ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು ಯುವಕರನ್ನು ಬಂಧಿಸಿದ ಪೊಲೀಸರು, ಇಬ್ಬರು ಅಪ್ರಾಪ್ತ ಬಾಲಕಿಯರ ರಕ್ಷಣೆ 

15-10-25 12:00 pm       HK News Desk   ಕ್ರೈಂ

ನಿಡ್ಡೋಡಿ ಗ್ರಾಮದ ಮನೆಯೊಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಪ್ರಕರಣವನ್ನು ಭೇದಿಸಿರುವ ಮೂಡುಬಿದ್ರೆ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ. 

ಮೂಡುಬಿದ್ರೆ, ಅ.15 : ನಿಡ್ಡೋಡಿ ಗ್ರಾಮದ ಮನೆಯೊಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಪ್ರಕರಣವನ್ನು ಭೇದಿಸಿರುವ ಮೂಡುಬಿದ್ರೆ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ. 

ನಿಡ್ಡೋಡಿ ಕಲ್ಲಕುಮೇರಿನ ಮಹೇಶ್, ಕಟೀಲಿನ ಯಜ್ಞೇಶ್, ಮೂಲ್ಕಿ ನಡುಗೋಡೆಯ ದಿಲೀಪ್ ಹಾಗೂ ಬಜಪೆ ಕೊಂಡಮೂಲೆಯ ಶ್ರೀಕಾಂತ್ ಬಂಧಿತ ಆರೋಪಿಗಳು, ಇವರ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಸೋಮವಾರ ಸಂಜೆ ಆರೋಪಿ ಮಹೇಶ್ ತನ್ನ ಮನೆಗೆ ಪರಿಚಯದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಕರೆಸಿಕೊಂಡಿದ್ದ. ಬಳಿಕ ತನ್ನ ಮೂವರು ಪರಿಚಿತರನ್ನು ಅಲ್ಲಿಗೆ ಆಹ್ವಾನಿಸಿದ್ದ. ಇದರಿಂದ ಅನುಮಾನಗೊಂಡ ಸ್ಥಳೀಯರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಹಾಗೂ ಸಿಬ್ಬಂದಿ ಸ್ಥಳಕ್ಕೆ ದಾಳಿ ನಡೆಸುವ ಮೂಲಕ ಸಂಭಾವ್ಯ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ ತಪ್ಪಿಸಿದ್ದಾರೆ.

ಸಂತ್ರಸ್ತ ಬಾಲಕಿಯರು ಮತ್ತು ಆರೋಪಿಗಳನ್ನು ಠಾಣೆಗೆ ಕರೆತಂದು ವಿಚಾರಿಸಿದಾಗ, ಘಟನೆಯ ಎಲ್ಲ ವಿವರಗಳನ್ನು ಬಾಯಿಬಿಟ್ಟಿದ್ದಾರೆ. ಸ್ಥಳದಲ್ಲಿ ಲೈಂಗಿಕ ಕ್ರಿಯೆಗೆ ಬಳಸುವ ಕಾಂಡೋಮ್ ಇನ್ನಿತರ ವಸ್ತುಗಳು ಪತ್ತೆಯಾಗಿವೆ. ಆರೋಪಿಗಳನ್ನು ಮೂಡುಬಿದಿರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.

Moodbidri police foiled a gang-rape attempt at a house in Niddodi village and rescued two minor girls. Acting on a tip-off from locals, police raided the spot and arrested four youths involved in the conspiracy. The accused have been booked under the POCSO Act. The victims are safe, and further judicial investigation is underway.