ಬ್ರೇಕಿಂಗ್ ನ್ಯೂಸ್
23-10-25 07:29 pm Mangalore Correspondent ಕರಾವಳಿ
ಮಂಗಳೂರು, ಅ.23 : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಂಗಳೂರಿನಲ್ಲಿ ಇತ್ತೀಚೆಗೆ ಹೊಸತಾಗಿ ರಚಿಸಲ್ಪಟ್ಟ ವಿಶೇಷ ಪೊಲೀಸ್ ಕಾರ್ಯಪಡೆಯ (ಎಸ್ಎಎಫ್) ಸಿಬ್ಬಂದಿಗಳಿಗಾಗಿ 20 ದಿನಗಳ ತುಳು ಭಾಷಾ ಕಲಿಕೆ ಮತ್ತು ಸಂಸ್ಕೃತಿ ಪರಿಚಯ ಕಾರ್ಯಗಾರವನ್ನು ಹಮ್ಮಿಕೊಂಡಿದೆ.
ಇತ್ತೀಚೆಗೆ ಹೊಸದಾಗಿ ರಚಿಸಲ್ಪಟ್ಟ ವಿಶೇಷ ಕಾರ್ಯಪಡೆಯ ಸಿಬ್ಬಂದಿಗಳಿಗೆ ಸ್ಥಳೀಯ ಸಂಸ್ಕೃತಿ ಪರಿಚಯ ಮಾಡುವ ಹಾಗೂ ತುಳು ಭಾಷೆಯನ್ನು ಕಲಿಸುವ ನಿಟ್ಟಿನಲ್ಲಿ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಅವರು ವಿಶೇಷ ಆಸಕ್ತಿ ವಹಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷಾ ಕಲಿಕಾ ಹಾಗೂ ಸಂಸ್ಕೃತಿ ಪರಿಚಯ ಕಾರ್ಯಗಾರವನ್ನು ಹಮ್ಮಿಕೊಂಡಿದೆ.
20 ದಿನಗಳ ಈ ಕಾರ್ಯಾಗಾರದಲ್ಲಿ ತುಳು ಭಾಷಾ ಸಂವಹನ ಕಲಿಕೆಯ ಜೊತೆಗೆ ತುಳುನಾಡಿನ ಸಂಸ್ಕೃತಿ ಹಾಗೂ ಜಾನಪದ ಆಚರಣೆ ಮತ್ತು ವಿಶೇಷತೆಗಳ ಬಗ್ಗೆ ವಿಷಯ ತಜ್ಞರುಗಳು ಮಾಹಿತಿ ನೀಡಲಿದ್ದಾರೆ. ಪ್ರತಿದಿನ ಸಂಜೆ 5ರಿಂದ 6 ಗಂಟೆ ತನಕ ಕಾರ್ಯಗಾರ ನಡೆಯಲಿದೆ.
ಅಕ್ಟೋಬರ್ 24ರಂದು ಸಂಜೆ 4 ಗಂಟೆಗೆ ಪೊಲೀಸ್ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಈ ಕಾರ್ಯಗಾರವನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ಪೊಲೀಸ್ ಆಯುಕ್ತರು ಹಾಗೂ ವಿಶೇಷ ಕಾರ್ಯಪಡೆಯ ಡಿಐಜಿಪಿ ಸುಧೀರ್ ಕುಮಾರ್ ರೆಡ್ಡಿ, ವಿಶೇಷ ಕಾರ್ಯಪಡೆಯ ಪ್ರಭಾರ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು ಅವರು ಗೌರವ ಉಪಸ್ಥಿತರಿರುವರು ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.
The Karnataka Tulu Sahitya Academy has organized a 20-day Tulu language learning and cultural orientation workshop for the newly formed Special Armed Force (SAF) personnel in Mangaluru.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm