ಬ್ರೇಕಿಂಗ್ ನ್ಯೂಸ್
24-11-25 08:37 pm HK News Desk ಕ್ರೈಂ
ಕಾರವಾರ, ನ 24 : ಆನ್‌ಲೈನ್‌ನಲ್ಲಿ ಅತಿ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿ, ಫಾರೆಕ್ಸ್ ಟ್ರೇಡಿಂಗ್ ಆ್ಯಪ್ ಮೂಲಕ ಹೊನ್ನಾವರದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 46.50 ಲಕ್ಷ ರೂಪಾಯಿ ವಂಚಿಸಿದ ಅಂತಾರಾಜ್ಯ ವಂಚಕರ ಜಾಲವನ್ನು ಉತ್ತರ ಕನ್ನಡದ ಸಿಇಎನ್ (CEN) ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬ್ಯಾಂಕ್ ಉದ್ಯೋಗಿಗಳು ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಹೊನ್ನಾವರದ ಪ್ರಭಾತನಗರದ ನಿವಾಸಿ ಗಿರೀಶ್ (35) ಎಂಬವರು ಫೇಸ್‌ಬುಕ್‌ನಲ್ಲಿ ಟ್ರೇಡಿಂಗ್ ಜಾಹೀರಾತು ನೋಡಿ, 'MarketAxess' ಎಂಬ ಆ್ಯಪ್ ಡೌನ್‌ಲೋಡ್ ಮಾಡಿಕೊಂಡಿದ್ದರು. ಬಳಿಕ ಆರೋಪಿಗಳು ವಾಟ್ಸ್ಆ್ಯಪ್ ಮೂಲಕ ಸಂಪರ್ಕಿಸಿ, ಮೇ 28, 2025 ರಿಂದ ಜುಲೈ 23, 2025 ರ ಅವಧಿಯಲ್ಲಿ ಹಂತ, ಹಂತವಾಗಿ ಒಟ್ಟು ರೂ. 46,50,000 ಹಣವನ್ನು ಹೂಡಿಕೆ ಮಾಡಿಸಿಕೊಂಡಿದ್ದರು. ಹಣ 75,00,000 ರೂ.ಗಳಾದರೂ ವಿತ್‌ಡ್ರಾ ಮಾಡಲು ಬಾರದೇ ಇದ್ದಾಗ ಮೋಸ ಹೋಗಿರುವುದು ಗೊತ್ತಾಗಿದೆ ಎಂದು ದೂರುದಾರರು ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಬಂಧಿತರಲ್ಲಿ ಮೂವರು ಬ್ಯಾಂಕ್ ರಿಲೇಶನ್‌ಶಿಪ್ ಮ್ಯಾನೇಜರ್‌ಗಳು:
ಅದರಂತೆ, ಪ್ರಕರಣದ ತನಿಖೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ, ಸಿಇಎನ್ ಡಿವೈಎಸ್‌ಪಿ ಬಿ. ಅಶ್ವಿನಿ ಅವರ ನೇತೃತ್ವದ ವಿಶೇಷ ತಂಡ ರಚಿಸಲಾಗಿತ್ತು. ಕಾರ್ಯಾಚರಣೆ ಕೈಗೊಂಡ ಪೊಲೀಸರು, ಎಂ.ಡಿ ಆಲಮ್ (ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ), ಹೈದರಾಬಾದ್‌ನಲ್ಲಿ ಬಂಧಿಸಲಾದ ಬಿಲ್ಲೆ ಪ್ರವೀಣಕುಮಾರ್ (35) ಮತ್ತು ವಿನಯ್ ಕುಮಾರ್ (30) ಎಂಬವರನ್ನು ಬಂಧಿಸಿದ್ದಾರೆ. ಇವರು ಆರ್ಬಿಎಲ್ (RBL) ಬ್ಯಾಂಕ್‌ನಲ್ಲಿ ರಿಲೇಶನ್‌ಶಿಪ್ ಮ್ಯಾನೇಜರ್‌ಗಳಾಗಿದ್ದು, ವಂಚನೆಗೆ ಅಕ್ರಮವಾಗಿ ಖಾತೆ ತೆರೆದು ಸಹಕರಿಸಿದ್ದರು. ಇನ್ನೋರ್ವ ಆರೋಪಿ ಶಮೀಮ್ ಅಖ್ತರ್ (55) ಎಂಬಾತ ಬಿಹಾರ ಮೂಲದವನಾಗಿದ್ದು, ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಈತ ದೂರುದಾರರನ್ನು ವಂಚಕರ ಬಲೆಗೆ ಬೀಳಿಸಲು ಸಹಕರಿಸಿದ್ದ. ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಜಾಹೀರಾತು ನಂಬಿ ಮೋಸ ಹೋಗದಿರಿ:
ಈ ಪ್ರಕರಣದ ಮೂಲಕ ಪೊಲೀಸರು ಸಾರ್ವಜನಿಕರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬರುವ 'ಅಧಿಕ ಲಾಭ'ದ ಜಾಹೀರಾತುಗಳನ್ನು ನಂಬದಂತೆ ತಿಳಿಸಿದ್ದಾರೆ. ಅಧಿಕೃತವಲ್ಲದ ಟ್ರೇಡಿಂಗ್ ಆ್ಯಪ್‌ಗಳಲ್ಲಿ ಹಣ ಹೂಡಿಕೆ ಮಾಡಬೇಡಿ. ಅಲ್ಲದೆ, ಅಪರಿಚಿತರು ವಾಟ್ಸ್ಆ್ಯಪ್ ಅಥವಾ ಟೆಲಿಗ್ರಾಂ ಮೂಲಕ ನೀಡುವ ಆರ್ಥಿಕ ಸಲಹೆಗಳನ್ನು ನಂಬಿ ಹಣ ವರ್ಗಾಯಿಸಬೇಡಿ ಎಂದು ಪತ್ರಿಕಾ ಪ್ರಕಟಣೆ ಮೂಲಕ ಪೊಲೀಸರು ಮನವಿ ಮಾಡಿದ್ದಾರೆ.
A major interstate fraud network has been busted by the Uttara Kannada CEN (Cyber Economic and Narcotics) police after a Honnavar-based businessman was cheated of ₹46.50 lakh through a fake online forex trading scheme. Shockingly, three of the arrested accused are bank relationship managers who helped the fraudsters by illegally opening accounts.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am