆ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಸದ್ಯದ ಮಾಹಿತಿ ಪ್ರಕಾರ 1 ಕೋಟಿ ರೂ. ನಗದು, ಅಂದಾಜು 20 ಕೆಜಿ ಚಿನ್ನಾಭರಣ ಸೇರಿದಂತೆ 21 ಕೋಟಿ ರೂ. ಮೌಲ್ಯದ ನಗದು ಚಿನ್ನಾಭರಣ ದರೋಡೆಯಾಗಿದೆ ಎಂದು ತಿಳಿಸಿದ್ದಾರೆ.
ಮಂಗಳವಾರ (ಸೆ.17) ಸಂಜೆ 6:30 ರಿಂದ 7:30ರ ನಡುವೆ ಬ್ಯಾಂಕ್ ಕ್ಲೋಸಿಂಗ್ ಟೈಂನಲ್ಲಿ ದರೋಡೆ ನಡೆದಿದೆ. ದರೋಡೆಕೋರರ ಪೈಕಿ ಒಬ್ಬ ವ್ಯಕ್ತಿ ಮೊದಲೇ ಒಳಗೆ ಬಂದು ಕುಳಿತಿದ್ದ. ಬ್ಯಾಂಕ್ ಕ್ಲೋಸಿಂಗ್ ಟೈಂನಲ್ಲಿ ಲಾಕರ್ ಓಪನ್ ಇತ್ತು. ಆಗ ಬಂದೂಕಿನಿಂದ ಬೆದರಿಸಿ, ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ. ಒಟ್ಟು 398 ಪ್ಯಾಕ್ ಚಿನ್ನ ಅಂದರೆ 21 ಕೋಟಿ ರೂ. ಮೌಲ್ಯದ ಚಿನ್ನ, ನಗದು ದರೋಡೆಯಾಗಿದೆ ಎಂದಿದ್ದಾರೆ.
ಸದ್ಯ 8 ತನಿಖಾ ತಂಡಗಳ ನೇಮಕ ಮಾಡಿ, ದರೋಡೆಕೋರರ ಸೆರೆಗೆ ಜಾಲ ಬೀಸಲಾಗಿದೆ. ಈಗಾಗಲೇ ಹುಲಜಂತಿಯಲ್ಲಿ ದರೋಡೆಗೆ ಬಳಸಿದ ವಾಹನ ಪತ್ತೆಯಾಗಿದ್ದು, ಸ್ವಲ್ಪ ದುಡ್ಡು, ಬಂಗಾರದ ಪ್ಯಾಕೇಟ್ ಸಿಕ್ಕಿದೆ. ಆದರೆ ವಾಹನ ನಕಲಿ ನಾಮಫಲಕ ಹೊಂದಿದೆ. ಆದಷ್ಟು ಬೇಗ ದರೋಡೆಕೋರರನ್ನ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ಬೀದರ್, ಮಂಗಳೂರು ಬ್ಯಾಂಕ್ ದರೋಡೆ
ಕಳೆದ ಕೆಲವು ತಿಂಗಳುಗಳ ಹಿಂದೆ ಬೀದರ್‌ನ ಶಿವಾಜಿ ವೃತ್ತದ ಬಳಿ ಇರುವ SBI ಬ್ಯಾಂಕ್ ಎದುರು, ಎಟಿಎಂಗೆ ಹಣ ತುಂಬಲು ಬಂದಿದ್ದ ಸಿಬ್ಬಂದಿಯ ಮೇಲೆ ಇಬ್ಬರು ದರೋಡೆಕೋರರು ಗುಂಡು ಹಾರಿಸಿ ಸುಮಾರು 93 ಲಕ್ಷ ರೂಪಾಯಿ ನಗದನ್ನು ದರೋಡೆ ಮಾಡಿದ ಘಟನೆ ನಡೆದಿತ್ತು.
2025 ಜನವರಿ 17 ರಂದು ಉಳ್ಳಾಲ ತಾಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ದರೋಡೆಕೋರರು ಸುಮಾರು 10 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನಾಭರಣ ಮತ್ತು 5 ಲಕ್ಷ ರೂಪಾಯಿ ನಗದು ದೋಚಿಕೊಂಡು ಹೋಗಿದ್ದಾರೆ.
In a major security breach, a gang of armed robbers looted an estimated ₹21 crore, including ₹1 crore in cash and 20 kg of gold ornaments, from a branch of the State Bank of India (SBI) in Vijayapura. The shocking incident occurred on Tuesday evening during closing hours between 6:30 PM and 7:30 PM, according to SP Laxman Nimbargi.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm