ಬ್ರೇಕಿಂಗ್ ನ್ಯೂಸ್
07-10-25 10:31 am HK News Desk ಕ್ರೈಂ
ಕಾಸರಗೋಡು, ಅ.7 : ಕುಂಬಳೆ ಠಾಣೆ ವ್ಯಾಪ್ತಿಯ ಸೀತಾಂಗೋಳಿ ಎಂಬಲ್ಲಿ ಭಾನುವಾರ ತಡರಾತ್ರಿ ಎರಡು ತಂಡಗಳ ಮಧ್ಯೆ ಗ್ಯಾಂಗ್ ವಾರ್ ನಡೆದಿದ್ದು ಈ ವೇಳೆ ಯುವಕನೊಬ್ಬನ ಕುತ್ತಿಗೆಯ ಭಾಗಕ್ಕೆ ಚೂರಿಯಿಂದ ಇರಿದು ಅಲ್ಲಿಯೇ ಸಿಕ್ಕಿಕೊಂಡ ಘಟನೆ ನಡೆದಿದೆ. ಗ್ಯಾಂಗ್ ವಾರ್ ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ.
ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ಹಣದ ವಿಚಾರದಲ್ಲಿ ಬದಿಯಡ್ಕ ಮತ್ತು ಸೀತಾಂಗೋಳಿಯ ಎರಡು ತಂಡಗಳ ಮಧ್ಯೆ ಹೊಡೆದಾಟ, ಚೂರಿ ಹಿಡಿದು ಬೀದಿ ಕಾಳಗ ನಡೆದಿದೆ. ಕಾರು, ಜೀಪಿನಲ್ಲಿ ಬಂದಿದ್ದ ಬದಿಯಡ್ಕದ ತಂಡವೊಂದು ರಸ್ತೆಯಲ್ಲಿ ನಿಂತಿದ್ದ ಜನರ ಮೇಲೆ ಕಾರು ಹಾಯಿಸಲು ಯತ್ನಿಸಿದೆ. ಗಲಾಟೆ ಮಧ್ಯೆ ಬದಿಯಡ್ಕ ನಿವಾಸಿ ಅನಿಲ್ ಕುಮಾರ್ ಎಂಬಾತನ ಕುತ್ತಿಗೆಗೆ ಚಾಕು ಇರಿಯಲಾಗಿದೆ. ಚಾಕು ಹಾಕಿದಾಗಲೇ ಪೊಲೀಸ್ ಜೀಪು ಬಂದಿದ್ದು ಚಾಕುವನ್ನು ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕುತ್ತಿಗೆಯಲ್ಲಿ ಚಾಕು ಸಿಕ್ಕಿಕೊಂಡಿರುವ ಫೋಟೊ ವೈರಲ್ ಆಗಿದ್ದು ಭಯಾನಕ ದೃಶ್ಯಕ್ಕೆ ಸಾಕ್ಷಿಯಾಗಿದೆ. ಇರಿತಕ್ಕೊಳಗಾದ ಅನಿಲ್ ಕುಮಾರ್ ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.




ಅನಿಲ್ ಕುಮಾರ್ ಬದಿಯಡ್ಕದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಇರಿತದಿಂದ ಗಂಭೀರ ಗಾಯಗೊಂಡು ರಕ್ತದ ಓಕುಳಿಯಲ್ಲಿ ನೆಲಕ್ಕೆ ಬೀಳುವ ದೃಶ್ಯವೂ ಮೊಬೈಲಿನಲ್ಲಿ ಸೆರೆಯಾಗಿದೆ. ಚೂರಿ ಇರಿತ ಮಾಡುತ್ತಿದ್ದಾಗಲೇ ಅಲ್ಲಿಯೇ ಇನ್ನೊಬ್ಬ ವಿಡಿಯೋ ಮಾಡಿರುವುದು ಕಂಡುಬರುತ್ತದೆ. ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಕೃತ್ಯಕ್ಕೆ ಬಳಸಿದ ಎರಡು ವಾಹನವನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
A violent gang clash broke out late Sunday night in Seethangoli, under Kumbla Police Station limits of Kasaragod district. Two rival groups from Badiyadka and Seethangoli reportedly fought over a financial dispute, leading to a brutal street brawl involving knives. During the fight, a youth named Anil Kumar from Badiyadka was stabbed in the neck, and the knife remained lodged in the wound. The shocking visuals of the incident have gone viral on social media.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm