ಬ್ರೇಕಿಂಗ್ ನ್ಯೂಸ್
14-10-25 04:44 pm HK News Desk ಕ್ರೈಂ
ದಾವಣಗೆರೆ, ಅ.14 : ಅಕ್ರಮವಾಗಿ ಅಮಲು ಬರುವ ಸಿರಪ್ ಗಳನ್ನು ಮಾರಾಟ ಮಾಡುವ ದಂಧೆಯನ್ನು ಪತ್ತೆ ಮಾಡಿದ ದಾವಣಗೆರೆ ಪೊಲೀಸರು ಐವರನ್ನು ಬಂಧಿಸಿದ್ದು ಅವರಿಂದ 1.24 ಲಕ್ಷ ರೂ. ಮೌಲ್ಯದ ಸಿರಪ್ ಹಾಗೂ ಬೈಕ್ ವಶಪಡಿಸಿದ್ದಾರೆ.
ದಾವಣಗೆರೆ ಎಸ್ಪಿ ಕಚೇರಿಯ ಮಾದಕ ದ್ರವ್ಯ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ದಾವಣಗೆರೆ ನಗರದ ದೇವರಾಜ ಅರಸ್ ಬಡಾವಣೆ ಫ್ಲೈಓವರ್ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಸಿರಪ್ ಮಾರಾಟ ಮಾಡುತ್ತಿದ್ದ ಮಾಹಿತಿ ಪಡೆದು ದಾಳಿ ನಡೆಸಿದೆ. ವೈದ್ಯರ ಸಲಹೆ ಇಲ್ಲದೇ ಅಕ್ರಮವಾಗಿ ಅಮಲು ಬರುವ ಸಿರಪ್ ಬಾಟಲ್ ಗಳನ್ನು ಮಾರಾಟ ಮಾಡುತ್ತಿದ್ದರು.

ಆರೋಪಿಗಳು ಯುವ ಸಮೂಹಕ್ಕೆ ಹಾಗೂ ವ್ಯಸನಿಗಳಿಗೆ ಸಿರಪ್ ಮಾರಾಟ ಮಾಡುತ್ತಿದ್ದರು. ದಾವಣಗೆರೆ ನಗರದ ಶಿವಕುಮಾರ (38), ಮಹಬೂಬ್ ನಗರದ ಅಜಿಮುದ್ದೀನ್(37), ದೇವರಾಜ್ ಅರಸ ಬಡಾವಣೆಯ ಮಹಮದ್ ಶಾರೀಕ್(35), ಚನ್ನಗಿರಿ ತಾಲೂಕಿನ ಹೊನ್ನೆಬಾಗಿಯ ಸೈಯದ್ ಬಾಬು ಅಲಿಯಾಸ್ ಯೂನುಸ್ (38), ಚನ್ನಗಿರಿ ಟೌನ್ ನಿವಾಸಿ ಅಬ್ದುಲ್ ಗಫರ್ (48) ಬಂಧಿತ ಆರೋಪಿಗಳು.
ಆರೋಪಿಗಳಿಂದ 100 ಎಂ.ಎಲ್ ನ ಒಟ್ಟು 340 Broncof-C cough Syrup ಬಾಟಲ್‌ಗಳು, 100 ಎಂ.ಎಲ್ ನ 15 EDEX-CT cough Syrup ಬಾಟಲ್‌ಗಳು, 20 ಸಣ್ಣ ಬಾಕ್ಸ್ ಗಳಲ್ಲಿರುವ aceclofenac Paracetamol & serratiopeptidase tablets ಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಬಳಸುತ್ತಿದ್ದ ಒಂದು ಹೊಂಡಾ ಆಕ್ಟಿವಾ ಬೈಕು ಹಾಗೂ 1200 ನಗದು ವಶಕ್ಕೆ ತೆಗೆಯಲಾಗಿದೆ. ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Police in Davangere busted an illegal drug racket selling cough syrups with intoxicating effects to young people and addicts. The Narcotics Control Unit, under the SP’s office, arrested five individuals and seized cough syrup bottles worth ₹1.24 lakh along with a bike and cash.
22-01-26 05:20 pm
HK News Desk
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm