ಬ್ರೇಕಿಂಗ್ ನ್ಯೂಸ್
17-11-25 12:54 pm Mangalore Correspondent ಕ್ರೈಂ
ಮಂಗಳೂರು, ನ.16 : ಪಾರ್ಸೆಲ್ ಇದೆ, ಅದರ ಕಸ್ಟಮ್ಸ್ ಸುಂಕ ಕಟ್ಟಬೇಕೆಂದು ಹೇಳಿ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ಸೈಬರ್ ಖದೀಮರ ಸೋಗಿನಲ್ಲಿ 7.27 ಲಕ್ಷ ಹಣ ಪೀಕಿಸಿದ ಪ್ರಕರಣದಲ್ಲಿ ತ್ರಿಪುರಾ ಮತ್ತು ಮಣಿಪುರ ಮೂಲದ ಇಬ್ಬರನ್ನು ಮಂಗಳೂರು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಪಾರ್ಸೆಲ್ ಇದೆಯೆಂದು ಹೇಳಿ ಕಸ್ಟಮ್ಸ್ ಸುಂಕದ ಹೆಸರಿನಲ್ಲಿ ಹಂತ ಹಂತವಾಗಿ ಒಟ್ಟು 7,27,000/- ಹಣವನ್ನು ಪಡೆದು ವಂಚನೆ ಮಾಡಿದ್ದಾರೆ. ತ್ರಿಪುರಾ ರಾಜ್ಯದ ಧಲೈ ನಿವಾಸಿ ಡಾಮೆಂಜಯ್ ರಿಯಾಂಗ್ (27) ಮತ್ತು ಮಣಿಪುರದ ಕಾಂಗ್ ಪೋಕ್ಪಿ ಜಿಲ್ಲೆಯ ಮ್ಯಾಂಗ್ಟೆ ರೀಲ್ ಕೋಮ್ (33) ಬಂಧಿತರು.
ಪ್ರಕರಣದಲ್ಲಿ ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದು ಪರಿಶೀಲಿಸಿದಾಗ ಆರೋಪಿಗಳ ಮಾಹಿತಿ ಸಿಕ್ಕಿತ್ತು. ಆರೋಪಿ ಡಾಮೆಂಜಯ್ ನ.13ರಂದು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದಲ್ಲಿ ಬ್ಯಾಂಕ್ ಖಾತೆಗಳನ್ನು ಪಡೆದು ಸೈಬರ್ ವಂಚಕರಿಗೆ ನೀಡಿದ ಸುಳಿವಿನ ಆಧಾರದಲ್ಲಿ ಮ್ಯಾಂಗ್ಟೆ ಎಂಬಾತನನ್ನು ನ.15 ರಂದು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ.
ತನಿಖೆಯ ವೇಳೆ ಆರೋಪಿತ ಮಾಂಗ್ಟೆ ಬೇರೆ ಬೇರೆ ರಾಜ್ಯಗಳಲ್ಲಿ 300ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಮಾಡಿರುವುದು ಹಾಗೂ 250ಕ್ಕು ಹೆಚ್ಚು ಸಿಮ್ ಕಾರ್ಡ್ ಗಳನ್ನು ಹೊಂದಿದ್ದು ಅದನ್ನು ಸೈಬರ್ ವಂಚನೆಗೆ ಬಳಕೆ ಮಾಡಿರುವುದು ಕಂಡುಬಂದಿದೆ. ಸದ್ರಿ ಆರೋಪಿತನಿಂದ 08-ಮೊಬೈಲ್ ಫೋನ್, 20- ವಿವಿಧ ಬ್ಯಾಂಕ್ ಗಳ ಡೆಬಿಟ್ ಕಾರ್ಡ್ ಗಳು,18- ವಿವಿಧ ಬ್ಯಾಂಕ್ ಗಳ ಪಾಸ್ ಬುಕ್ ಗಳು,ಬ11- ವಿವಿಧ ಬ್ಯಾಂಕ್ ಗಳ ಚೆಕ್ ಬುಕ್ ಹಾಗೂ 7- ಸಿಮ್ ಕಾರ್ಡ್ ಗಳನ್ನು ಸ್ವಾಧೀನಪಡಿಸಲಾಗಿದೆ. ಪ್ರಕರಣದ ಆರೋಪಿತರ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರದ ಸೆನ್ ಕ್ರೈಂ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿದ್ದಾರೆ.
Mangaluru CEN Police have arrested two individuals from Tripura and Manipur for duping a man of ₹7.27 lakh by claiming he needed to pay customs charges for a fake parcel. Investigation revealed the accused were linked to over 300 illegal bank accounts and 250 SIM cards used for cyber fraud. Multiple mobile phones, debit cards, passbooks, and SIM cards were seized during the operation.
16-11-25 09:15 pm
HK News Desk
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 10:48 pm
Mangalore Correspondent
Speaker U.T. Khader: ಅಶಕ್ತರಿಗೆ ಶಕ್ತಿ ನೀಡುವುದೇ...
16-11-25 08:43 pm
ಅಡಿಕೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕ...
16-11-25 04:40 pm
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
17-11-25 12:54 pm
Mangalore Correspondent
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm