ಬ್ರೇಕಿಂಗ್ ನ್ಯೂಸ್
28-10-25 10:48 pm Mangalore Correspondent ಕ್ರೈಂ
ಬಂಟ್ವಾಳ, ಅ.28 : ಕೇರಳ ಮೂಲದ ನಿವಾಸಿ, ಅರಬ್ ರಾಷ್ಟ್ರದಲ್ಲಿ ಉದ್ಯಮಿಯಾಗಿದ್ದ ಅಶ್ರಫ್ ಎಂಬಾತನ ಹನಿ ಟ್ರ್ಯಾಪ್ ನಡೆಸಿ 45 ಲಕ್ಷ ಸುಲಿಗೆ ಮಾಡಿದ್ದ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳಿಗೆ ಕಡೆಗೂ ನಿರೀಕ್ಷಣಾ ಜಾಮೀನು ನೀಡಲಾಗಿದೆ.
ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಸಹಿತ ಆರು ಜನರ ವಿರುದ್ಧ ವಿಟ್ಲ ಠಾಣೆಯಲ್ಲಿ ಅ.ಕ್ರಂ:145/ 2025ರಂತೆ ಪ್ರಕರಣ ದಾಖಲಾಗಿತ್ತು. ಇದೀಗ ಹನಿ ಟ್ರ್ಯಾಪ್ ಪ್ರಕರಣದ ಪ್ರಮುಖ ಆರೋಪಿಗಳಾದ ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.
ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರವಾಗಿ ವಕೀಲೆ ಚೇತನಾ ಶೆಟ್ಟಿ ದಂಡೆ ವಾದ ಮಂಡಿಸಿದ್ದರು. ಹನಿ ಟ್ರ್ಯಾಪ್ ಸಂತ್ರಸ್ತ ಅಶ್ರಫ್ ಪರವಾಗಿ ಖಾಸಗಿ ವಕೀಲರಿಂದಲೂ ವಾದ ಮಂಡನೆ ಮಾಡಲಾಗಿತ್ತು. ಆದರೆ ಆರೋಪಿಗಳ ಪರ ವಾದ ಪುರಸ್ಕರಿಸಿದ ನ್ಯಾಯಪೀಠ, ಷರತ್ತಿಗೊಳಪಟ್ಟು ನಿರೀಕ್ಷಣಾ ಜಾಮೀನು ನೀಡಿದೆ.
ಆರೋಪಿಗಳ ಬಂಧನಕ್ಕಾಗಿ ಸಂತ್ರಸ್ತ ಅಶ್ರಫ್ ಮತ್ತು ಆತನ ವಕೀಲೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ್ದರು. ಮಾಣಿ ಸೆಪಿಯಾ ಮತ್ತು ಆಕೆಯ ತಂಡ ಹನಿಟ್ರ್ಯಾಪ್ ಮಾಡುವುದನ್ನೇ ಕಸುಬು ಮಾಡಿಕೊಂಡಿದ್ದು ಕರ್ನಾಟಕ- ಕೇರಳ ಗಡಿಭಾಗದ ಹಲವಾರು ಮಂದಿಯನ್ನು ಬಲೆಗೆ ಕೆಡವಿ ಹಣ ಪೀಕಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಆರೋಪಿಗಳ ಬಂಧನಕ್ಕಾಗಿ ಆಗ್ರಹಿಸಿದ್ದರು.
In the honey trap case involving extortion of ₹45 lakh from Ashraf, a Kerala native and businessman based in an Arab country, three prime accused have now been granted anticipatory bail.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm