ಬ್ರೇಕಿಂಗ್ ನ್ಯೂಸ್
22-11-25 07:55 pm Bangalore Correspondent ಕ್ರೈಂ
ಬೆಂಗಳೂರು, ನ.22: ಎಟಿಎಂ ಯಂತ್ರಗಳಿಗೆ ತುಂಬಿಸಲು ಒಯ್ಯುತ್ತಿದ್ದ 7.11 ಕೋಟಿ ರೂ. ನಗದು ಹಣವನ್ನು ದರೋಡೆಗೈದ ಪ್ರಕರಣವನ್ನು ಕೊನೆಗೂ ಬೆಂಗಳೂರು ಪೊಲೀಸರು ಭೇದಿಸಿದ್ದು ಮೂವರು ಆರೋಪಿಗಳನ್ನು ಬಂಧಿಸಿ 5.76 ಕೋಟಿ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಎಟಿಎಂ ಹಣ ಒಯ್ಯುವ ಏಜನ್ಸಿ ಸಿಎಂಎಸ್ ಸೆಕ್ಯುರಿಟೀಸ್ ಕಂಪನಿಯ ವಾಹನದ ಮೇಲ್ವಿಚಾರಕ ರವಿ, ಮಾಜಿ ಉದ್ಯೋಗಿ ಕ್ಸೇವಿಯರ್ ಹಾಗೂ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಬಂಧಿತರು. ಅವರ ಬಳಿಯಿಂದ 5.76 ಕೋಟಿ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. ಕೃತ್ಯದಲ್ಲಿ 7-8 ಜನ ಶಾಮೀಲಾಗಿರುವ ಮಾಹಿತಿಯಿದ್ದು ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.



ಮೂರು ತಿಂಗಳಿಂದ ದರೋಡೆಗೆ ಸಂಚು
ದರೋಡೆ ಕೃತ್ಯಕ್ಕಾಗಿ ಮೂರು ತಿಂಗಳಿಂದ ಸಂಚು ರೂಪಿಸಿದ್ದು, 15 ದಿನಗಳ ಹಿಂದೆಯೇ ದರೋಡೆಯ ಸ್ಥಳವನ್ನು ನಿಗದಿ ಮಾಡಿದ್ದರು. ನವೆಂಬರ್ 19ರಂದು 12:48ರ ಸುಮಾರಿಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿದ ಇನೋವಾ ಕಾರಿನಲ್ಲಿ ಅಶೋಕ ಪಿಲ್ಲರ್ - ಜಯನಗರ - ಡೇರಿ ಸರ್ಕಲ್ ಮಾರ್ಗದಲ್ಲಿ ಬಂದು, ಸಿಎಂಎಸ್ ಕಸ್ಟೋಡಿಯನ್ ವಾಹನವನ್ನು ಅಡ್ಡಗಟ್ಟಿದ್ದರು. ಆರ್‌ಬಿಐ ಅಧಿಕಾರಿಗಳೆಂದು ಹೇಳಿ ಭದ್ರತಾ ಸಿಬ್ಬಂದಿ ಹಾಗೂ ಕಸ್ಟೋಡಿಯನ್ ಸಿಬ್ಬಂದಿಯನ್ನು ಕೆಳಗಿಳಿಸಿದ್ದರು. ಮತ್ತೋರ್ವ ಆರೋಪಿ ಕಸ್ಟೋಡಿಯನ್ ವಾಹನದೊಳಗೆ ಕುಳಿತು ಚಾಲಕನಿಗೆ ಡೇರಿ ಸರ್ಕಲ್‌ನತ್ತ ಚಲಾಯಿಸುವಂತೆ ಸೂಚಿಸಿದ್ದ.
ಭದ್ರತಾ ಸಿಬ್ಬಂದಿ ಹಾಗೂ ಕಸ್ಟೋಡಿಯನ್ ಸಿಬ್ಬಂದಿಯನ್ನು ಕಾರಿನಲ್ಲಿ ಕರೆದೊಯ್ದಿದ್ದ ಆರೋಪಿಗಳು ಮೊಬೈಲ್ ಕಿತ್ತುಕೊಂಡು, ಅವರನ್ನು ನಿಮ್ಹಾನ್ಸ್ ಬಳಿ ಕೆಳಗಿಳಿಸಿ ಕಾಲ್ಕಿತ್ತಿದ್ದರು. ಕೃತ್ಯ ನಡೆದ ನಂತರ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗುವಷ್ಟರಲ್ಲಿ ಒಂದೂವರೆ ತಾಸು ಕಳೆದಿತ್ತು. ತನಿಖೆ ಕೈಗೊಂಡಾಗ ಆರೋಪಿಗಳು ಸಿಸಿಟಿವಿಗಳು ಇರದ ಸ್ಥಳವನ್ನು ಬಳಸಿರುವುದು, ಮೊಬೈಲ್ ಫೋನ್ ಬಳಕೆ ಮಾಡದಿರುವುದು ಹಾಗೂ ದರೋಡೆಯಾದ ಹಣದ ನೋಟುಗಳು ಸರಣಿ ನಂಬರ್‌ನಲ್ಲಿ ಇರದಿರುವುದು ಕಂಡುಬಂದಿತ್ತು. ಈ ವಿಚಾತ ತನಿಖೆಗೆ ಸಾಕಷ್ಟು ಸವಾಲು ತಂದೊಡ್ಡಿತ್ತು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ತಿಳಿಸಿದರು.
ದರೋಡೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ, ಬೆಂಗಳೂರಿನ ಗಡಿಭಾಗದ ಜಿಲ್ಲೆಗಳ ಎಸ್‌ಪಿಗಳು, ನೆರೆ ರಾಜ್ಯಗಳ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಬೆಂಗಳೂರಿನ ಇಬ್ಬರು ಎಸಿಪಿ, ಇಬ್ಬರು ಡಿಸಿಪಿ ನೇತೃತ್ವದ ಸುಮಾರು 200 ಜನ ಅಧಿಕಾರಿ ಹಾಗೂ ಸಿಬ್ಬಂದಿಯನ್ನೊಳಗೊಂಡ 11 ತಂಡಗಳು ಕೇರಳ, ತಮಿಳುನಾಡು, ತೆಲಂಗಾಣಗಳಿಗೆ ತೆರಳಿ ತನಿಖೆ ಕೈಗೊಂಡಿದ್ದರು. ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಆರೋಪಿಗಳು ವಿವಿಧ ಕಡೆ ಬಚ್ಚಿಟ್ಟಿದ್ದ 5.76 ಕೋಟಿ ರೂ. ನಗದು ಹಣವನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನುಳಿದ ಹಣಕ್ಕಾಗಿ ಹುಡುಕಾಟ ನಡೆಸಲಾಗಿದೆ. ಮೂರು ದಿನಗಳಿಂದ ಅವಿರತ ಕಾರ್ಯಾಚರಣೆ ನಡೆಸಿದ ತನಿಖಾ ತಂಡಕ್ಕೆ 5 ಲಕ್ಷ ರೂ. ನಗದು ಬಹುಮಾನ ಘೋಷಿಸುತ್ತಿದ್ದೇನೆ ಎಂದು ಆಯುಕ್ತರು ತಿಳಿಸಿದರು.
ಸೆಕ್ಯುರಿಟಿ ಏಜೆನ್ಸಿಯಿಂದ ಲೋಪ
ಹಣ ಸಾಗಿಸುವ ವಾಹನದಲ್ಲಿ ಚಾಲಕನನ್ನು ಹೊರತುಪಡಿಸಿ ಇಬ್ಬರು ಭದ್ರತಾ ಸಿಬ್ಬಂದಿ ಹಾಗೂ ಇಬ್ಬರು ಕಸ್ಟೋಡಿಯನ್ ಸಿಬ್ಬಂದಿ ಇರಬೇಕು. ಕಸ್ಟೋಡಿಯನ್ ವಾಹನ ಒಂದೇ ಸಮಯ, ಒಂದೇ ಮಾರ್ಗವನ್ನು ಪದೇ ಪದೇ ಬಳಸಬಾರದು. ಸಿಬ್ಬಂದಿ ಹಣ ನಿರ್ವಹಣೆಯ ಕುರಿತು ತರಬೇತಿ ಪಡೆದಿರಬೇಕು, ಸಿಬ್ಬಂದಿಯ ಹಿನ್ನೆಲೆಯ ಕುರಿತು ಪರಿಶೀಲನೆ ಆಗಿರಬೇಕು. ಕಸ್ಟೋಡಿಯನ್ ಕಂಪನಿಯ ಉದ್ಯೋಗಿಯನ್ನು ಕೆಲಸದಿಂದ ವಜಾಗೊಳಿಸಿದರೆ ಪೊಲೀಸರಿಗೆ ಮಾಹಿತಿ ನೀಡಿರಬೇಕು ಎಂದು ಆರ್‌ಬಿಐ ನಿಯಮಾವಳಿಗಳಿವೆ. ಆದರೆ ಇಲ್ಲಿ ಸಿಎಂಎಸ್ ಸೆಕ್ಯುರಿಟೀಸ್ ಕಂಪನಿಯವರಿಂದ ಲೋಪಗಳಾಗಿರುವುದು ಕಂಡುಬಂದಿದೆ. ಈ ಬಗ್ಗೆ ಆರ್‌ಬಿಐಗೆ ಪತ್ರ ಬರೆಯಲಾಗುವುದು ಎಂದು ಆಯುಕ್ತ ಸಿಂಗ್ ಹೇಳಿದರು.
Bengaluru Police have successfully solved the sensational ₹7.11 crore ATM cash heist, arresting three key accused including CMS Securities vehicle supervisor Ravi, former employee Xavier, and Govindapura police constable Annappa Naik. The police recovered ₹5.76 crore in cash from various hideouts.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm