ಬ್ರೇಕಿಂಗ್ ನ್ಯೂಸ್
29-10-25 10:43 pm Mangalore Correspondent ಕ್ರೈಂ
ಮಂಗಳೂರು, ಅ.29 : ಇಂಗ್ಲೆಂಡಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಂಗಳೂರು, ಉಡುಪಿ ಜಿಲ್ಲೆಯ ಹಲವಾರು ಮಂದಿಯಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ದಂಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಆನೇಕಲ್ ತಾಲೂಕಿನ ವೀವರ್ಸ್ ಕಾಲೊನಿ ನಿವಾಸಿ ಪ್ರಕೃತಿ ಯು. (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿ ಚರ್ಚ್ ರೋಡ್ ನಿವಾಸಿ ಆಲ್ಬನ್ ರೆಬೇರೊ(42) ಬಂಧಿತರು. ಇವರು ಪ್ರೀತಿಸಿ ಮದುವೆಯಾಗಿದ್ದು ಬೆಂಗಳೂರಿನ ಆನೆಕಲ್ ನಲ್ಲಿಯೇ ನೆಲೆಸಿದ್ದರು. ಆನ್ಲೈನ್ ಮತ್ತು ಒಬ್ಬರಿಂದ ಒಬ್ಬರಿಗೆ ಪರಿಚಯವಾಗಿ ವಿದೇಶದಲ್ಲಿ ಕೆಲಸ ಮಾಡಿಸಿಕೊಡುತ್ತಾರೆಂಬ ನಂಬಿಕೆಯಲ್ಲಿ ನೂರಾರು ಮಂದಿ ಹಣ ಕೊಟ್ಟು ಮೋಸ ಹೋಗಿದ್ದಾರೆ.
ಪ್ರತಿ ವ್ಯಕ್ತಿಯಿಂದಲೂ 3ರಿಂದ 4 ಲಕ್ಷ ರೂಪಾಯಿ ಹಣ ಪಡೆದಿದ್ದು, ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪಗಳಿವೆ. ಕಾವೂರು ಠಾಣೆಯಲ್ಲಿ 30ಕ್ಕೂ ಹೆಚ್ಚು ಮಂದಿ ದೂರು ನೀಡಿದ್ದು, ಇದರಂತೆ ಎಫ್ಐಆರ್ ದಾಖಲಾಗಿದೆ. ಹಣ ಕಳಕೊಂಡವರು ಹೆಚ್ಚಿನವರು ಕ್ರಿಶ್ಚಿಯನ್ನರೇ ಆಗಿದ್ದು, ಇಂಗ್ಲೆಂಡ್ ಸೇರಿದಂತೆ ಯುರೋಪ್ ರಾಷ್ಟ್ರಗಳಲ್ಲಿ ಉದ್ಯೋಗ ಸಿಗುತ್ತದೆ ಎಂಬ ನಂಬಿಕೆಯಲ್ಲಿ ಹಣ ಕಟ್ಟಿದ್ದರು.
ಬೆಂಗಳೂರಿನ ಆನೆಕಲ್ ನಲ್ಲಿ ಪಬ್ಲಿಕ್ ಸ್ಕೂಲ್ ಎಂಬ ಹೆಸರಲ್ಲಿ ಇವರು ಶಾಲೆ ನಡೆಸಿಕೊಂಡಿದ್ದಾರೆ. ಇವರ ಮನೆಗೆ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ 24 ಪಾಸ್ ಪೋರ್ಟ್ ಗಳು ಸಿಕ್ಕಿದ್ದು, ಅವನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, 4.30 ಲಕ್ಷ ಮೌಲ್ಯದ 43 ಗ್ರಾಮ್ ಬಂಗಾರವನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರನ್ನೂ ಬೆಂಗಳೂರಿನಲ್ಲಿ ಬಂಧಿಸಿ ಮಂಗಳೂರಿಗೆ ಕರೆತರಲಾಗಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿ ಪಡೆಯಲಾಗಿದೆ.
ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್ ಮಾರ್ಗದರ್ಶನದಲ್ಲಿ ಕಾವೂರು ಠಾಣೆ ಇನ್ಸ್ ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಐ ಮಲ್ಲಿಕಾರ್ಜುನ ಬಿರಾದಾರ, ಸಿಬಂದಿ ನಾಗರತ್ನ, ಪ್ರವೀಣ್, ರಾಘವೇಂದ್ರ, ರಿಯಾಜ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
15-04-26 07:05 pm
HK News Staffer
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 11:40 pm
HK News Desk
ಬಾಲಕನ ಜೀವ ತೆಗೆದ ಕ್ರಿಕೆಟ್ ಆಟ ; ಚೆಂಡು ಹೆಕ್ಕಲು ಹ...
15-04-26 05:29 pm
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am