ಬ್ರೇಕಿಂಗ್ ನ್ಯೂಸ್
08-11-25 04:08 pm Mangaluru Staff ಕ್ರೈಂ
ಬಂಟ್ವಾಳ, ನ.7: ವಾಟ್ಸ್ಆ್ಯಪ್ ಮೂಲಕ ಮಹಿಳೆಯೊಬ್ಬರಿಗೆ ವಿಡಿಯೋ ಕರೆ ಮಾಡಿ ಬೆದರಿಕೆ ಹಾಕಿ, ಡಿಜಿಟಲ್ ಅರೆಸ್ಟ್ ಮಾಡಿ ಬಳಿಕ ಸುಮಾರು 1.16 ಕೋಟಿ ರೂ. ಲಪಟಾಯಿಸಿದ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.24ರಂದು ಬೆಳಗ್ಗೆ ಮಹಿಳೆ ಮನೆಯಲ್ಲಿದ್ದ ಸಮಯ ವಾಟ್ಸ್ಆ್ಯಪ್ ಮೂಲಕ ವಿಡಿಯೊ ಕರೆ ಬಂದಿದ್ದು, ಟೆಲಿ ಕಮ್ಯುನಿಕೇಶನ್ ಡಿಪಾರ್ಟ್ಮೆಂಟ್ ದಿಲ್ಲಿಯಿಂದ ಮಾತನಾಡುವುದಾಗಿ ಹೇಳಿದ್ದರು. ನಿಮ್ಮ ಹೆಸರಿನಲ್ಲಿರುವ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಬಳಸಿ ಮೊಬೈಲ್ ನಂಬರ್ ಖರೀದಿಸಿ ದಿಲ್ಲಿಯಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಜಾಹೀರಾತು ಹಾಗೂ ಕಿರುಕುಳದ ಸಂದೇಶಗಳನ್ನು ಕಳುಹಿಸಿದ್ದೀರಿ ಎಂದು ತಿಳಿಸಿದ್ದಾರೆ.
ಅಲ್ಲದೆ ನಾನಾ ಮೊಬೈಲ್ ನಂಬರ್‌ಗಳಿಂದ ಆರೋಪಿಗಳು ವಿಡಿಯೋ ಕರೆ ಮಾಡಿ, ನಿಮ್ಮ ಮೇಲೆ ಕಾಂಬೋಡಿಯಾ ಹಾಗೂ ಮಂಗೋಲಿಯಾ ದೇಶಗಳಿಗೆ ಮಕ್ಕಳನ್ನು ಕಳ್ಳಸಾಗಣಿಕೆ ಮಾಡಿ ಹಣ ವರ್ಗಾವಣೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿದೆ ಎಂಬುದಾಗಿ ಹೆದರಿಸಿದ್ದು ನಿಮ್ಮನ್ನು ತನಿಖೆಯ ಸಲುವಾಗಿ ಡಿಜಿಟಲ್ ಅರೆಸ್ಟ್ ಮಾಡಿದ್ದಾಗಿ ತಿಳಿಸಿದ್ದರು. ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿಯನ್ನೂ ಕೇಳಿದ್ದು ನೀವು ಹಣ ಕೊಟ್ಟರೆ ಕೇಸಿನಿಂದ ಬಚಾವ್ ಮಾಡುವುದಾಗಿ ಹೇಳಿ ನಂಬಿಸಿದ್ದಾರೆ.
ಇದರಿಂದ ಆತಂಕಕ್ಕೆ ಒಳಗಾದ ಮಹಿಳೆ ತಾನು ಜಾಗ ಮಾರಿ ಬ್ಯಾಂಕ್‌ನಲ್ಲಿ ಎಫ್‌ಡಿ ಇಟ್ಟಿದ್ದ ಹಣವನ್ನು ಹಿಂಪಡೆದು ಸೆ.29ರಿಂದ ಅ.10ರ ವರೆಗೆ ಅಪರಿಚಿತ ವ್ಯಕ್ತಿಗಳು ಸೂಚಿಸಿದ ಹಲವು ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1.16 ಕೋಟಿ ರೂ. ಹಣವನ್ನು ವರ್ಗಾಯಿಸಿದ್ದಾರೆ. ಬಳಿಕ ತಾನು ಮೋಸ ಹೋಗಿರುವುದು ಅರಿವಿಗೆ ಬಂದಿದ್ದು, ಈ ಬಗ್ಗೆ ಸೆನ್ ಠಾಣೆಗೆ ದೂರು ನೀಡಿದ್ದಾರೆ.
A woman from Bantwal has reportedly fallen victim to a massive online scam in which fraudsters posing as officials threatened her with a fake “digital arrest,” extorting a total of ₹1.16 crore. The case has been registered at the Cyber Economic and Narcotic (CEN) Police Station in Mangaluru.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm