ಬ್ರೇಕಿಂಗ್ ನ್ಯೂಸ್
01-11-25 07:25 pm HK News Desk ಕ್ರೈಂ
ತಿರುವನಂತಪುರಂ, ನ.1 : ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ನಾಪತ್ತೆ ಪ್ರಕರಣ ಸಂಬಂಧಿಸಿ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ದೇಗುಲದ ಮಾಜಿ ಕಾರ್ಯ ನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್ ಅವರನ್ನು ಬಂಧಿಸಿದೆ. ದೇವಾಲಯದ ವಿಗ್ರಹಗಳಿಗೆ ಚಿನ್ನ ಲೇಪನದಲ್ಲಿ ಪಿತೂರಿ ನಡೆಸಿದ್ದಾರೆಂಬ ಆರೋಪದಲ್ಲಿ ಎಸ್ಐಟಿ ಬಂಧಿಸಿದ್ದು ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ.
ತನಿಖಾ ತಂಡದ ಪ್ರಕಾರ, ಸುಧೀಶ್ ದೇವಾಲಯದ ಫಲಕಗಳನ್ನು ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಗೆ ಹಸ್ತಾಂತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ವೇಳೆ, ಮೂಲ ಚಿನ್ನ ಲೇಪಿತ ಫಲಕಗಳನ್ನು ತಾಮ್ರ ಫಲಕಗಳೆಂದು ತಪ್ಪಾಗಿ ನಿರೂಪಿಸಲಾಗಿದೆ. ಸುಧೀಶ್ ಮತ್ತು ಇತರ ಆರೋಪಿಗಳು ಸೇರಿಕೊಂಡು ಫಲಕಗಳನ್ನು ತಾಮ್ರ ಲೇಪಿತ ಎಂದು ಉಲ್ಲೇಖಿಸಿ ಶಿಫಾರಸು ಪತ್ರವನ್ನು ಬರೆದಿದ್ದಾರೆ.
1998-99ಕ್ಕೂ ಹಿಂದಿನ ಗರ್ಭಗುಡಿ ಮತ್ತು ಇತರ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡಿದ ಸಮಯದಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿಯ ಪ್ರಧಾನ ಕಚೇರಿಯಿಂದ ತನಿಖಾ ತಂಡ ದಾಖಲೆಗಳನ್ನು ಸಂಗ್ರಹಿಸಿದೆ. ಕಾಣೆಯಾದ ಚಿನ್ನ ಎಷ್ಟು ಎಂಬುದನ್ನು ನಿರ್ಧರಿಸಲು ಈ ದಾಖಲೆಗಳನ್ನು ತಾಳೆ ಹಾಕಿ ನೋಡಲಾಗುತ್ತದೆ.
ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಕಸ್ಟಡಿಯಲ್ಲಿದ್ದ ದೇವಸ್ವಂ ಮಾಜಿ ಆಡಳಿತ ಅಧಿಕಾರಿ ಮುರಾರಿ ಬಾಬು ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನವೆಂಬರ್ 13ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
The Special Investigation Team (SIT) probing the Sabarimala Ayyappa Temple gold theft case has arrested former Executive Officer (CEO) Sudheesh Kumar in connection with the disappearance of gold used for plating temple idols and structures. With his arrest, the total number of accused taken into custody has risen to three, officials confirmed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am