ಬ್ರೇಕಿಂಗ್ ನ್ಯೂಸ್
12-11-25 12:32 pm Mangalore Correspondent ಕ್ರೈಂ
ಮಂಗಳೂರು, ನ.12 : ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿ ದುಪಟ್ಟು ಲಾಭ ಗಳಿಸಬಹುದೆಂದು ಆಮಿಷ ತೋರಿಸಿ ಎರಡು ಕೋಟಿ ರೂ. ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಿರ್ಯಾದಿದಾರರಿಗೆ ಅಪರಿಚಿತ ವ್ಯಕ್ತಿ 2022ರ ಮೇ 1ರಂದು ವಾಟ್ಸ್ಆ್ಯಪ್ ಸಂದೇಶ ಕಳುಹಿಸಿ ತಾನು ಡೆಲ್ಫಿನ್ ರಾಯಲ್ ಕಂಪನಿಯ ಅಂಕಿತ್ ಎಂದು ಪರಿಚಯಿಸಿದ್ದಾನೆ. ಈ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಹಣ ಹಾಗೂ ಲಾಭಾಂಶ ನೀಡುವುದಾಗಿ ತಿಳಿಸಿದ್ದಾನೆ. ಇಷ್ಟು ಮಾತ್ರವಲ್ಲದೆ ಸುಮಿತ್ ಜೈಸ್ವಾಲ್, ಕುಶಾಗರ್ ಜೈನ್, ಅಖಿಲ್ ಎಂಬವರು ಪಾಲುದಾರರಾಗಿದ್ದಾರೆ. ಈ ಹಣವನ್ನು ವಿದೇಶಗಳಲ್ಲಿ ಹೂಡಿಕೆ ಮಾಡಿ ದುಪಟ್ಟು ಹಣ ಗಳಿಸಬಹುದೆಂದು ಅಮಿಷ ಒಡ್ಡಿದ್ದಾರೆ.
ಲಾಭಾಂಶ ವಾಪಸ್: ಪಿರ್ಯಾದಿದಾರರು
ಸದ್ರಿ ವಿಚಾರವನ್ನು ಸತ್ಯವೆಂದು ನಂಬಿದ ವ್ಯಕ್ತಿ, ಹಣ ಹೂಡಿಕೆ ಬಗ್ಗೆ ಅಂಕಿತ್ನಲ್ಲಿ ವಿಚಾರಿಸಿದಾಗ ಆತ ಹಣ ಹೂಡಿಕೆ ಮಾಡಿದರೆ ದುಪಟ್ಟು ಲಾಭ ಗಳಿಸಬಹುದು ಎಂದು ನಂಬಿಸಿದ್ದಾನೆ. ಅದರಂತೆ ಫಿರ್ಯಾದಿದಾರರು 2012ರ ಮೇ 1ರಂದು 3,500 ರೂ.ವನ್ನು ಅಂಕಿತ್ ನೀಡಿದ ಅಪರಿಚಿತ ವ್ಯಕ್ತಿಯ ಸ್ಕ್ಯಾನರ್ ಮೂಲಕ ಫೆಡರಲ್ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿದ್ದಾರೆ. ಅದೇ ದಿನ ಪಿರ್ಯಾದಿದಾರರಿಗೆ 1,000 ರೂ. ಲಾಭಾಂಶದ ಹಣವನ್ನು ತನ್ನ ಬಾಬ್ತು ಫೆಡರಲ್ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಇದರಿಂದ ಪಿರ್ಯಾದಿದಾರರು ಪ್ರೇರೇಪಿತನಾಗಿ ಇನ್ನೂ ಹೆಚ್ಚಿನ ಹಣ ತೊಡಗಿಸಲು ಮುಂದಾಗಿದ್ದು ಹಂತ ಹಂತ ವಾಗಿ ಫೆಡರಲ್ ಬ್ಯಾಂಕ್, ಕೆನರಾ ಬ್ಯಾಂಕ್, ಎಚ್ ಡಿಎಫ್ ಸಿ ಬ್ಯಾಂಕ್ ಹಾಗೂ ತನ್ನ ಸಂಬಂಧಿಕರ ಖಾತೆಯಿಂದ 2022ನೇ ಮೇ ತಿಂಗಳಿಂದ 2025ರ ಆ.29ರ ವರೆಗೆ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ 2 ಕೋಟಿ ರೂ.ಗಿಂತಲೂ ಹೆಚ್ಚಿನ ಹಣ ವರ್ಗಾವಣೆ ಮಾಡಿದ್ದಾರೆ.
ಹಣ ವರ್ಗಾವಣೆಯಾದ ಬಳಿಕ ಕಳೆದ ಮೂರು ತಿಂಗಳಿನಿಂದ ಆರೋಪಿಗಳು ವಾಟ್ಸಾಪ್ ಮೆಸೇಜ್ ಮತ್ತು ಕರೆ ಮಾಡಿದರೂ ಪ್ರತಿಕ್ರಿಯೆ ನೀಡುತ್ತಿಲ್ಲ. ಇದರಿಂದ ಫಿರ್ಯಾದಿದಾರರು ಅನುಮಾನಗೊಂಡು ಅಂಕಿತ್ ನಲ್ಲಿ ಮತ್ತೊಮ್ಮೆ ಕರೆ ಮಾಡಿ ಹಣ ವಾಪಸ್ ನೀಡುವಂತೆ ಕೇಳಿಕೊಂಡಾಗ ಕುಶಾಗರ್ ಜೈನ್, ಅಖಿಲ್ ಮತ್ತು ಸುಮಿತ್ ಜೈಸ್ವಾಲ್ ಎಂಬವರು ಮೋಸ ಮಾಡಿರುವ ಬಗ್ಗೆ ಹೇಳಿದ್ದಾನೆ.
ಕೊಲೆ ಬೆದರಿಕೆ ಹಾಕಿದ ಆರೋಪಿಗಳು
ಅಂಕಿತ್ ಸದ್ರಿ ಹೂಡಿಕೆ ಪಾಲುದಾರಿಕೆಯಿಂದ ಹೊರ ಬಂದಿರುವುದಾಗಿ ತಿಳಿಸಿದ್ದಾನೆ. ಫಿರ್ಯಾದಿದಾರರಿಗೆ ವಾಟ್ಸ್ ಆ್ಯಪ್ ಮೂಲಕ ಕರೆ ಮಾಡಿದ ಆರೋಪಿಗಳು ಹೂಡಿಕೆ ಮಾಡಿದ ಯಾವುದೇ ಹಣ ಹಿಂದಿರುಗಿಸುವುದಿಲ್ಲ. ಈ ಬಗ್ಗೆ ಎಲ್ಲಿಯಾದರೂ ದೂರು ನೀಡಿದ್ದಲ್ಲಿ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A shocking case of online investment fraud has been reported at the Mangaluru South (Sen) Police Station, where a local resident lost over ₹2 crore after being lured by scammers promising double returns through a foreign investment company.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm