ಬ್ರೇಕಿಂಗ್ ನ್ಯೂಸ್
07-10-25 10:13 pm Mangalore Correspondent ಕ್ರೈಂ
ಮಂಗಳೂರು, ಅ.7 : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿಯೋರ್ವನನ್ನು ದಸ್ತಗಿರಿ ಮಾಡಿ ಪಿಕಪ್ ವಾಹನ ಹಾಗೂ ಬೈಕ್‌ನ್ನು ಸುರತ್ಕಲ್ ಪೊಲೀಸರು ವಶಪಡಿಸಿದ್ದಾರೆ.
ಸೆ.30ರಂದು ರಾತ್ರಿ ಸುಮಾರು 9 ಗಂಟೆಗೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯ ಸುಕುಮಾರ್ ಎಂಬವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ KA-19-AE-8017 ನೇ ನಂಬ್ರದ ಪಿಕಪ್ ವಾಹನವನ್ನು ರಾತ್ರಿ 10 ಗಂಟೆಗೆ ನೋಡಿದಾಗ ಪಿಕಪ್ ವಾಹನವು ಇಲ್ಲದೇ ಇದ್ದು, ರಾತ್ರಿ ಯಾರೋ ಕಳವು ಮಾಡಿಕೊಂಡು ಹೋಗಿದ್ದಾರೆಂದು ಅ.3 ರಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳ ಪತ್ತೆ ಕಾರ್ಯ ನಡೆಸುತ್ತಿದ್ದ ಪೊಲೀಸರು ಅ.7ರಂದು ಬೈಕ್‌ವೊಂದರಲ್ಲಿ ಅನುಮಾನಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಯುವಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಯನ್ನು ತಿರುವನಂತಪುರಂ ನಿವಾಸಿ ಹಂಝ ಕುಪ್ಪಿಕಂಡ @ ಹಂಸ @ ಹಂಝ ಪೊನ್ನನ್(29) ಎಂದು ಗುರುತಿಸಲಾಗಿದೆ. ಆತ ಚಲಾಯಿಸುತ್ತಿದ್ದ ಬೈಕ್‌ಗೆ ಯಾವುದೇ ದಾಖಲಾತಿಗಳಿಲ್ಲದೇ ಇದ್ದು, ಬೈಕ್‌ನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಫಾರಂ ಮಾಲ್ ಬಳಿಯಿಂದ ಕಳ್ಳತನ ಮಾಡಿರುವುದಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ವ್ಯಕ್ತಿ ಅ.30ರಂದು ಕುಳಾಯಿ ಬಳಿಯಿಂದ KA-19-AE-8017 ನೇ ನಂಬ್ರದ ಪಿಕಪ್ ವಾಹನವನ್ನು ಕಳವು ಮಾಡಿರುವುದು ತನಿಖೆಯಿಂದ ತಿಳಿದುಬಂದಿದ್ದು ಈ ಎರಡು ವಾಹನಗಳನ್ನು ಸ್ವಾಧೀನಪಡಿಸಲಾಗಿದೆ. ಸ್ವಾಧೀನಪಡಿಸಿಕೊಂಡ ವಾಹನಗಳ ಒಟ್ಟು ಮೊತ್ತ ರೂ. 3,10,000/- ಆಗಬಹುದು.
ಆರೋಪಿ ಹಂಝ ಕುಪ್ಪಿಕಂಡ ಕುಖ್ಯಾತ ಕಳ್ಳತನ ಆರೋಪಿಯಾಗಿದ್ದು, ಈತನ ವಿರುದ್ಧ ಕೇರಳ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೊಬೈಲ್ ಕಳ್ಳತನ, ವಾಹನ ಕಳ್ಳತನ ಸೇರಿದಂತೆ ಸುಮಾರು 17 ಪ್ರಕರಣ ದಾಖಲಾಗಿರುತ್ತದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸುರತ್ಕಲ್ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಮಾರ್ಗದರ್ಶನದಲ್ಲಿ ಪಿಎಸ್‌ಐ ಶಶಿಧರ ಶೆಟ್ಟಿ, ಎಎಸ್‌ಐ ರಾಜೇಶ್ ಆಳ್ವ, ಸಿಬ್ಬಂದಿಯವರಾದ ಉಮೇಶ್, ವಿನೋದ್ ಕುಮಾರ್, ನಾಗರಾಜ್, ಸುನೀಲ್ ಕುಮಾರ್ ತನಿಖೆ ನಡೆಸಿರುತ್ತಾರೆ.
Police in Suratkal have arrested an interstate vehicle thief from Kerala and recovered a stolen pickup truck and motorbike in separate theft cases.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್‌ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm