ಬ್ರೇಕಿಂಗ್ ನ್ಯೂಸ್
19-11-25 06:07 pm Bangalore Correspondent ಕ್ರೈಂ
ಬೆಂಗಳೂರು, ನ 19 : ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಮಧ್ಯಾಹ್ನ ಎಟಿಎಂಗೆ ಹಣ ಸಾಗಿಸುವ ವಾಹನವನ್ನು ರಸ್ತೆ ಮಧ್ಯೆದಲ್ಲೇ ನಿಲ್ಲಿಸಿ ಕೋಟ್ಯಾಂತರ ರೂಪಾಯಿ ದರೋಡೆ ಮಾಡಿದ್ದಾರೆ.
ಬೆಂಗಳೂರಿನ ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ ಈ ಘಟನೆ ನಡೆದಿದೆ. ವಾಹನದಲ್ಲಿದ್ದ 7 ಕೋಟಿ 11 ಲಕ್ಷ ರೂಪಾಯಿ ಹಣವನ್ನು ಎತ್ತಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.


ಹಲವು ದಿನಗಳಿಂದ ಸಂಚು ರೂಪಿಸಿದ್ದ ಗ್ಯಾಂಗ್ ಬುಧವಾರ ಬೆಳಿಗ್ಗೆ ಎಟಿಎಂಗೆ ಹಣ ಹಾಕಲು ಹೊರಟಿದ್ದ ವ್ಯಾನ್ ಅನ್ನು ಹಿಂಬಾಲಿಸಿದೆ. ವಾಹನವನ್ನು ಅಡ್ಡಗಟ್ಟಿ ಸಿಬ್ಬಂದಿಗೆ ಬೆದರಿಸಿ ವಾಹನದ ಹಿಂಬದಿಯ ಡೋರ್ ತೆರೆದು ಎಟಿಎಂಗಳಿಗೆ ತುಂಬಲು ಇಟ್ಟಿದ್ದ ಕೋಟ್ಯಾಂತರ ಹಣವನ್ನು ತುಂಬಿಕೊಂಡು ಇನೋವಾ ಕಾರಿನಲ್ಲಿ ತಪ್ಪಿಸಿಕೊಂಡಿದ್ದಾರೆ.
7 ಜನರ ಗ್ಯಾಂಗ್‌ನಿಂದ ದಾಳಿ:
ಎಟಿಎಂ ಹಣ ಸಾಗಿಸುವ ವ್ಯಾನ್‌ನಲ್ಲಿ ಓರ್ವ ಡ್ರೈವರ್, ಇಬ್ಬರು ಗನ್ ಮ್ಯಾನ್ ಹಾಗೂ ಮತ್ತೊಬ್ಬ ಹಣ ಹಾಕುವ ಸಿಬ್ಬಂದಿ ಸೇರಿ 4 ಮಂದಿ ಇದ್ದರು. ಕೆಎ 03 ಎನ್‌ಸಿ 8052 ನಂಬರ್‌ನ ಇನ್ನೋವಾ ಕಾರಿನಲ್ಲಿ ಬಂದಿದ್ದ ಗ್ಯಾಂಗ್‌ನಲ್ಲಿ 7 - 8 ಜನರ ಇದ್ದರು. ಕಾರಿನ ಹಿಂಬರಿ ಗವರ್ನಮೆಂಟ್ ಆಫ್ ಇಂಡಿಯಾ ಎಂಬ ಬೋರ್ಡ್ ಹಾಕಿಕೊಂಡಿದ್ದರು. ಜಯನಗರದ ಅಶೋಕ ಪಿಲ್ಲರ್ ಬಳಿ ನಾವು ಆರ್‌ಬಿಐನವರು ಎಂದು ಹೇಳಿ ವಾಹನ ನಿಲ್ಲಿಸಿದ್ದಾರೆ. ಗನ್‌ಮ್ಯಾನ್ ಸೇರಿದಂತೆ ಎಲ್ಲರನ್ನೂ ವ್ಯಾನ್‌ನಿಂದ ಇಳಿಸಿ ವಾಹನ ಸಮೇತ ಚಾಲಕನನ್ನು ಡೇರಿ ಸರ್ಕಲ್‌ಗೆ ಕರೆದೊಯ್ದಿದು ಕೃತ್ಯವೆಸಗಿದ್ದಾರೆ.
ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸ್ ತಂಡವು ಶ್ವಾನದಳ ಆಗಮಿಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ದರೋಡೆಕೋರರು ಬಳಸಿದ ಇನೋವಾ ಕಾರಿನ ನಂಬರ್ ಪ್ಲೇಟ್ ನಕಲಿ ಎಂದು ಪೊಲೀಸ್ ಆರಂಭಿಕ ತನಿಖೆಯಲ್ಲಿ ತಿಳಿದುಬಂದಿದೆ. ವಾಸ್ತವವಾಗಿ ಕೆಎ 03 ಎನ್‌ಸಿ 8052 ಸಂಖ್ಯೆಯು ಸ್ವಿಪ್ಟ್ ಕಾರಿನದ್ದಾಗಿದೆ. ಕಳ್ಳತನಕ್ಕೆಂದು ಆ ನಂಬರ್ ಪ್ಲೇಟ್ ಬಳಸಿದ್ದಾರೆ.
ಸಿಬ್ಬಂದಿಗಳು ಹಲವು ವರ್ಷಗಳಿಂದ ಕೆಲಸ:
ವಾಹನದಲ್ಲಿದ್ದ ಎಲ್ಲಾ ಸಿಬ್ಬಂದಿಗಳು ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಅಶೋಕ ಪಿಲ್ಲರ್ ಬಳಿ ವಾಹನವನ್ನು ಅಡ್ಡಗಟ್ಟಿ ಎಲ್ಲಾ ಸಿಬ್ಬಂದಿಯನ್ನು ಇಳಿಸಿ ಚಾಲಕನೊಬ್ಬನನ್ನು ವಾಹನದಲ್ಲಿ ಕರೆದುಕೊಂಡು ಹೋಗಿ ಡೈರಿ ವೃತ್ತದ ಫ್ಲೈಓವರ್ ಮೇಲೆ ನಿಲ್ಲಿಸಿಕೊಂಡು ಹಣವನ್ನು ಬೇರೆ ವಾಹನಕ್ಕೆ ವರ್ಗಾಹಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಸಿಎಂಎಸ್ ಏಜೆನ್ಸಿ ಅಧಿಕಾರಿ ತಿಳಿಸಿದ್ದಾರೆ.
Bengaluru witnessed a dramatic daylight heist on Wednesday when a gang posing as RBI officials intercepted an ATM cash-loading van near Dairy Circle flyover and escaped with ₹7.11 crore. The robbers, travelling in an Innova with a fake “Government of India” board, forced the vehicle to stop at Jayanagar’s Ashoka Pillar, claiming to be from the RBI.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am